‘ಕಾಂತಾರ ಚಾಪ್ಟರ್ 1’ಎರಡು ವಾರಗಳಲ್ಲಿ ವಿಶ್ವಾದ್ಯಂತ 717.50 ಕೋಟಿ ರೂ. ಕಲೆಕ್ಷನ್

‘ಕಾಂತಾರ ಚಾಪ್ಟರ್ 1’ : ಸಿನಿಮಾ ಬಹುಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಬಿಡುಗಡೆ ಆಗಿ 17 ದಿನ ಕಳೆದರೂ ಸಹ ಈ ಸಿನಿಮಾಗೆ ಎಲ್ಲ ಕಡೆಗಳಲ್ಲಿ ಉತ್ತಮವಾಗಿ ಕಲೆಕ್ಷನ್ ಆಗುತ್ತಿದೆ. ರಿಷಬ್ ಶೆಟ್ಟಿ, ರುಕ್ಮಿಣಿ ವಸಂತ್ ಮುಖ್ಯ ಭೂಮಿಕೆ ನಿಭಾಯಿಸಿರುವ ಈ ಸಿನಿಮಾದ ಕಲೆಕ್ಷನ್ ವರದಿ ಇಲ್ಲಿದೆ.

ನಟ ರಿಷಬ್ ಶೆಟ್ಟಿ (Rishab Shetty) ಅವರು ಸೂಪರ್ ಸ್ಟಾರ್ ಆಗಿದ್ದಾರೆ. ಅತಿ ಬೇಡಿಕೆಯ ನಟನಾಗಿ, ನಿರ್ದೇಶಕನಾಗಿ ಅವರು ಗುರುತಿಸಿಕೊಂಡಿದ್ದಾರೆ. ಇದಕ್ಕೆಲ್ಲ ಕಾರಣ ಆಗಿರುವುದು ‘ಕಾಂತಾರ: ಚಾಪ್ಟರ್ 1’ (Kantara Chapter 1) ಸಿನಿಮಾದ ಗೆಲುವು. ಅಕ್ಟೋಬರ್ 2ರಂದು ಬಿಡುಗಡೆ ಆದ ಈ ಸಿನಿಮಾ ಇಂದಿಗೂ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಎಲ್ಲ ಭಾಷೆಗಳಲ್ಲೂ ಅಬ್ಬರಿಸುತ್ತಿದೆ. 17 ದಿನಗಳು ಕಳೆದರೂ ಕೂಡ ‘ಕಾಂತಾರ: ಚಾಪ್ಟರ್ 1’ ಸಿನಿಮಾಗೆ ಉತ್ತಮವಾಗಿಯೇ ಕಲೆಕ್ಷನ್ (Kantara Chapter 1 Collection) ಆಗುತ್ತಿದೆ. ಭಾರತದ ಬಾಕ್ಸ್ ಆಫೀಸ್​​ನಲ್ಲಿ ಈ ಸಿನಿಮಾದ ಗಳಿಕೆ 500 ಕೋಟಿ ರೂಪಾಯಿ ಮೀರಿದೆ.

ಈ ಬಗ್ಗೆ ಇಲ್ಲಿದೆ ವಿವರ Sacnilk ವರದಿ ಪ್ರಕಾರ ‘ಕಾಂತಾರ: ಚಾಪ್ಟರ್ 1’ ಸಿನಿಮಾ 17ನೇ ದಿನ ಭಾರತದ ಗಲ್ಲಾಪೆಟ್ಟಿಗೆಯಲ್ಲಿ 12.50 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಅಲ್ಲಿಗೆ, ಭಾರತದಲ್ಲಿ ಸಿನಿಮಾದ ಒಟ್ಟು ಕಲೆಕ್ಷನ್ 506 ಕೋಟಿ ರೂಪಾಯಿ ಆಗಿದೆ. ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ ಮುಂತಾದ ಭಾಷೆಯಲ್ಲಿ ಬಿಡುಗಡೆ ಆದ ಈ ಸಿನಿಮಾಗೆ ಜನರಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.

ಭಾರತದ ಆಚೆ ಕೂಡ ಹಲವು ದೇಶಗಳಲ್ಲಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆಗಿ ಉತ್ತಮವಾಗಿ ಪ್ರದರ್ಶನ ಕಂಡಿದೆ. ‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆಯೇ ಹಂಚಿಕೊಂಡಿರುವ ಮಾಹಿತಿ ಪ್ರಕಾರ, ಎರಡು ವಾರಗಳಲ್ಲಿ ಈ ಸಿನಿಮಾಗೆ ವಿಶಾದ್ಯಂತ 717.50 ಕೋಟಿ ರೂಪಾಯಿ ಆಗಿದೆ. ಇನ್ನೂ ಹೆಚ್ಚಿನ ಕಲೆಕ್ಷನ್ ಮಾಡುವ ಸಾಧ್ಯತೆ ದಟ್ಟವಾಗಿದೆ.

ಭಾನುವಾರ (ಅಕ್ಟೋಬರ್ 19) ಕೂಡ ಅನೇಕ ಕಡೆಗಳಲ್ಲಿ ಬುಕಿಂಗ್ ಚೆನ್ನಾಗಿದೆ. ಅಲ್ಲದೇ, ದೀಪಾವಳಿ ಹಬ್ಬದ ರಜೆ ಬಂದಿರುವುದರಿಂದ ಚಿತ್ರಮಂದಿರಕ್ಕೆ ಬರುವ ಪ್ರೇಕ್ಷಕರ ಸಂಖ್ಯೆ ಹೆಚ್ಚುವ ನಿರೀಕ್ಷೆ ಜಾಸ್ತಿ ಇದೆ. ಈ ಎಲ್ಲದರ ಪರಿಣಾಮವಾಗಿ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಇನ್ನೂ ಉತ್ತಮವಾಗಿ ಕಲೆಕ್ಷನ್ ಮಾಡಲಿದೆ ಎಂದು ನಿರೀಕ್ಷಿಸಲಾಗಿದೆ.

‘ಕಾಂತಾರ: ಚಾಪ್ಟರ್ 1’ ಸಿನಿಮಾದಿಂದ ‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆಗೆ ಭರ್ಜರಿ ಲಾಭ ಆಗಿದೆ. ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರ ಖ್ಯಾತಿ ಹೆಚ್ಚಾಗಿದೆ. ನಟಿ ರುಕ್ಮಿಣಿ ವಸಂತ್ ಅವರು ಪ್ಯಾನ್ ಇಂಡಿಯಾ ನಟಿಯಾಗಿ ಫೇಮಸ್ ಆಗಿದ್ದಾರೆ. ಪರಭಾಷೆ ಮಂದಿ ಮತ್ತೆ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತಾಗಿದೆ. ರಿಷಬ್ ಶೆಟ್ಟಿ ಅವರ ಮುಂದಿನ ಸಿನಿಮಾಗಳ ಬಗ್ಗೆ ನಿರೀಕ್ಷೆ ಹೆಚ್ಚಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!