ಎಲ್ಲೆಂದರಲ್ಲಿ ಕಸ ಎಸೆಯುತ್ತಿದ್ದೀರಾ ಹುಷಾರ್ : ನಿಮ್ಮ ಮನೆ ಮುಂದೆಯೇ ಬೀಳಲಿದೆ ರಾಶಿ ರಾಶಿ ತ್ಯಾಜ್ಯ!

ಸಾಕಷ್ಟು ಜನ ಜಾಗೃತಿ ಬಳಿಕವೂ ಬೆಂಗಳೂರು ನಗರದಲ್ಲಿ ಖುಷಿ ಬಂದಂತೆ ಕಸ ಎಸೆದು ಹೋಗುವ ಪ್ರಕರಣಗಳು ನಿಂತಿಲ್ಲ. ಹೀಗಾಗಿ ಈ ವಿಚಾರದಲ್ಲಿ ಒಂದಿಷ್ಟು ಕಠಿಣ ಕ್ರಮಗಳನ್ನ ಕೈಗೊಳ್ಳಲು ಗ್ರೇಟರ್​ ಬೆಂಗಳೂರು ಪ್ರಾಧಿಕಾರ ನಿರ್ಧರಿಸಿದೆ. ಕಸ ಎಸೆಯುವವರ ಮನೆ ಬಾಗಿಲಲ್ಲೇ ಲೋಡ್​ಗಟ್ಟಲೆ ಕಸ ಸುರಿಯಲು ತೀರ್ಮಾನಿಸಿದೆ. ಜೊತೆಗೆ ದಂಡವನ್ನೂ ವಿಧಿಸಲಿದೆ.

ಬೆಂಗಳೂರು: ಎಲ್ಲೆಂದರಲ್ಲಿ ಕಸ ಎಸೆಯೋ ಅಭ್ಯಾಸ ಬೆಳೆಸಿಕೊಂಡಿದ್ದೀರಾ? ಹಾಗಿದ್ದಾರೆ ನಿಮ್ಮ ಮನೆ ಮುಂದೆಯೇ ಇನ್ನು ಲೋಡ್​ಗಟ್ಟಲೆ ಕಸ ಬಂದು ಬೀಳಲಿದೆ. ಹೌದು, ಸಾಕಷ್ಟು ಜನಜಾಗೃತಿ ಬಳಿಕವೂ ಹಲವು ಮಂದಿ ತಮಗೆ ಖುಷಿ ಬಂದಲ್ಲಿ ಕಸ ಎಸೆದು ಹೋಗುವ ಅಭ್ಯಾಸ ಮುಂದುವರಿಸಿದ್ದಾರೆ. ಇಂತಹ ಪ್ರಕರಣಗಳ ಕಡಿವಾಣಕ್ಕೆ ಮುಂದಾಗಿರುವ ಗ್ರೇಟರ್​ ಬೆಂಗಳೂರು ಪ್ರಾಧಿಕಾರ (GBA) ಇಂತಹದ್ದೊಂದು ಕಠಿಣ ಕ್ರಮಕ್ಕೆ ಮುಂದಾಗಿದೆ. ಕಸ ಎಸೆಯುವವರ ಮನೆ ಮುಂದೆಯೇ ಕಸ ಸುರಿಯುವ ಜೊತೆಗೆ ದಂಡ ವಿಧಿಸಲು ತೀರ್ಮಾನಿಸಿದೆ.

ಕಸ ಎಸೆದು ಹೋಗುವುದನ್ನು ಮೊದಲು ಮಾರ್ಷಲ್​ಗಳು ವಿಡಿಯೋ ಮಾಡಿಕೊಳ್ಳಲಿದ್ದಾರೆ. ಆ ಬಳಿಕ ಅಂತವರ ಮನೆಗಳನ್ನು ಶೀಘ್ರ ಪತ್ತೆಮಾಡಿ ಅವರ ಮನೆ ಮುಂದೆಯೇ ಕಸ ಸುರಿಯಲಾಗುತ್ತೆ. ಇಷ್ಟೇ ಅಲ್ಲ, ಮನೆ ಮುಂದೆ ಸರಿಯಲಾದ ಕಸದ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಲೂ ತೀರ್ಮಾನಿಸಲಾಗಿದ್ದು, ಆ ಮೂಲಕ ಕಸ ಎಸೆಯುವವರನ್ನು ಜಗಜ್ಜಾಹೀರಗೊಳಿಸಲು ಜಿಬಿಎ ಮುಂದಾಗಿದೆ. ವಿಂಗಡಣೆ ಮಾಡದ ತ್ಯಾಜ್ಯ, ಪ್ಲ್ಯಾಸ್ಟಿಕ್​ ಮತ್ತು ಬಾಕ್ಸ್​ಗಳನ್ನ ಎಸೆದು ಹೋಗುವವರ ವಿಡಿಯೋಗಳನ್ನ ದಾಖಲಿಸುವ ಕೆಲಸ ಈಗಾಗಲೇ ಆರಂಭವಾಗಿದ್ದು, ಕಳೆದ ಒಂದು ವಾರದಿಂದ ಈ ಬಗ್ಗೆ ಮಾರ್ಷಲ್​ಗಳು ಕಾರ್ಯನಿರತರಾಗಿದ್ದಾರೆ. ಕಸ ಎಸೆದು ಹೋಗುವವರ ಮನೆಗಳನ್ನ ಸ್ಥಳೀಯ ಪೊಲೀಸರ ಜೊತೆಗೆ ಮಾರ್ಷಲ್​ಗಳು ತಲುಪಲಿದ್ದು, ಅವರ ಮನೆ ಬಾಗಿಲಲ್ಲೇ ಕಸದ ಲೋಡ್​ ಅನ್ನು ಹಾಕಲಾಗುತ್ತೆ. ಇದರ ಜೊತೆಗೆ ದಂಡವನ್ನೂ ವಿಧಿಸಲು ತೀರ್ಮಾನಿಸಲಾಗಿದೆ.

2-10 ಸಾವಿರ ರೂ.ವರೆಗೆ ದಂಡ
ಮನೆಮುಂದೆ ಸುರಿಯಲಾದ ಕಸವನ್ನ ಕೆಲ ಗಂಟೆಗಳ ಬಳಿಕ ತೆರವು ಮಾಡಲಾಗುತ್ತದೆ. ಆದರೆ 2 ರಿಂದ 10 ಸಾವಿರ ರೂಪಾಯಿಗಳ ವರೆಗಿನ ದಂಡವನ್ನು ಎಲ್ಲೆಂದರಲ್ಲಿ ಕಸ ಹಾಕುವವರು ಪಾವತಿಸಬೇಕು. ಈ ಬಗ್ಗೆ ತಕರಾರು, ವಾದ ಮಾಡುವಂತೆಯೂ ಇಲ್ಲ. ನಾವು ಕಸ ಎಸೆದಿಲ್ಲ ಎಂದರೂ ಮಾರ್ಷಲ್​ ಗಳು ಅದಾಗಲೇ ಸೆರೆ ಹಿಡಿದ ನೀವು ಕಸ ಎಸೆಯುವ ವಿಡಿಯೋ ತೋರಿಸಲಿದ್ದಾರೆ. ಜನ ಜಾಗೃತಿ ಕೆಲಸಗಳ ಮೂಲಕ ನಗರದಲ್ಲಿದ್ದ 869 ಬ್ಲ್ಯಾಕ್​ ಸ್ಪಾಟ್​ಗಳನ್ನ 150ಕ್ಕೆ ಇಳಿಸುವಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಕಂಪನಿ ನಿಯಮಿತ ಈಗಾಗಲೇ ಸಫಲವಾಗಿದೆ. ಈ ನಡುವೆ ನಗರವನ್ನು ಸ್ವಚ್ಛವಾಗಿ ಇರಿಸುವಂತೆ ಉಪ ಮುಖ್ಯಮಂತ್ರಿ ಮತ್ತು ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್​ ಕೂಡ ಸೂಚನೆ ನೀಡಿದ್ದಾರೆ. ಹೀಗಾಗಿ ಕಸ ಎಸೆಯುವವರ ವಿರುದ್ಧ ಮತ್ತಷ್ಟು ಕಠಿಣ ಕ್ರಮಕ್ಕೆ ಮುಂದಾಗಿದ್ದೇವೆ ಎಂದು BSWML ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕರೀಗೌಡ ತಿಳಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!