ಭಾರತದ ಶ್ರೀಮಂತ ಉದ್ಯಮಿ ರತನ್‌ ಟಾಟಾ ಇನ್ನಿಲ್ಲ

ಭಾರತದ ಶ್ರೀಮಂತ ಉದ್ಯಮಿ ರತನ್‌ ಟಾಟಾ ಇನ್ನಿಲ್ಲ

ಭಾರತದ ಶ್ರೀಮಂತ ಉದ್ಯಮಿ ಮತ್ತು ಟಾಟಾ ಸನ್ಸ್‌ ಚೇರ್ಮನ್‌ ಆಗಿರೋ ರತನ್‌ ಟಾಟಾ ಅವರು ತಮ್ಮ ಕೊನೆಯುಸಿರೆಳೆದಿದ್ದಾರೆ. ಐಸಿಯುನಲ್ಲಿ ಇಟ್ಟು ಟ್ರೀಟ್ಮೆಂಟ್​ ನೀಡಿದ್ರೂ ಚಿಕಿತ್ಸೆ ಫಲಿಸದೆ ರತನ್​​ ಟಾಟಾ ತಮ್ಮ ಜೀವನದ ಅಂತಿಮ ಉಸಿರು ನಿಲ್ಲಿಸಿದ್ದಾರೆ.

ರತನ್‌ ಟಾಟಾ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಎಂದಿನಂತೆಯೇ ಜನರಲ್​ ಚೆಕಪ್​ಗಾಗಿ ಆಸ್ಪತ್ರೆಗೆ ಭೇಟಿ ನೀಡಿರುವುದಾಗಿ ತಾವೇ ತಮ್ಮ ಸೋಷಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೀಗ, ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ನೀಡಿದ್ರೂ ಫಲಿಸದೆ ನಿಧನರಾಗಿದ್ದಾರೆ.

ರತನ್ ಟಾಟಾ ಅವರು ಅಮೆರಿಕದ ಕಾರ್ನೆಲ್ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಿ ವಾಸ್ತುಶಿಲ್ಪದಲ್ಲಿ ಪದವಿ ಪಡೆದರು. ನಂತರ, ಅವರು ಹಾರ್ವರ್ಡ್ ಬ್ಯುಸಿನೆಸ್ ಸ್ಕೂಲ್‌ನಲ್ಲಿ ಮ್ಯಾನೆಜ್‌ಮೆಂಟ್‌ ಓದಿದರು. 1961 ರಲ್ಲಿ ಟಾಟಾ ಗ್ರೂಪ್‌ಗೆ ಸೇರಿದ ರತನ್‌ ಟಾಟಾ ಆರಂಭದಲ್ಲಿ ಕೆಳ ಹಂತದ ಕೆಲಸ ಮಾಡಿದರು. ಜೆಮ್‌ಶೆಡ್‌ಪುರದ ಟಾಟಾ ಸ್ಟೀಲ್‌ ಕಂಪನಿಯಲ್ಲಿ ಸಹಾಯಕರಾಗಿ ಕೆಲಸ ಮಾಡಿದರು. 1991ರಲ್ಲಿ ರತನ್ ಟಾಟಾ ಅವರು ಟಾಟಾ ಸಮೂಹದ ಅಧ್ಯಕ್ಷರಾದರು. ಟಾಟಾ ಅವರ ನಾಯಕತ್ವದಲ್ಲಿ, ಸಮೂಹವು ಜಾಗತಿಕ ಮಾರುಕಟ್ಟೆಗಳಿಗೆ ವಿಸ್ತರಿಸಿತು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!