ಸಿಎಂ ತವರು ಜಿಲ್ಲೆಯಲ್ಲಿ ಮತ್ತೆ ಬಾಲ ಬಿಚ್ಚಿದ ಮೈಕ್ರೋ ಫೈನಾನ್ಸ್…! ಸಾಲ ಮರುಪಾವತಿಸದ ರೈತನ ಮನೆ ಜಪ್ತಿ…ಬೀದಿಗೆ ಬಂದ ಕುಟುಂಬ…

ನಂಜನಗೂಡು: ಸಿಎಂ ತವರಿನಲ್ಲಿ ಮೈಕ್ರೋ ಫೈನಾನ್ಸ್ ಮತ್ತೆ ಬಾಲ ಬಿಚ್ಚಿದೆ.ಸಾಲದ ಕಂತು ಕಟ್ಟಿಲ್ಲ ಎಂದು ಮನೆ ಜಪ್ತಿ ಮಾಡಿದೆ.
ನಂಜನಗೂಡು ತಾಲ್ಲೂಕಿನ ಕಂದೇಗಾಲ‌ ಗ್ರಾಮದಲ್ಲಿ ಘಟನೆ ಬೆಳಕಿಗೆ ಬಂದಿದೆ.ಕಾಲವಕಾಶ ಕೋರಿದ್ದರೂ ಸ್ಪಂದಿಸದ ಫೈನಾನ್ಸ್ ನ್ಯಾಯಾಲಯದ ಆದೇಶ ತಂದು ಜಪ್ತಿ ಮಾಡಿದ್ದಾರೆ.ಇದೀಗ ಸಾಲ ಪಡೆದ ಕುಟುಂಬ ಬೀದಿಗೆ ಬಂದಿದೆ.

ಮನೆ ನಿರ್ಮಾಣ ಸಂಭಂದ ಇಕ್ವೀಟಾಸ್ ಸ್ಮಾಲ್ ಫೈನಾನ್ಸ್ ನಲ್ಲಿ ಚಿನ್ನಸ್ವಾಮಿ 2023 ರಲ್ಲಿ 2,70,000 ರೂ ಸಾಲ‌ಪಡೆದಿದ್ದರು. ಚಿನ್ನಸ್ವಾಮಿ.
ಈಗಾಗಲೆ 19 ಕಂತುಗಳ 189000 ಸಾಲ‌ ಮರುಪಾವತಿಸಿದ್ದಾರೆ. ಚಿನ್ನಸ್ವಾಮಿ ಪತ್ನಿ ಸಹ ಇಕ್ವೀಟಾಸ್ ಫೈನಾನ್ಸ್ ನಲ್ಲಿ ಗಂಪು ಸಾಲ ಪಡೆದಿದ್ದರು.ಮನೆ ಸಾಲ‌ಮರುಪಾವತಿ ಕಂತಿನ ಹಣವನ್ನು ಗುಂಪುಸಾಲಕ್ಕೆ ಜಮೆ ಮಾಡಿಕೊಂಡಿದೆ ಎಂದು ಚಿನ್ನಸ್ವಾಮಿ ಆರೋಪವಾಗಿದೆ.ತಮ್ಮ ಅನುಮತಿ ಪಡೆಯೆದೆ ಸುಮಾರು 60 ಸಾವಿರಕ್ಕೂ ಹೆಚ್ವು ಹಣ ಗುಂಪು ಸಾಲಕ್ಕೆ ಜಮೆ ಮಾಡಿಕೊಂಡಿದ್ದಾರೆ.ಇದೀಗ ಏಕಾಏಕಿ ಮನೆ ಸಾಲದ ಕಂತು ಕಟ್ಟಿಲ್ಲವೆಂದು ಮನೆ ಜಪ್ತಿ ಮಾಡಿದ್ದಾರೆ.

ಸಾಲ ಮರುಪಾವತಿಗಾಗಿ ಚಿನ್ನಸ್ವಾಮಿ ತಹಸೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಕಾಲಾವಕಾಶ ಕೇಳಿದ್ದರು. ಮನೆ ಜಪ್ತಿ ತಡೆಯುವಂತೆ ಜಿಲ್ಲಾಧಿಕಾರಿ ಹಾಗೂ ತಹಶಿಲ್ದಾರ್ ಗೂ ಮನವಿ ಮಾಡಿದ್ದರು.
ಯಾವುದಕ್ಕು ತಲೆಕೆಡೆಸಿಕೊಳ್ಳದ ಫೈನಾನ್ಸ್ ಸಾಲ ಮರುಪಾವತಿ ಮಾಡುವಂತೆ ತಾಕೀತು ಮಾಡಿತ್ತು.ನೆನ್ನೆ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆ ಜಪ್ತಿ ಮಾಡಿ ನೋಟಿಸ್ ಅಂಟಿಸಿದ್ದಾರೆ.

ಇದೀಗ ಮನೆ ಜಪ್ತಿ ಕಾರಣ ಚಿನ್ನಸ್ವಾಮಿ ಮತ್ತು ಕುಟುಂಬ ಬೀದಿಗೆ ಬಿದ್ದಂತಾಗಿದೆ. ಮನೆ ಜಪ್ತಿ ತೆರವು ಗೊಳಿಸುವಂತೆ ಹುಲ್ಲಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಸಿಎಂ ತವರು ಕ್ಷೇತ್ರದಲ್ಲೇ ಮತ್ತೆ ಮೈಕ್ರೋ ಫೈನಾನ್ಸ್ ಬಾಲ ಬಿಚ್ಚಿದೆ…

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!