ಆನೆ ರಕ್ಷಣೆಗೆ ಬೆಂಗಳೂರಿನಿಂದ ಬಂದ ಕ್ರೇನ್​​, 4 ದಿನಗಳಿಂದ ನಾಲೆಯಲ್ಲಿ ಸಿಲುಕಿ ಆನೆ ಪರದಾಟ !

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ‌ ಶಿವವಸಮುದ್ರ ಬಳಿಯಿರುವ ನಾಲೆಯಲ್ಲಿ ಮರಿಯಾನೆಯೊಂದು ಸಿಲುಕಿಕೊಂಡಿದೆ. ಕಳೆದ ನಾಲ್ಕು ದಿನಗಳಿಂದ ನಾಲೆಯಲ್ಲಿದ್ದು, ಅದರ ರಕ್ಷಣಾ ಕಾರ್ಯ ಇವತ್ತೂ ಮುಂದುವರಿದಿದೆ.
ಆನೆ ಆಪರೇಷನ್

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ‌ ಶಿವವಸಮುದ್ರ ಬಳಿಯಿರುವ ನಾಲೆಯಲ್ಲಿ ಮರಿಯಾನೆಯೊಂದು ಸಿಲುಕಿಕೊಂಡಿದೆ. ಕಳೆದ ನಾಲ್ಕು ದಿನಗಳಿಂದ ನಾಲೆಯಲ್ಲಿದ್ದು, ಅದರ ರಕ್ಷಣಾ ಕಾರ್ಯ ಇವತ್ತೂ ಮುಂದುವರಿದಿದೆ.
ನಾಲೆಯಲ್ಲಿ ನೀರು

ಖಾಸಗಿ ವಿದ್ಯುತ್ ಉತ್ಪಾದನಾ ಘಟಕದ ಬಳಿ ನೀರು ಕುಡಿಯಲು ಬಂದು ನಾಲೆಯಲ್ಲಿ ಸಿಲುಕಿಕೊಂಡಿದೆ. ನಿನ್ನೆ ಕೂಡ ಅರಣ್ಯ ಇಲಾಖೆ ಆನೆಯನ್ನ ಮೇಲೆತ್ತಲು ಪ್ರಯತ್ನ ಮಾಡಿತ್ತು. ಆದರೆ ಯಾವುದೇ ಪ್ರಯೋಜ ಆಗಿರಲಿಲ್ಲ. ನಾಲೆಯಲ್ಲಿ ನೀರು ಹೆಚ್ಚಾಗಿದ್ದ ಕಾರಣ ಕಾರ್ಯಾಚರಣೆಗೆ ತೊಡಕಾಗಿತ್ತು. ಇಂದು ನಾಲೆಯ ನೀರನ್ನು ತಗ್ಗಿಸಿ ಕಾರ್ಯಾಚರಣೆ ಆರಂಭಿಸಲಾಗಿದೆ.

ಹೈಡ್ರಾಲಿಕ್ ಕ್ರೇನ್ ಸಹಾಯದಿಂದ ರಕ್ಷಣೆ
ಆನೆ ರಕ್ಷಣೆಗೆ ಬೆಂಗಳೂರಿನಿಂದ ಹೈಡ್ರಾಲಿಕ್ ಕ್ರೇನ್​ಗಳನ್ನು ತರಲಾಗಿದೆ. ಇನ್ನು ಮೈಸೂರಿನಿಂದ ಅರವಳಿಕೆ ತಜ್ಞರು, ಅರಣ್ಯ ಸಿಬ್ಬಂದಿ ಬಂದಿದ್ದಾರೆ. ಮಂಡ್ಯ ಡಿಎಫ್ಓ, ಮಳವಳ್ಳಿ ತಹಸಿಲ್ದಾರ್ ನೇತೃತ್ವದಲ್ಲಿ ಆನೆ ಕಾರ್ಯಾಚರಣೆ ನಡೆಯುತ್ತಿದೆ.

ಆನೆ ಆರೋಗ್ಯದ ಬಗ್ಗೆ ಕಳವಳ
ಆನೆ ಸೊಂಡಿಲಲ್ಲಿ ಫಂಗಸ್ ಆಗಿರುವ ಸಾಧ್ಯತೆ ಹೆಚ್ಚಿದೆ. ಕಳೆದ ಎರಡು ದಿನಗಳಿಂದ ನೀರಿನಲ್ಲೇ ನಿಂತಿದೆ. ಹೀಗಾಗಿ ಸೊಂಡಿಲಿನ ಒಂದು ಭಾಗ ಬಿಳಿ ಬಣ್ಣಕ್ಕೆ ತಿರುಗಿದೆ. ಸೊಂಡಿಲ ತುದಿ ಭಾಗದಲ್ಲಿ ಇನ್ಫೆಂಕ್ಷನ್ ಆಗಿರುವ ಸಾಧ್ಯತೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!