ಯಾವಾಗ ಬೇಕಾದರೂ ಡಿಕೆ ಶಿವಕುಮಾರ್ ಸಿಎಂ ಆಗಬಹುದು: ರವಿ ಗಣಿಗ ಸ್ಫೋಟಕ ಹೇಳಿಕೆ

ಬೆಂಗಳೂರು: ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂಬುದು ತಮ್ಮ ಮನದ ಆಸೆ ಎಂದು ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಯಾವಾಗ ಬೇಕಾದರೂ ಸಿಎಂ ಆಗಬಹುದು ಎಂದಿದ್ದಾರೆ. ಆದರೆ, ಇದೊಂದು ಹೈಕಮಾಂಡ್ ನಿರ್ಧಾರವಾಗಿದ್ದು, ಸೂಕ್ತ ಸಮಯ ಬಂದಾಗ ಅದು ನಡೆಯಲಿದೆ ಎಂದು ತಿಳಿಸಿದ್ದಾರೆ. ಪಕ್ಷದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಬಣಗಳಿಲ್ಲ. 140 ಶಾಸಕರು ಇಬ್ಬರೂ ನಾಯಕರ ಪರವಾಗಿಯೂ ಇದ್ದಾರೆ. ಸಿದ್ದರಾಮಯ್ಯ ಅವರು ಪ್ರಸ್ತುತ ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಜನರಿಗೆ ನೀಡಿದ ಗ್ಯಾರಂಟಿಗಳನ್ನು ಈಡೇರಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹೈಕಮಾಂಡ್ ಯಾವುದೇ ನಿರ್ಧಾರ ತೆಗೆದುಕೊಂಡರೂ, ಅದಕ್ಕೆ ಪಕ್ಷದ ಎಲ್ಲರೂ ಬದ್ಧರಾಗಿರುತ್ತಾರೆ. ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಇಬ್ಬರೂ ಪಕ್ಷಕ್ಕಾಗಿ ತ್ಯಾಗ ಮಾಡಿದ್ದಾರೆ ಮತ್ತು ಹೋರಾಟ ನಡೆಸಿದ್ದಾರೆ ಎಂದು ರವಿಕುಮಾರ್ ಗಣಿಗ ತಿಳಿಸಿದ್ದಾರೆ.

Related Posts

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ…

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ವರ್ಧಿ ರಜತ್ ವಿರುದ್ಧ ಮತ್ತೊಂದು ಎಫ್‌ಐಆರ್‌ದಾಖಲಾಗಿದೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ ಅಲಿಯಾಸ್ ಡಾಗ್ ಸತೀಶ್‌ ಅವರು ದೂರು ನೀಡಿದ್ದು ಚಾಮರಾಜಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಬಿಎನ್‌ಎಸ್‌ ಸೆಕ್ಷನ್‌ 351 ,…

You Missed

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?