ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆ

ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆ

ಮೈಸೂರು : ಮೈಸೂರು ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್‌ಗೆ ೨೦೨೬-೨೯ರ ಅವಧಿಯ ಆಡಳಿತ ಮಂಡಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಎಲ್ಲಾ ಹುದ್ದೆಗಳಿಗೆ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೈಸೂರಿನ ಏರ್‌ಲೈನ್ಸ್ ಹೋಟೆಲ್ ಸಭಾಂಗಣದಲ್ಲಿ ಜ.೨೨ರಂದು ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಚುನಾವಣಾಧಿಕಾರಿಯಾಗಿ ಲಾಗೈಡ್ ಮಾಸ ಪತ್ರಿಕೆಯ ಸಂಪಾದಕರಾದ ಹೆಚ್.ಎನ್.ವೆಂಕಟೇಶ್ ಅವರು ಕಾರ್ಯನಿರ್ವಹಿಸಿದ್ದು, ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸೇರಿದಂತೆ ಎಲ್ಲಾ ಸ್ಥಾಮನಗಳಿಗೆ ಸಲ್ಲಿಸಿದ್ದ ನಾಮಪತ್ರಗಳನ್ನು ಪರಿಶೀಲಿಸಿ, ಎಲ್ಲಾ ಸ್ಥಾನಗಳಿಗೂ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಘೋಷಿಸಿದರು.

ನೂತನ ಪದಾಧಿಕಾರಿಗಳಾಗಿ ಅಧ್ಯಕ್ಷರಾಗಿ ಪ್ರಗತಿಗೋಪಾಲಕೃಷ್ಣ, ಉಪಾಧ್ಯಕ್ಷರಾಗಿ ಕೆ.ಹೆಚ್.ಚಂದ್ರು, ಪ್ರದಾನ ಕಾರ್ಯದರ್ಶಿಯಾಗಿ ಲಕ್ಷ್ಮೀನಾರಾಯಣ್ ಯಾದವ್ ಹಾಗೂ ಖಜಾಂಚಿಯಾಗಿ ಉದಯಶಂಕರ್ ಅವರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಘೋಷಿಸಿ, ಪ್ರಮಾಣ ಪತ್ರ ವಿತರಿಸಿದರು. ಈ ಸಂದರ್ಭದಲ್ಲಿ ಸದಸ್ಯರಾದ ಅನುರಾಗ ಬಸವರಾಜು, ಗವಿಮಠ ರವಿ, ಎಸ್.ಆರ್.ಮಧುಸೂಧನ್, ನಾಗೇಶ್ ಪಾಣಪತ್ತಲೆ, ಎ.ನಂದನ್ ಉಪಸ್ಥಿತರಿದ್ದರು. ಫೋಟೋ ಕ್ಯಾಪ್ಷನ್ ಮೈಸೂರು ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್‌ನ ನೂತನ ಪಧಾಧಿಕಾರಿಗಳಿಗೆ ಚುನಾವಣಾಧಿಕಾರಿ ಲಾಗೈಡ್ ಮಾಸ ಪತ್ರಿಕೆಯ ಸಂಪಾಕರಾದ ಹೆಚ್.ಎನ್.ವೆಂಕಟೇಶ್ ಪ್ರಮಾಣ ಪತ್ರ ವಿತರಿಸಿದರು.

  • Related Posts

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

      ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

      ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

    You Missed

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!