ಇಂದು ಆರ್‌ಸಿಬಿ – ಡೆಲ್ಲಿ ಫೈನಲ್‌ : ಎರಡನೇ ಕಪ್ ಮೇಲೆ ಆರ್‌ಸಿಬಿ ಕಣ್ಣು

ಇಂದು ಆರ್‌ಸಿಬಿ – ಡೆಲ್ಲಿ ಫೈನಲ್‌ : ಎರಡನೇ ಕಪ್ ಮೇಲೆ ಆರ್‌ಸಿಬಿ ಕಣ್ಣು

ಮಹಿಳಾ ಪ್ರೀಮಿಯರ್ ಲೀಗ್‌ನ 4ನೇ ಸೀಸನ್‌ನ ಫೈನಲ್‌ನಲ್ಲಿ ಆರ್‌ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಫೈಟ್ ನಡೆಸಲಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲೀಗ್ ಹಂತದಲ್ಲಿ ಅದ್ಭುತ ಪ್ರದರ್ಶನ ನೀಡಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯುವ ಮೂಲಕ ನೇರವಾಗಿ ಫೈನಲ್‌ಗೆ ಲಗ್ಗೆ ಇಟ್ಟಿತ್ತು. ಇನ್ನೊಂದೆಡೆ, ಡೆಲ್ಲಿ ಕ್ಯಾಪಿಟಲ್ಸ್ ತಂಡವು ಎಲಿಮಿನೇಟರ್ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡವನ್ನು ಸೋಲಿಸಿ ಫೈನಲ್‌ ಪ್ರವೇಶಿಸಿದೆ.

ಎರಡನೇ ಸೀಸನ್‌ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದ ಆರ್‌ಸಿಬಿ ತಂಡವು ಈ ಬಾರಿ ಕೂಡ ಭರ್ಜರಿ ಫಾರ್ಮ್‌ನಲ್ಲಿದೆ. ಸ್ಮೃತಿ ಮಂಧಾನ ಮತ್ತು ರಿಚಾ ಘೋಷ್ ಅವರಂತಹ ಆಟಗಾರ್ತಿಯರು ತಂಡದ ಬಲವಾಗಿದ್ದಾರೆ. ಮತ್ತೊಂದೆಡೆ ಮೂರು ಬಾರಿ ಫೈನಲ್ ತಲುಪಿರುವ ಡೆಲ್ಲಿ ಕ್ಯಾಪಿಟಲ್ಸ್ ಮೊದಲ ಬಾರಿಗೆ ಟ್ರೋಫಿ ಗೆಲ್ಲುವ ತವಕದಲ್ಲಿದೆ.

ಒಟ್ಟಿನಲ್ಲಿ ವಡೋದರಾದಲ್ಲಿ ನಡೆಯಲಿರುವ ಈ ಫೈನಲ್ ಪಂದ್ಯವು ಕೋಟಿಗಟ್ಟಲೆ ಕ್ರಿಕೆಟ್ ಪ್ರೇಮಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ. ‘ಈ ಸಲವೂ ಕಪ್ ನಮ್ದೇ’ ಎನ್ನುತ್ತಿರುವ ಆರ್‌ಸಿಬಿ ಅಭಿಮಾನಿಗಳು ತಮ್ಮ ನೆಚ್ಚಿನ ತಂಡದ ಗೆಲುವಿಗಾಗಿ ಕಾತರದಿಂದ ಕಾಯುತ್ತಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!