ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ವಿವಾಹ

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ಮದುವೆ ಫೆಬ್ರವರಿ 26ರಂದು ನಡೆಯಲಿದೆ. ಕುಟುಂಬದವರು ಮತ್ತು ಕೆಲವೇ ಕೆಲವು ಆಪ್ತರು ಮಾತ್ರ ಈ ಸೆಲೆಬ್ರಿಟಿ ಮದುವೆಗೆ ಹಾಜರಿ ಹಾಕಲಿದ್ದಾರೆ. ಮದುವೆ ತಯಾರಿಯಲ್ಲಿ ಇರುವ ರಶ್ಮಿಕಾ, ವಿಜಯ್ ಅವರು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಮದುವೆ ವಿಷಯ ಈಗ ಗುಟ್ಟಾಗಿ ಉಳಿದಿಲ್ಲ. ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿರುವ ಅವರು ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರೆ. ಅದಕ್ಕಾಗಿ ಸಕಲ ಸಿದ್ಧತೆ ನಡೆದಿದೆ. ಈಗಾಗಲೇ ಸಿನಿಮಾ ಕೆಲಸಗಳನ್ನು ಬದಿಗಿಟ್ಟು, ಮದುವೆ ತಯಾರಿಯಲ್ಲಿ ಅವರಿಬ್ಬರು ತೊಡಗಿಕೊಂಡಿದ್ದಾರೆ. ಸದ್ಯಕ್ಕಂತೂ ಸಖತ್ ಗಡಿಬಿಡಿ ಮಾಡುತ್ತಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಒಂದು ವಿಡಿಯೋ ವೈರಲ್ ಆಗಿದೆ. ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ.

ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ವಿವಾಹ ನಡೆಯಲಿ. ಮದುವೆ ಆಮಂತ್ರಣ ಪತ್ರಿಕೆ ವೈರಲ್ ಆಗಿದೆ. ಹಾಗಿದ್ದರೂ ಕೂಡ ಅವರು ಸಾರ್ವಜನಿಕವಾಗಿ ಈ ಬಗ್ಗೆ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ. ಕೇವಲ ಕುಟುಂಬದವರು ಮತ್ತು ಆಪ್ತರ ಸಮ್ಮುಖದಲ್ಲಿ ಮದುವೆ ನಡೆಯಲಿದೆ.

ಹಲವು ಸಿನಿಮಾಗಳನ್ನು ಒಪ್ಪಿಕೊಂಡಿರುವ ರಶ್ಮಿಕಾ ಮಂದಣ್ಣ ಅವರು ಈಗ ಬ್ರೇಕ್ ತೆಗೆದುಕೊಂಡಿದ್ದಾರೆ. ವಿಜಯ್ ದೇವರಕೊಂಡ ಕೂಡ ಮದುವೆ ಸಲುವಾಗಿ ಬಿಡುವು ಮಾಡಿಕೊಂಡಿದ್ದಾರೆ. ಅವರಿಬ್ಬರು ಈಗ ಹೈದರಾಬಾದ್​ನಿಂದ ಬೇರೆ ಕಡೆಗೆ ಹಾರಿದ್ದಾರೆ. ವಿಮಾನ ನಿಲ್ದಾಣಕ್ಕೆ ಪ್ರತ್ಯೇಕವಾಗಿ ಬಂದ ಅವರು ಪಾಪಪಾಜಿಗಳ ಕ್ಯಾಮೆರಾದಲ್ಲಿ ಸೆರೆ ಆಗಿದ್ದಾರೆ.

ಸಾಮಾನ್ಯವಾಗಿ ವಿಮಾನ ನಿಲ್ದಾಣದಲ್ಲಿ ಪಾಪರಾಜಿಗಳನ್ನು ನೋಡಿದಾಗ ರಶ್ಮಿಕಾ ಮಂದಣ್ಣ ಅವರು ಪೋಸ್ ನೀಡುತ್ತಾರೆ. ಸಾಧ್ಯವಾದರೆ ಒಂದೆರಡು ಮಾತನಾಡುತ್ತಾರೆ. ವಿಜಯ್ ದೇವರಕೊಂಡ ಕೂಡ ಹಾಗೆಯೇ ಮಾಡುತ್ತಾರೆ. ಆದರೆ ಈ ಬಾರಿ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಪಾಪರಾಜಿಗಳ ಕ್ಯಾಮೆರಾಗೆ ಪೋಸ್ ನೀಡಲು ಕೂಡ ಅವರು ಒಂದು ಕ್ಷಣ ನಿಂತಿಲ್ಲ. ಸಖತ್ ಗಡಿಬಿಡಿಯಲ್ಲಿ ಅವರು ಮುಂದೆ ಸಾಗಿದ್ದಾರೆ.

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರಿಗೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಇದೆ. ಕನ್ನಡ, ತಮಿಳು, ತೆಲುಗು, ಹಿಂದಿ ಭಾಷೆಯ ಚಿತ್ರರಂಗದಲ್ಲಿ ರಶ್ಮಿಕಾ ಮಂದಣ್ಣ ಕೆಲಸ ಮಾಡಿದ್ದಾರೆ. ವಿಜಯ್ ದೇವರಕೊಂಡ ಕೂಡ ತೆಲುಗು ಮತ್ತು ಬಾಲಿವುಡ್​​ನಲ್ಲಿ ಫೇಮಸ್ ಆಗಿದ್ದಾರೆ. ಈ ಜೋಡಿಯ ಮದುವೆಗೆ ಯಾರೆಲ್ಲ ಬರುತ್ತಾರೆ ಎಂಬುದನ್ನು ನೋಡಲು ಅಭಿಮಾನಿಗಳು ಕಾದಿದ್ದಾರೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!