ವಿಜಯಪುರದಲ್ಲಿ ಜೆಡಿಎಸ್ ಬೃಹತ್ ಸಮಾವೇಶ

ಹೌದು ಜೆಡಿಎಸ್‌ ಸ್ಥಾಪನೆಯಾಗಿ 25 ವರ್ಷ ಪೂರ್ಣಗೊಂಡಿರುವ ನಿಮಿತ್ತ ಕಿತ್ತೂರು ಕರ್ನಾಟಕ ಭಾಗದಲ್ಲಿ ‘ಬೆಳ್ಳಿಹಬ್ಬ’ ಆಚರಿಸುವ ಸಲುವಾಗಿ ವಿಜಯಪುರ ನಗರದಲ್ಲಿ ಇಂದು ಬೃಹತ್ ಜನತಾ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.

ನಗರದ ಹೊರವಲಯದಲ್ಲಿರುವ ಸಿಂದಗಿ ಬೈಪಾಸ್‌ನಲ್ಲಿ ಜೆಡಿಎಸ್ ಜನತಾ ಸಮಾವೇಶ ಆಯೋಜನೆ ಮಾಡಲಾಗಿದೆ. ವಿಜಯಪುರ, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ ಸೇರಿದಂತೆ ಕಿತ್ತೂರು ಕರ್ನಾಟಕ ಭಾಗದ ಜಿಲ್ಲೆಗಳಿಂದ ಕಾರ್ಯಕರ್ತರು ಸಮಾವೇಶದಲ್ಲಿ ಭಾಗಿಯಾಗಿ . ಅಂದಾಜು ಸುಮಾರು ಒಂದು ಲಕ್ಷ ಜನ ಸೇರಿದ್ದರೆಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

ರಜತ ಮಹೋತ್ಸವ, ಜನತಾ ಸಮಾವೇಶ ಹೆಸರಿನಲ್ಲಿ ಕಿತ್ತೂರು ಕರ್ನಾಟಕ ಭಾಗದಲ್ಲಿ ಜೆಡಿಎಸ್ ಶಕ್ತಿ ಪ್ರದರ್ಶನ ಮಾಡಿದೆ .ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು, ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್‌.ಡಿ. ಕುಮಾರಸ್ವಾಮಿ, ಯುವ ಜನತಾದಳ ರಾಜ್ಯ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಎಂ. ಕೃಷ್ಣಾರೆಡ್ಡಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು, ಶಾಸಕ ರಾಜುಗೌಡ ಪಾಟೀಲ, ಮಾಜಿ ಶಾಸಕ ದೇವಾನಂದ ಚಹ್ವಾಣ, ಪಕ್ಷದ ಸಂಸದರು, ಮಾಜಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಜಿಲ್ಲಾ ಘಟಕದ ಅಧ್ಯಕ್ಷರು ಸೇರಿದಂತೆ ಕಿತ್ತೂರು ಕರ್ನಾಟಕದ ಎಲ್ಲಾ ಜಿಲ್ಲೆಗಳಿಂದ ಅಸಂಖ್ಯಾತ ಕಾರ್ಯಕರ್ತರು, ಮುಖಂಡರು ಪಾಲ್ಗೊಂಡು ಯಶಸ್ವಿ ಗೊಳಿಸಿದ್ದಾರೆ

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!