ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿರುವ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧ ಭೀತಿ ತೀವ್ರವಾಗಿ ಆವರಿಸಿದೆ. ಈ ಬಿಕ್ಕಟ್ಟಿನಿಂದಾಗಿ ಆತಂಕಗೊಂಡಿರುವ ಅನಿವಾಸಿ ಕನ್ನಡಿಗರ ರಕ್ಷಣೆಗೆ ರಾಜ್ಯ ಸರಕಾರ ಕಾರ್ಯ ಪ್ರವೃತ್ತವಾಗಿದೆ.ಮಧ್ಯಪ್ರಾಚ್ಯ ದೇಶಗಳಲ್ಲಿರುವ ಕರ್ನಾಟಕದ ನಿವಾಸಿಗಳ ಪತ್ತೆ ಮಾಡಲು ಹಾಗೂ ಸುರಕ್ಷತೆ ಖಚಿತಪಡಿಸಿಕೊಳ್ಳಲು, ದೇಶದ ವಿದೇಶಾಂಗ ಸಚಿವಾಲಯದೊಂದಿಗೆ ನೇರ ಹಾಗೂ ನಿರಂತರವಾಗಿ ರಾಜ್ಯ ಸರಕಾರ ಸಮನ್ವಯ ಸಾಧಿಸುತ್ತಿದೆ. ಇದು ವರೆಗೂ ವರದಿಯಾದಂತೆ 200 ಜನರು ಸಂಪರ್ಕಿ ಸಿದ್ದು, ಈ ಪಟ್ಟಿ ನಿರಂತರವಾಗಿ ನವೀಕೃತಗೊಳ್ಳುತ್ತಿದೆ ಎಂದು ವಿಪತ್ತು ನಿರ್ವಹಣೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಪರಿಹಾರ ಆಯುಕ್ತ ಮುನೀಶ್ ಮೌನ್ಸಿಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯುದ್ಧ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟದಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಬೆಂಗಳೂರಿಂದ ಅಬುಧಾಬಿ, ದುಬೈ ಮತ್ತು ಬಹರೇನ್ ಸೇರಿದಂತೆ ಮಧ್ಯಪ್ರಾಚ್ಯದ ವಿವಿಧ ರಾಷ್ಟ್ರಗಳಿಗೆ ಹೋಗಬೇಕಿದ್ದ ವಿಮಾನಗಳು ರದ್ದಾಗಿವೆ ಪರಿಣಾಮವಾಗಿಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಲವಾರು ಪರಿಣಾಮ, ಭಾನುವಾರ ಬೆಂಗಳೂರಿನ ಕೆಂಪೇಗೌಡ ಪ್ರಯಾಣಿಕರು ಸಿಲುಕಿ, ಪರದಾಡುವಂತಾಯಿತು.ವಿಮಾನಯಾನ ಸಂಸ್ಥೆಗಳು ಸುರಕ್ಷತಾ ಕಾಳಜಿಯನ್ನು ಏರ್ ಇಂಡಿಯಾ ಮತ್ತು ಇಂಡಿಗೊ ಸೇರಿದಂತೆ ಚರಣೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿವೆ. ಪ್ರಯಾ ಉಲ್ಲೇಖಿಸಿ ಮಧ್ಯಪ್ರಾಚ್ಯದಲ್ಲಿ ಹಲವಾರು ಕಾರ್ಯಾ ಣಿಕರು ಮರು ಬುಕಿಂಗ್ ಮತ್ತು ಮರುಪಾವತಿ ಬಯಸುತ್ತಿರುವುದರಿಂದ ಬೆಂಗಳೂರಿನ ವಿಮಾನಯಾನ ಕೌಂಟರ್‌ಗಳಲ್ಲಿ ಸರತಿ ಸಾಲುಗಳು ಕಂಡುಬಂದವು.
ಮಧ್ಯಪ್ರಾಚ್ಯದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆ ಮತ್ತು ಸುರಕ್ಷಿತ ವಾಪಸಾತಿಗಾಗಿ ಅಗತ್ಯ ಕ್ರಮ ವಹಿಸಲು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಕಾರ್ಯದರ್ಶಿಗೆ ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಪತ್ರ ಬರೆದಿದ್ದಾರೆ.
ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿಗೂ ಪತ್ರ ಬರೆದಿರುವ ಅವರು, ವಿಮಾನಯಾನ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸಿ, ಪರಿಸ್ಥಿತಿ ತಿಳಿಯಾಗುತ್ತಿದ್ದಂತೆ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಅಗತ್ಯ ವಿಮಾನಗಳ ವ್ಯವಸ್ಥೆ ಮಾಡಬೇಕು ಎಂದು ಕೋರಿದ್ದಾರೆ.




