ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಚಾಂಪಿಯನ್‌ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ಪಂದ್ಯ ಆಡುವುದು ಖಚಿತವಾಗಿದೆ.

ಉದ್ಘಾಟನಾ ಪಂದ್ಯ ಸೇರಿದಂತೆ ತನ್ನ ಐದು ತವರು ಪಂದ್ಯಗಳನ್ನು ಬೆಂಗಳೂರಿನಲ್ಲೇ (Bengaluru) ಆಡುವುದಾಗಿ ಆರ್‌ಸಿಬಿ ದೃಢಪಡಿಸಿದೆ.

ಎರಡು ತವರು ಪಂದ್ಯಗಳನ್ನು ಪೂರ್ವ ಬದ್ಧತೆಯಂತೆ ಚತ್ತೀಸ್‌ಗಢದಲ್ಲಿರುವ ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಸಲಾಗುವುದು ಎಂದು ಆರ್‌ಸಿಬಿ ತನ್ನ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದೆ.

ಫೈನಲಿನಲ್ಲಿ ಪಂಜಾಬ್‌ ಕಿಂಗ್ಸ್‌ ತಂಡವನ್ನು ಸೋಲಿಸಿ ಚೊಚ್ಚಲ ಚಾಂಪಿಯನ್‌ ಪಟ್ಟ ಅಲಂಕರಿಸಿದ ಮರುದಿನ ಜೂನ್‌ 4 ರಂದು ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿತ್ತು.

ದುರಂತದ ನಡೆದ ನಂತರ ಚಿನ್ನಸ್ವಾಮಿ ಸ್ಟೇಡಿಯಂ ಕ್ರಿಕೆಟ್‌ ನಡೆಸಲು ಯೋಗ್ಯವಲ್ಲ ಎಂದು ಹೇಳಿ ಸರ್ಕಾರ ಅನುಮತಿ ನಿರಾಕರಿಸಿತ್ತು. ನಂತರ ಚಿನ್ನಸ್ವಾಮಿಯಲ್ಲಿ ಪಂದ್ಯ ಆಯೋಜಿಸುವ ಸಂಬಂಧ ನ್ಯಾ. ಮೈಕಲ್ ಡಿ ಕುನ್ಹಾ ವರದಿಯಲ್ಲಿ ಉಲ್ಲೇಖಿಸಿರುವ ಸಮಸ್ಯೆಗಳನ್ನು ಬಗೆಹರಿಸಲು ಕರ್ನಾಟಕ ರಾಜ್ಯ ಕ್ರಿಕೆಟ್‌ ಮಂಡಳಿ ಕ್ರಮ ಕೈಗೊಂಡಿತ್ತು. ಅಂಬುಲೆನ್ಸ್‌ ಓಡಾಟಕ್ಕೆ ಜಾಗ, ಪಾರ್ಕಿಂಗ್ ವ್ಯವಸ್ಥೆ, ತುರ್ತು ನಿರ್ಗಮನ, ಅಗಲವಾದ ಗೇಟ್‌ಗಳು, ಮಹಿಳೆಯರಿಗೆ ಪ್ರತ್ಯೇಕ ಮಾರ್ಗ ಸೇರಿ ಎಲ್ಲಾ ಮಾರ್ಗಸೂಚಿಗಳಿಗೆ ಅನ್ವಯವಾಗುವಂತೆ ಬದಲಾವಣೆ ಮಾಡಿತ್ತು.

ಚಿನ್ನಸ್ವಾಮಿ ಕೈಗೊಂಡ ಸುರಕ್ಷತಾ ಕ್ರಮದ ಬಳಿಕ ಸರ್ಕಾರ ಪಂದ್ಯ ಆಯೋಜಿಸಲು ಅನುಮತಿ ನೀಡಿತ್ತು. ಅನುಮತಿ ಸಿಕ್ಕಿದ ಬೆನ್ನಲ್ಲೇ ಈಗ ಆರ್‌ಸಿಬಿ ಬೆಂಗಳೂರಿನಲ್ಲಿ 5 ಪಂದ್ಯವನ್ನು ಆಡುವುದಾಗಿ ಅಧಿಕೃತವಾಗಿ ತಿಳಿಸಿದೆ.

ಕಾಲ್ತುಳಿತ ದುರಂತ ಸಂಭವಿಸಿದ ಬಳಿಕ ಚಿನ್ನಸ್ವಾಮಿಯಲ್ಲಿ ರಣಜಿ ಟ್ರೋಫಿ, ವಿಜಯ್ ಹಜಾರೆ ಟ್ರೋಫಿ ಅಥವಾ ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ 20 ಸೇರಿದಂತೆ ಯಾವುದೇ ಪ್ರಮುಖ ದೇಶೀಯ ಪಂದ್ಯಗಳು ನಡೆದಿರಲಿಲ್ಲ.

ಬೆಂಗಳೂರಿನಲ್ಲಿ ಪಂದ್ಯ ಆಡುವ ಬಗ್ಗೆ ಆರ್‌ಸಿಬಿ ಮಾರ್ಚ್‌ 2ರಂದೇ ʼಹೋಮ್‌ ಆಫ್‌ ಚಾಂಪಿಯನ್ಸ್‌ʼ ಹೆಸರಿನ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಬೆಂಗಳೂರಿನಲ್ಲೇ ಪಂಡ್ಯವಾಡುವ ಬಗ್ಗೆ ಮಹತ್ವದ ಸುಳಿವು ನೀಡಿತ್ತು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!