ಭಾರತ- ಇಂಗ್ಲೆಂಡ್ ಸೆಮೀಸ್ ಕಾಳಗ ಯಾವಾಗ ಆರಂಭ?

ಭಾರತ- ಇಂಗ್ಲೆಂಡ್ ಸೆಮೀಸ್ ಕಾಳಗ ಯಾವಾಗ ಆರಂಭ?

2026ರ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಫೆಬ್ರವರಿ 5ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಸಂಜೆ 7 ಗಂಟೆಗೆ ಮುಖಾಮುಖಿಯಾಗಲಿವೆ. ಸ್ಟಾರ್ ಸ್ಪೋರ್ಟ್ಸ್ ಮತ್ತು ಜಿಯೋ ಹಾಟ್‌ಸ್ಟಾರ್‌ನಲ್ಲಿ ಪಂದ್ಯದ ನೇರಪ್ರಸಾರ ವೀಕ್ಷಿಸಬಹುದು. ಎರಡೂ ತಂಡಗಳ ಬಲಿಷ್ಠ ಸ್ಕ್ವಾಡ್‌ಗಳ ವಿವರ ಇಲ್ಲಿದೆ. ಈ ರೋಚಕ ಕದನಕ್ಕಾಗಿ ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

2026 ರ ಟಿ20 ವಿಶ್ವಕಪ್‌ನ ಸೆಮಿಫೈನಲ್ ಪಂದ್ಯಗಳು ಇಂದಿನಿಂದ ಆರಂಭವಾಗಲಿವೆ. ಇಂದು ಮೊದಲ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್‌ ತಂಡವನ್ನು ಎದುರಿಸಲಿದೆ. ನಾಳೆ ಆತಿಥೇಯ ಭಾರತ ತಂಡವನ್ನು ಇಂಗ್ಲೆಂಡ್‌ ಎದುರಿಸಲಿದೆ. ಒಂದೆಡೆ ಭಾರತ ತಂಡ ಗುಂಪು ಹಂತದಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದು ಸೂಪರ್ 8 ಸುತ್ತಿಗೆ ಅರ್ಹತೆ ಪಡೆದಿತ್ತು. ಇತ್ತ ಇಂಗ್ಲೆಂಡ್‌ ಒಂದು ಪಂದ್ಯದಲ್ಲಿ ಸೋತಿತ್ತಾದರೂ ಸೂಪರ್ 8 ಸುತ್ತಿಗೆ ಎಂಟ್ರಿಕೊಟ್ಟಿತ್ತು. ಸೂಪರ್ 8 ಸುತ್ತಿನಲ್ಲಿ ಭಾರತ 1 ಪಂದ್ಯವನ್ನು ಸೋತು, 2 ಪಂದ್ಯಗಳನ್ನು ಗೆದ್ದು ಸೆಮಿಫೈನಲ್‌ಗೆ ಟಿಕೆಟ್ ಪಡೆದರೆ, ಇತ್ತ ಇಂಗ್ಲೆಂಡ್‌ ಆಡಿದ ಮೂರು ಪಂದ್ಯಗಳನ್ನು ಗೆದ್ದು ಸೆಮಿಫೈನಲ್‌ಗೆ ಅರ್ಹತೆ ಪಡೆದಿದೆ. ಹೀಗಾಗಿ ಉಭಯ ತಂಡಗಳ ನಡುವೆ ಜಿದ್ದಾಜಿದ್ದಿನ ಕಾಳಗವನ್ನು ನಿರೀಕ್ಷಿಸಲಾಗಿದೆ. ಹೀಗಾಗಿ ಈ ಹೈವೋಲ್ಟೇಜ್ ಕದನದ ಪೂರ್ಣ ವಿವರ ಇಲ್ಲಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್‌ ಪಂದ್ಯ ಫೆಬ್ರವರಿ 5 ರಂದು ನಡೆಯಲಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್‌ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ.ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್‌ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಟಾಸ್ ಸಂಜೆ 6:30 ಕ್ಕೆ ನಡೆಯಲಿದೆ.ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್‌ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್​ನ ವಿವಿಧ ಚಾನೆಲ್​ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಜಿಯೋ ಹಾಟ್ ಸ್ಟಾರ್​ನಲ್ಲೂ ಲೈವ್ ಸ್ಟ್ರೀಮಿಂಗ್ ವೀಕ್ಷಿಸಬಹುದು.

ಟಿ20 ವಿಶ್ವಕಪ್​ನಲ್ಲಿ ಹೊಸ ದಾಖಲೆ ಬರೆದ ಜಸ್ಪ್ರೀತ್ ಬುಮ್ರಾ

ಉಭಯ ತಂಡಗಳು
ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಶಿವಂ ದುಬೆ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್.

ಇಂಗ್ಲೆಂಡ್ ತಂಡ: ಹ್ಯಾರಿ ಬ್ರೂಕ್ (ನಾಯಕ), ರೆಹಾನ್ ಅಹ್ಮದ್, ಜೋಫ್ರಾ ಆರ್ಚರ್, ಟಾಮ್ ಬ್ಯಾಂಟನ್, ಜಾಕೋಬ್ ಬೆಥೆಲ್, ಜೋಸ್ ಬಟ್ಲರ್, ಸ್ಯಾಮ್ ಕರನ್, ಲಿಯಾಮ್ ಡಾಸನ್, ಬೆನ್ ಡಕೆಟ್, ವಿಲ್ ಜ್ಯಾಕ್ಸ್, ಜೇಮೀ ಓವರ್ಟನ್, ಆದಿಲ್ ರಶೀದ್, ಫಿಲಿಪ್ ಸಾಲ್ಟ್, ಜೋಶ್ ಟಂಗ್,

Related Posts

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಅರ್ಜುನ್ ತೆಂಡೂಲ್ಕರ್ ಸಾನಿಯಾ ಚಾಂದೋಕ್   ಅವರನ್ನು ವಿವಾಹವಾಗಿದ್ದಾರೆ. ಸಚಿನ್ ಪುತ್ರನ ಪತ್ನಿ ಸಾನಿಯಾ ಯಾರು, ಅವರ ಹಿನ್ನೆಲೆ, ಕುಟುಂಬದ ಸಂಪತ್ತು ಎಷ್ಟು ಎಂಬ ಕುತೂಹಲವಿದೆ. ಸಾನಿಯಾ ಖ್ಯಾತ ಉದ್ಯಮಿ ರವಿ ಘಾಯ್ ಅವರ ಮೊಮ್ಮಗಳು. ಅವರ ಕುಟುಂಬ ಬಾಸ್ಕಿನ್-ರಾಬಿನ್ಸ್ ಅನ್ನು ಭಾರತಕ್ಕೆ…

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ…

You Missed

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?