ತೈಲ ಕೊರತೆ ಆತಂಕದಲ್ಲಿದ್ದ ಭಾರತಕ್ಕೆ ರಷ್ಯಾ ಮತ್ತೆ ಆಪತ್ಭಾಂಧವ!

 

ಮಧ್ಯಪ್ರಾಚ್ಯ ಬಿಕ್ಕಟ್ಟು ಹಾಗೂ ಹಾರ್ಮುಜ್ ಜಲಸಂಧಿ ಬಂದ್‌ನಿಂದ ಭಾರತದ ತೈಲ ಪೂರೈಕೆಗೆ ಆತಂಕ ಎದುರಾಗಿದೆ. ದೇಶವು ಕೇವಲ 25 ದಿನಗಳ ತೈಲ ಸಂಗ್ರಹ ಹೊಂದಿರುವಾಗ, ಭಾರತಕ್ಕೆ ರಷ್ಯಾ ಹೆಚ್ಚುವರಿ 9.5 ಮಿಲಿಯನ್ ಬ್ಯಾರೆಲ್ ಕಚ್ಚಾ ತೈಲ ಪೂರೈಸಲು ಸಿದ್ಧವಾಗಿದೆ. ಇದು ಮಧ್ಯಪ್ರಾಚ್ಯದಿಂದಾಗುವ ಪೂರೈಕೆ ವ್ಯತ್ಯಯವನ್ನು ಭಾಗಶಃ ಸಮತೋಲನಗೊಳಿಸಿ, ಭಾರತದ ಇಂಧನ ಭದ್ರತೆಯನ್ನು ಬಲಪಡಿಸಲು ಸಹಕಾರಿಯಾಗಲಿದೆ.

ಇರಾನ್-ಇಸ್ರೇಲ್ ಸೇನಾ ಸಂಘರ್ಷದ ಕಾರಣ ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಉಂಟಾಗಿದ್ದು, ಇದರ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆ ಮೇಲೂ ಆಗಿದೆ. ಇರಾನ್ ಹಾರ್ಮುಜ್ ಜಲಸಂಧಿ ಬಂದ್ ಮಾಡಿರುವ ಕಾರಣ ಕಚ್ಚಾ ತೈಲ ಪೂರೈಕೆ ಮೇಲೆ ದೊಡ್ಡ ಹೊಡೆತ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಭಾರತಕ್ಕೆ ಕಚ್ಚಾ ತೈಲ ಪೂರೈಕೆಯನ್ನು ಹೆಚ್ಚಿಸಲು ರಷ್ಯಾ ಸಿದ್ಧವಾಗಿದೆ ಎಂದು ವರದಿಯಾಗಿದೆ. ಉದ್ಯಮ ವಲಯದ ಮೂಲಗಳ ಪ್ರಕಾರ, ಸುಮಾರು 9.5 ಮಿಲಿಯನ್ ಬ್ಯಾರೆಲ್ ರಷ್ಯನ್ ಕಚ್ಚಾ ತೈಲ ಈಗಾಗಲೇ ಭಾರತೀಯ ಸಮುದ್ರ ಗಡಿಯ ಸಮೀಪದಲ್ಲಿರುವ ಹಡಗುಗಳಲ್ಲಿ ಲಭ್ಯವಿದ್ದು, ಇದು ಕೆಲವು ವಾರಗಳಲ್ಲಿ ಭಾರತಕ್ಕೆ ತಲುಪುವ ಸಾಧ್ಯತೆ ಇದೆ. ಈ ಮೂಲಕ ಮಧ್ಯಪ್ರಾಚ್ಯದಿಂದ ಉಂಟಾದ ಪೂರೈಕೆ ವ್ಯತ್ಯಯವನ್ನು ಭಾಗಶಃ ಸಮತೋಲನಗೊಳಿಸಲು ಭಾರತಕ್ಕೆ ಸಾಧ್ಯವಾಗಬಹುದು ಎನ್ನಲಾಗಿದೆ.

ಭಾರತವು ಪ್ರಸ್ತುತ ಕೇವಲ 25 ದಿನಗಳ ಬೇಡಿಕೆಗೆ ತಕ್ಕಷ್ಟು ಕಚ್ಚಾ ತೈಲ ಸಂಗ್ರಹ ಹೊಂದಿದೆ. ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿ ಸೇರಿದಂತೆ ಇತರೆ ಇಂಧನಗಳ ಸಂಗ್ರಹವೂ ಸೀಮಿತವಾಗಿದೆ. ಹೀಗಾಗಿ ಭಾರತಕ್ಕೆ ಪೂರೈಕೆ ಆತಂಕ ಎದುರಾಗಿದೆ.

ಭಾರತದ ಸುಮಾರು ಶೇಕಡಾ 40ರಷ್ಟು ಕಚ್ಚಾ ತೈಲ ಆಮದು ಹಾರ್ಮುಜ್ ಜಲಸಂಧಿ ಮೂಲಕ ಸಾಗುತ್ತದೆ. ಇದು ಬಂದ್ ಆಗಿರುವುದರಿಂದ ಭಾರತ ಪರ್ಯಾಯ ಮೂಲಗಳನ್ನು ಹುಡುಕಲು ಮುಂದಾಗಿದೆ. ಭಾರತೀಯ ರಿಫೈನರಿಗಳು ದಿನಕ್ಕೆ ಸುಮಾರು 5.6 ಮಿಲಿಯನ್ ಬ್ಯಾರೆಲ್ ಕಚ್ಚಾ ತೈಲವನ್ನು ಸಂಸ್ಕರಿಸುತ್ತಿವೆ.

ರಷ್ಯಾದಿಂದ ಕಚ್​ಚಾ ತೈಲ ಆಮದು ಕಡಿಮೆ ಮಾಡಿದ್ದ ಭಾರತ
ಉದ್ಯಮ ಮೂಲಗಳ ಪ್ರಕಾರ, ಭಾರತಕ್ಕೆ ಅಗತ್ಯವಿರುವ ಕಚ್ಚಾ ತೈಲದ ಶೇಕಡಾ 40 ರವರೆಗೆ ಪೂರೈಸಲು ರಷ್ಯಾ ಸಿದ್ಧವಿದೆ. ಜನವರಿಯಲ್ಲಿ ರಷ್ಯಾದಿಂದ ಭಾರತಕ್ಕೆ ಪ್ರತಿ ದಿನ ಸುಮಾರು 1.1 ಮಿಲಿಯನ್ ಬ್ಯಾರೆಲ್ ಆಮದು ಮಾಡಲಾಗಿತ್ತು. ಅದು 2022 ರ ನವೆಂಬರ್ ನಂತರದ ಕನಿಷ್ಠ ಮಟ್ಟವಾಗಿತ್ತು. ಆದರೆ ಫೆಬ್ರವರಿಯಲ್ಲಿ ಈ ಪ್ರಮಾಣವು ಮತ್ತೆ 30 ಶೇಕಡಾ ಮಟ್ಟಕ್ಕೆ ಏರಿಕೆಯಾಗಿದೆ ಎಂಬುದು ಅಂಕಿಅಂಶಗಳಿಂದ ತಿಳಿದುಬಂದಿದೆ.

ರಷ್ಯಾ ತೈಲ ಖರೀದಿಗೆ ಅಡ್ಡಿಯಾಗಿದ್ದ ಅಮೆರಿಕ ಜತೆಗಿನ ವ್ಯಾಪಾರ ಒಪ್ಪಂದ
ಭಾರತೀಯ ತೈಲ ಸಂಸ್ಕರಣಾಗಾರಗಳು ರಷ್ಯಾದ ತೈಲ ಮಾರಾಟಗಾರರೊಂದಿಗೆ ನಿರಂತರ ಸಂಪರ್ಕದಲ್ಲಿದ್ದರೂ, ಆಮದು ಪ್ರಮಾಣ ಹೆಚ್ಚಿಸುವ ಬಗ್ಗೆ ಅಂತಿಮ ನಿರ್ಧಾರವನ್ನು ಕೇಂದ್ರ ಸರ್ಕಾರವೇ ಕೈಗೊಳ್ಳಲಿದೆ. ಅಮೆರಿಕದೊಂದಿಗೆ ನಡೆಯುತ್ತಿರುವ ವ್ಯಾಪಾರ ಮಾತುಕತೆಗಳೂ ಈ ನಿರ್ಧಾರಕ್ಕೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇದಕ್ಕೂ ಮುನ್ನ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ರಷ್ಯಾದಿಂದ ಭಾರತ ತೈಲ ಖರೀದಿಯನ್ನು ನಿಲ್ಲಿಸುವ ಭರವಸೆ ನೀಡಿದೆ ಎಂದು ಹೇಳಿದ್ದರು. ಆದರೆ, ಭಾರತ ಮಾತ್ರ ತನ್ನ ತೈಲ ಖರೀದಿ ತಂತ್ರವು ಮಾರುಕಟ್ಟೆ ಪರಿಸ್ಥಿತಿ ಮತ್ತು ಅಂತರರಾಷ್ಟ್ರೀಯ ಬೆಳವಣಿಗೆಗಳ ಆಧಾರದಲ್ಲಿಯೇ ಇರಲಿದೆ ಎಂದು ಸ್ಪಷ್ಟಪಡಿಸಿದೆ .ಮಧ್ಯಪ್ರಾಚ್ಯ ಉದ್ವಿಗ್ನತೆ ಇನ್ನೂ ಕೆಲವು ದಿನಗಳ ಮಟ್ಟಿಗೆ ಹೀಗೆಯೇ ಮುಂದುವರಿದರೆ, ಭಾರತ ತನ್ನ ಇಂಧನ ಭದ್ರತೆಯನ್ನು ಕಾಯ್ದುಕೊಳ್ಳಲು ಪರ್ಯಾಯ ಪೂರೈಕೆ ಮಾರ್ಗಗಳನ್ನು ವಿಸ್ತರಿಸುವ ಸಾಧ್ಯತೆ ದಟ್ಟವಾಗಿದೆ.

 

Related Posts

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!