ಇರಾನ್ ಯುದ್ಧನೌಕೆಯನ್ನು ಮುಳುಗಿಸಿದ ಅಮೆರಿಕ!

ಹಿಂದೂ ಮಹಾಸಾಗರದಲ್ಲಿ ಅಮೆರಿಕದ ಜಲಾಂತರ್ಗಾಮಿ ದಾಳಿಯಿಂದ ಇರಾನ್‌ನ IRIS Dena ಯುದ್ಧನೌಕೆ ಮುಳುಗಿದ ಘಟನೆ ಜಾಗತಿಕ ಮಟ್ಟದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಭಾರತದಿಂದ ಮರಳುತ್ತಿದ್ದ ಈ ಯುದ್ಧನೌಕೆಯ ಮೇಲೆ ನಡೆದ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 87ಕ್ಕೆ ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ. ದಾಳಿಯನ್ನು ಅಮೆರಿಕ ಅಧಿಕೃತವಾಗಿ ಒಪ್ಪಿಕೊಂಡಿರುವುದು ಇರಾನ್-ಅಮೆರಿಕ ಸಂಘರ್ಷ ಮತ್ತಷ್ಟು ಉಲ್ಬಣಗೊಂಡಿದ್ದರ ಸಂಕೇತವಾಗಿದೆ.

ಹಿಂದೂ ಮಹಾಸಾಗರದಲ್ಲಿ ಅಮೆರಿಕದ ಜಲಾಂತರ್ಗಾಮಿಯು ಇರಾನ್ ಯುದ್ಧನೌಕೆಯನ್ನು ಮುಳುಗಿಸಿದ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಕನಿಷ್ಠ 87 ಕ್ಕೆ ಏರಿಕೆಯಾಗಿದೆ ಎಂದು ಎಎಫ್‌ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಐಆರ್​ಐಎಸ್ ದೇನಾ  ಎಂಬ ಯುದ್ಧನೌಕೆ ಕೆಲವೇ ವಾರಗಳ ಹಿಂದೆ ಭಾರತದಲ್ಲಿ ನೌಕಾ ಸಮರಾಭ್ಯಾಸದಲ್ಲಿ ಭಾಗವಹಿಸಿ ಇರಾನ್​ಗೆ ಮರಳುತ್ತಿತ್ತು. ಯುದ್ಧನೌಕೆಯನ್ನು ಹೊಡೆದುರುಳಿಸಿದ್ದು ತಾನೇ ಎಂದು ಈಗಾಗಲೇ ಅಮೆರಿಕ ದೃಢಪಡಿಸಿದೆ. ಐಆರ್​ಐಎಸ್ ದೇನಾ 2024 ರಲ್ಲಿ ಭಾರತಕ್ಕೆ ಬಂದಿದ್ದು, ನೌಕಾ ಸಮರಾಭ್ಯಾಸದಲ್ಲಿ ಭಾಗವಹಿಸಿತ್ತು.ಮೃತರ ಸಂಖ್ಯೆಯನ್ನು ಅಮೆರಿಕ ದೃಢಪಡಿಸದಿದ್ದರೂ, ರಕ್ಷಣಾ ಸಚಿವ ಪೀಟ್ ಹೆಗ್ಸೆತ್, ಜಲಾಂತರ್ಗಾಮಿ ದಾಳಿಯನ್ನು ದೃಢಪಡಿಸಿದ್ದಾರೆ. ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕದ ಜಾಗತಿಕ ವ್ಯಾಪ್ತಿಗೆ ಇದು ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.
ಅಂತರರಾಷ್ಟ್ರೀಯ ಜಲ ಪ್ರದೇಶದಲ್ಲಿ ಸುರಕ್ಷಿತವಾಗಿದೆ ಎಂದು ಭಾವಿಸಿದ ಇರಾನಿನ ಯುದ್ಧನೌಕೆಯನ್ನು ಅಮೆರಿಕದ ಜಲಾಂತರ್ಗಾಮಿ ನೌಕೆ ಮುಳುಗಿಸಿದೆ ಎಂದು ಹೆಗ್ಸೆತ್ ತಿಳಿಸಿದ್ದಾರೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದುರ್ಬುದ್ಧಿಯಿಂದಾಗಿ ಅಮೆರಿಕದ 500 ಯೋಧರು ಹತರಾಗಿದ್ದಾರೆ ಎಂದು ಇರಾನ್‌ ನ್ಯಾಷನಲ್‌ ಸೆಕ್ಯೂರಿಟಿ ಕೌನ್ಸಿಲ್‌ ಕಾರ್ಯದರ್ಶಿ ಅಲಿ ಪೋಸ್ಟ್‌ ಮಾಡಿದ್ದಾರೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಸೇರಿ ಟ್ರಂಪ್‌ ಇರಾನ್‌ ಮೇಲೆ ದಾಳಿ ನಡೆಸಿದರು. ಇರಾನ್‌ ನಡೆಸಿದ ಪ್ರತಿದಾಳಿಯಲ್ಲಿ ಅಮೆರಿಕದ 500 ಯೋಧರು ಸಾವಿಗೀಡಾಗಿದ್ದಾರೆ. ಇದೇನು ಟ್ರಂಪ್‌ ಅವರ ಅಮೆರಿಕ ಫಸ್ಟ್‌ ನೀತಿನಾ ಅಥವಾ ಇಸ್ರೇಲ್‌ ಫಸ್ಟ್‌ ನೀತಿಯಾ ಎಂದು ಅಲಿ ಪ್ರಶ್ನಿಸಿದ್ದಾರೆ. ಅಲ್ಲದೆ, ಈ ಬಗ್ಗೆ ಅಮೆರಿಕದ ಜನತೆ ಗಮನ ಹರಿಸಬೇಕು ಎಂದು ಆಗ್ರಹಿಸಿದ್ದಾರೆ.

Related Posts

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಭಾರತದ ಉಕ್ಕಿನ ಉತ್ಪಾದನಾ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಸಮುದ್ರ ಹಾಗೂ ಕಡಲಾಚೆಯ ಬೃಹತ್ ಇಂಜಿನಿಯರಿಂಗ್ ಯೋಜನೆಗಳಲ್ಲಿ ಬಳಸಲಾಗುವ ಅತ್ಯಂತ ಹೆಚ್ಚಿನ ಸಾಮರ್ಥ್ಯದ ವೆಲ್ಡೆಡ್ ಪೈಪ್‌ಗಳನ್ನು (EQ70 ಗ್ರೇಡ್) ಉತ್ಪಾದಿಸಿದ ವಿಶ್ವದ ಮೊದಲ ಸ್ಟೀಲ್ ಕಂಪನಿ ಎಂಬ ಹೆಗ್ಗಳಿಕೆಗೆ ‘ಆರ್ಸೆಲರ್ ಮಿತ್ತಲ್…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!