ಪ್ರೇಮ ಪ್ರಕರಣದ ರಾಜಿ ಪಂಚಾಯಿತಿ ವೇಳೆ ಹರಿದ ನೆತ್ತರು!

ಉಡುಪಿಯ ಮಲ್ಪೆ ಬೀಚ್‌ನಲ್ಲಿ ಪ್ರೇಮ ಪ್ರಕರಣದ ರಾಜಿ ಪಂಚಾಯಿತಿ ವೇಳೆ ಗಲಾಟೆ ಸಂಭವಿಸಿ, ಸ್ಥಳೀಯ ಮುಖಂಡ ಮಂಜು ಕೊಳ ಸೇರಿದಂತೆ ಮೂವರಿಗೆ ಚಾಕುವಿನಿಂದ ಇರಿಯಲಾಗಿದೆ. ಗಲಾಟೆ ತಡೆಯಲು ಬಂದ ಮತ್ತಿಬ್ಬರ ಮೇಲೂ ಹ* ನಡೆಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲಾಗಿದ್ದು, ಮಲ್ಪೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಪ್ರೇಮ ಪ್ರಕರಣದ ರಾಜಿ ಪಂಚಾಯಿತಿ ವೇಳೆ ಸ್ಥಳೀಯ ಪ್ರಭಾವಿ ಮುಖಂಡನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ಉಡುಪಿಯ ಮಲ್ಪೆ ಬೀಚ್​​ನಲ್ಲಿ ನಡೆದಿದೆ. ಘಟನೆಯಲ್ಲಿ ಮಂಜು ಕೊಳ ಸೇರಿ ಒಟ್ಟು ಮೂವರಿಗೆ ಚಾಕುವಿನಿಂದ ಇರಿಯಲಾಗಿದೆ. ಈ ವೇಳೆ ತಡೆಯಲು ಬಂದ ಮತ್ತಿಬ್ಬರ ಮೇಲೂ ಆರೋಪಿಗಳು ಹಲ್ಲೆ ನಡೆಸಿದ್ದು, ಬೆದರಿಕೆ ಹಾಕಿ ಪರಾರಿಗೆ ಯತ್ನಿಸಿದ್ದಾರೆ. ಈ ವೇಳೆ ಅವರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

 

ಮಲ್ಪೆಯ ಯುವಕ ಮತ್ತು ಪಡುಬಿದ್ರಿ–ಪಲಿಮಾರು ಭಾಗದ ಯುವತಿಯ ನಡುವಿನ ಪ್ರೇಮ ಪ್ರಕರಣ ಸಂಬಂಧ ಎರಡೂ ಕಡೆಯವರು ಮಾತುಕತೆ ನಡೆಸಲು ಬೀಚ್‌ ಸಮೀಪ ಸೇರಿದ್ದರು. ಆರಂಭದಲ್ಲಿ ಶಾಂತವಾಗಿಯೇ ನಡೆಯುತ್ತಿದ್ದ ಮಾತುಕತೆ, ಕೆಲವೇ ಕ್ಷಣಗಳಲ್ಲಿ ಮಾತಿನ ಚಕಮಕಿಗೆ ತಿರುಗಿದೆ. ಕುಟುಂಬದ ಗೌರವ ಮತ್ತು ಸಂಬಂಧಿತ ವಿಚಾರಗಳ ಬಗ್ಗೆ ಆರೋಪ–ಪ್ರತ್ಯಾರೋಪಗಳು ನಡೆಯುತ್ತಿದ್ದಂತೆ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಸಾಕ್ಷಿದಾರರ ಪ್ರಕಾರ, ತೀವ್ರ ವಾಗ್ವಾದದ ಮಧ್ಯೆ ಆರೋಪಿಗಳಲ್ಲಿ ಒಬ್ಬನು ತನ್ನ ಬಳಿಯಿದ್ದ ಚಾಕುವನ್ನು ಹೊರತೆಗೆದು ಮಂಜು ಕೊಳ ಅವರ ಹೊಟ್ಟೆಯ ಎಡಭಾಗಕ್ಕೆ ಇರಿದಿದ್ದಾನೆ. ರಕ್ತಸ್ರಾವವಾಗುತ್ತಾ ಅವರು ನೆಲಕ್ಕುರುಳುತ್ತಿದ್ದಂತೆ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇದನ್ನು ತಡೆಯಲು ಮುಂದಾದ ವರುಣ್ ಹಾಗೂ ಲತೀಶ್ ಅವರಿಗೂ ಚಾಕು ಇರಿದು ಗಾಯಗೊಳಿಸಲಾಗಿದೆ ಎನ್ನಲಾಗಿದೆ. ಸಂತೋಷ್ ಮತ್ತು ಧನುಷ್ ಮೇಲೂ ಕೈಯಿಂದ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

ಇನ್ನು ಪ್ರಕರಣ ಸಂಬಂಧ ಅಮೃತ್ ಭಂಡಾರಿ, ಪ್ರಜ್ಞೇಶ್, ಪುನೀತ್​ ಪೂಜಾರಿ ಹಾಗೂ ಅಭಿಜಿತ್​​ ಎಂಬ ನಾಲ್ವರನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಮತ್ತೋರ್ವ ಅಪ್ರಾಪ್ತನನ್ನು ಬಾಲ ನ್ಯಾಯ ಮಂಡಳಿಗೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿವಿಧ ಕಲಂಗಳಡಿ ತನಿಖೆ ಮುಂದುವರಿದಿದೆ. ಘಟನೆ ಹಿನ್ನೆಲೆಯಲ್ಲಿ ಮಲ್ಪೆ ಬೀಚ್‌ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!