ಸರ್ಕಾರಿ ಕಾಲೇಜುಗಳಲ್ಲಿ 2,000 ಬೋಧಕ ಸಿಬ್ಬಂದಿ ನೇಮಕಕ್ಕೆ ಗ್ರೀನ್​ ಸಿಗ್ನಲ್​ !

2026ನೇ ಸಾಲಿನ ಕರ್ನಾಟಕ ಬಜೆಟ್ ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಹಲವು ಹೊಸ ಯೋಜನೆಗಳನ್ನು ಪ್ರಕಟಿಸಿದೆ. ಎಡಿಬಿ ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಇದರ ಅಡಿಯಲ್ಲಿ 40 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಮತ್ತು 11 ಪಾಲಿಟೆಕ್ನಿಕ್‌ಗಳನ್ನು ಮಾದರಿ ಸಂಸ್ಥೆಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು. ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ ಉತ್ತೇಜಿಸಲು ಒಂಬತ್ತು ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು.

ಬೋಧಕ ಸಿಬ್ಬಂದಿಯ ಕೊರತೆ ನೀಗಿಸಲು ಸರ್ಕಾರಿ ಕಾಲೇಜುಗಳಲ್ಲಿ 2,000 ಹುದ್ದೆಗಳನ್ನು ಹಾಗೂ ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ 1,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಮಹಿಳಾ ಅತಿಥಿ ಉಪನ್ಯಾಸಕಿಯರಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ 90 ದಿನಗಳ ಮಾತೃತ್ವ ರಜೆ ಸೌಲಭ್ಯ ಒದಗಿಸಲಾಗುವುದು. ವಿದ್ಯಾರ್ಥಿನಿಯರ ಅನುಕೂಲಕ್ಕಾಗಿ 25 ಸರ್ಕಾರಿ ಪದವಿ ಕಾಲೇಜುಗಳು, 3 ಪಾಲಿಟೆಕ್ನಿಕ್‌ ಮತ್ತು 3 ಇಂಜಿನಿಯರಿಂಗ್‌ ಕಾಲೇಜುಗಳಲ್ಲಿ 31 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಒದಗಿಸಲಾಗುವುದು. ರಾಜ್ಯದಾದ್ಯಂತ ಹೊಸ ಕಾಲೇಜುಗಳ ಸ್ಥಾಪನೆ ಮತ್ತು ತಾಂತ್ರಿಕ ಕೋರ್ಸ್‌ಗಳಾದ ಆರ್ಟಿಫಿಷಿಯಲ್‌ ಇಂಟೆಲಿಜೆನ್ಸ್‌, ಮಷಿನ್‌ ಲರ್ನಿಂಗ್‌ ಅನ್ನು ಪರಿಚಯಿಸುವ ಮೂಲಕ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ಗುರಿಯನ್ನು ಬಜೆಟ್ ಹೊಂದಿದೆ.

Related Posts

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ…

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ವರ್ಧಿ ರಜತ್ ವಿರುದ್ಧ ಮತ್ತೊಂದು ಎಫ್‌ಐಆರ್‌ದಾಖಲಾಗಿದೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ ಅಲಿಯಾಸ್ ಡಾಗ್ ಸತೀಶ್‌ ಅವರು ದೂರು ನೀಡಿದ್ದು ಚಾಮರಾಜಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಬಿಎನ್‌ಎಸ್‌ ಸೆಕ್ಷನ್‌ 351 ,…

You Missed

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!