ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ
ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ ಮತ್ತು ಆಫ್ರಿಕಾ ಮೂಲದವರು ಹೆಚ್ಚಿದ್ದು, ಅಗತ್ಯ ದಾಖಲೆಗಳಿಲ್ಲದೆ ವಾಸಿಸುತ್ತಿದ್ದರು ಎಂಬುದು ತಿಳಿದು ಬಂದಿದೆ. ವಶಪಡಿಸಿಕೊಂಡವರನ್ನು FRROಗೆ ಹಸ್ತಾಂತರಿಸಿ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.

ಬೆಂಗಳೂರು, ಮಾರ್ಚ್​ 07: ಬೆಂಗಳೂರು ನಗರದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ವಿಶೇಷ ಕಾರ್ಯಾಚರಣೆಯಲ್ಲಿ ಸಿಸಿಬಿ ಅಧಿಕಾರಿಗಳು ಹಾಗೂ ನಗರದ 11 ಡಿಸಿಪಿ ವ್ಯಾಪ್ತಿಯ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದಾರೆ. ಕಳೆದ ಒಂದು ವಾರದಿಂದ ನಿರಂತರವಾಗಿ ನಡೆಯುತ್ತಿರುವ ಈ ಕಾರ್ಯಾಚರಣೆಯಲ್ಲಿ ನಗರದ ವಿವಿಧ ಪ್ರದೇಶಗಳಲ್ಲಿ ತಪಾಸಣೆ ನಡೆಸಿ ಅಕ್ರಮವಾಗಿ ವಾಸಿಸುತ್ತಿದ್ದ ವಿದೇಶಿ ಪ್ರಜೆಗಳನ್ನು ಪತ್ತೆಹಚ್ಚಲಾಗುತ್ತಿದೆ.

ಒಂದೇ ದಿನದಲ್ಲಿ ನೂರಾರು ವಿದೇಶಿ ಪ್ರಜೆಗಳ ಪತ್ತೆ
ಪೊಲೀಸರು ಹೇಳುವಂತೆ ನಗರದಲ್ಲಿ ಒಟ್ಟು 200ಕ್ಕೂ ಅಧಿಕ ಅಕ್ರಮ ವಲಸಿಗರನ್ನು ಗುರುತಿಸಲಾಗಿದ್ದು, ನಿನ್ನೆ ಒಂದೇ ದಿನದಲ್ಲಿ 100ಕ್ಕೂ ಹೆಚ್ಚು ವಿದೇಶಿ ಪ್ರಜೆಗಳನ್ನು ಪತ್ತೆಹಚ್ಚಲಾಗಿದೆ. ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ತಂಗಿದ್ದ ಈ ವಲಸಿಗರು ಅಗತ್ಯ ದಾಖಲೆಗಳಿಲ್ಲದೆ ಅಕ್ರಮವಾಗಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ. ಇವರಲ್ಲಿ ಹೆಚ್ಚಿನವರು ಬಾಂಗ್ಲಾದೇಶ ಮೂಲದವರಾಗಿದ್ದು, ಆಫ್ರಿಕಾ ಸೇರಿದಂತೆ ಇನ್ನೂ ಕೆಲವು ದೇಶಗಳಿಂದ ಬಂದವರೂ ಪತ್ತೆಯಾಗಿದ್ದಾರೆ.

ಪತ್ತೆಯಾದ ಅಕ್ರಮ ವಲಸಿಗರನ್ನು ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿ (FRRO) ಅಧಿಕಾರಿಗಳ ವಶಕ್ಕೆ ಒಪ್ಪಿಸಲಾಗಿದೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಕಾರ್ಯಾಚರಣೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ FRRO ಅಧಿಕಾರಿಗಳು ಪೊಲೀಸರಿಗೆ ಸಹಕಾರ ನೀಡುತ್ತಿದ್ದಾರೆ.

ತನಿಖೆ ವೇಳೆ ಸಿಕ್ತು ದಾಖಲೆ
ಪೊಲೀಸರು ನಡೆಸಿದ ಪರಿಶೀಲನೆ ವೇಳೆ ಕೆಲವರ ಬಳಿ ಆಧಾರ್ ಕಾರ್ಡ್ ಸೇರಿದಂತೆ ಸ್ಥಳೀಯ ದಾಖಲೆಗಳು ಕೂಡ ಪತ್ತೆಯಾಗಿವೆ. ಅವುಗಳ ನೈಜತೆ ಕುರಿತು ಪರಿಶೀಲನೆ ನಡೆಯುತ್ತಿದೆ. ಪತ್ತೆಯಾದ ವಿದೇಶಿ ಪ್ರಜೆಗಳ ವಿವರಗಳನ್ನು ಸಂಬಂಧಿತ ದೇಶಗಳ ಅಧಿಕಾರಿಗಳಿಗೆ ರವಾನಿಸಲಾಗುತ್ತಿದ್ದು, ಅವರ ಗುರುತು ಮತ್ತು ದಾಖಲೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಈ ಹಿಂದೆ ಪೊಲೀಸ್ ಆಯುಕ್ತರ ಸೂಚನೆಯಂತೆ ವಿವಿಧ ವಿಭಾಗಗಳ ಪೊಲೀಸರು ಅನುಮಾನಾಸ್ಪದ ಪ್ರದೇಶಗಳಲ್ಲಿ ತಲಾಶ್ ನಡೆಸಿ ದಾಖಲೆಗಳ ಪರಿಶೀಲನೆ ವೇಳೆ ಫೆಬ್ರವರಿ 26ರ ಒಂದೇ ದಿನ ಸುಮಾರು 2,000ಕ್ಕೂ ಹೆಚ್ಚು ವಿದೇಶಿಗರು ಪತ್ತೆಯಾಗಿದ್ದರು. ಇದರಲ್ಲಿ ಬಹುತೇಕರು ಸರಿಯಾದ ದಾಖಲೆಗಳಿಲ್ಲದೆ ಅಥವಾ ವೀಸಾ ಅವಧಿ ಮೀರಿಸಿ ನಗರದಲ್ಲಿ ವಾಸಿಸುತ್ತಿರುವುದು ಎಂದು ತಿಳಿದು ಬಂದಿತ್ತು.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು