ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ವರ್ಧಿ ರಜತ್ ವಿರುದ್ಧ ಮತ್ತೊಂದು ಎಫ್‌ಐಆರ್‌ದಾಖಲಾಗಿದೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ ಅಲಿಯಾಸ್ ಡಾಗ್ ಸತೀಶ್‌ ಅವರು ದೂರು ನೀಡಿದ್ದು ಚಾಮರಾಜಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರು ಬಿಎನ್‌ಎಸ್‌ ಸೆಕ್ಷನ್‌ 351 , 352 ರ ಆಡಿ ರಜತ್‌ ಮತ್ತು ಧನರಾಜ್‌ ಮೇಲೆ ಕೇಸ್ ದಾಖಲು ಮಾಡಿದ್ದಾರೆ.

ದೂರಿನಲ್ಲಿ ಏನಿದೆ?
ಕಳೆದ ವರ್ಷದ ಡಿ.12 ರಂದು ರಜತ್‌ ಕರೆ ಮಾಡಿ ನಾನು ಮತ್ತು ನನ್ನ ಸ್ನೇಹಿತ ಧನರಾಜ್ ಇಬ್ಬರು ಸೇರಿ ಒಂದು ಯೂಟ್ಯೂಬ್ ಚಾನೆಲ್‌ ಆರಂಭಿಸುತ್ತಿದ್ದೇವೆ. ಚಾನೆಲ್‌ ಆರಂಭದಲ್ಲಿ ನಿಮ್ಮ ಸಂದರ್ಶನವನ್ನು ಹಾಕುತ್ತೇವೆ ಎಂದು ಹೇಳಿ ನನ್ನನ್ನು ಮಾತನಾಡಿಸಿದ್ದರು. ಆದರೆ ಅಪ್ಲೋಡ್‌ ಮಾಡುವಾಗ ನನ್ನ ಸಂಭಾಷಣೆಯನ್ನು ತಿರುಚಿ ನನಗೆ ಅವಮಾನ ಮಾಡಿದ್ದಾರೆ.

ಎರಡು ಕ್ಯಾಮೆರಾ ಮತ್ತು ಎರಡು ಮೊಬೈಲ್ ನಲ್ಲಿ ನಾಲ್ಕು ಮಂದಿ ಸಂದರ್ಶನವನ್ನು ಶೂಟ್ ಮಾಡಿದ್ದರು. ಈ ಫೆಬ್ರವರಿ 27 ರಂದು ರಾತ್ರಿ 10:30ಕ್ಕೆ ಇನ್‌ಸ್ಟಾಗ್ರಾಮ್‌ನಲ್ಲಿ ಒಂದು ಮೆಸೇಜ್‌ ಹಾಕಿದ್ದಕ್ಕೆ ರಜತ್ ಅವರು ನನ್ನ ಮೇಲೆ ಕೊಲೆ ಬೆದರಿಕೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಷ್ಟೇ ಅಲ್ಲದೇ ಆತನ ಫೋನಿನಿಂದ ಮಧ್ಯರಾತ್ರಿ ಕೊಲೆ ಬೆದರಿಕೆ ಬರುತ್ತಿತ್ತು. ರಜತ್‌ ಮತ್ತು ಧನರಾಜ್‌ ಉದ್ದೇಶಪೂರ್ವಕವಾಗಿ ಮಾನಹಾನ ಮಾಡಿ ಬೈದಿದ್ದಾರೆ. ಇವರ ವಿರುದ್ಧ ಕ್ರಮಗೊಳ್ಳಬೇಕೆಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

  • Related Posts

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

    ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

    ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

    You Missed

    ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

    ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

    ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

    ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

    ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

    ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

    ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

    FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

    FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!