ರಘು ಕೌಟಿಲ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

ರಘು ಕೌಟಿಲ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

ಕಾನೂನು ಬಾಹಿರವಾಗಿ ಸಿ.ಎ ನಿವೇಶನ ಪಡೆದಿದ್ದಾರೆಂದು ಆರೋಪಿಸಿ ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ನಾಗೇಂದ್ರ ಎಂಬುವವರು ರಘು ಕೌಟಿಲ್ಯ ವಿರುದ್ದ ಲೋಕಾಯುಕ್ತಕ್ಕೆ ದೂರು ನೀಡಿದ್ದು ಇದಕ್ಕೆ ಸಂಬಂಧಪಟ್ಟ ಎಲ್ಲಾ ದಾಖಲಾತಿಗಳನ್ನು ನಾಗೇಂದ್ರ ಅವರು ಸಲ್ಲಿಸಿದ್ದಾರೆ ಎನ್ನಲಾಗಿದೆ.

ಜೆ. ರಂಗಣ್ಣ ಲಕ್ಷ್ಮಮ್ಮ ಚಾರಿಟಬಲ್ ಟ್ರಸ್ಟ್ ಗ ಕಾನೂನು ಬಾಹಿರ ಸಿ.ಎ ನಿವೇಶನ ಪಡೆಯಲಾಗಿದೆ. ಮೈಸೂರು ತಾಲ್ಲೂಕು, ಕೇರ್ಗಳ್ಳಿ ಸರ್ವೆ ನಂ. 27, 29 ರಲ್ಲಿ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದವರು ನಿರ್ಮಿಸಿರುವ ಸೋಮನಾಥ ನಗರ ಬಡಾವಣೆಯಲ್ಲಿ ಸಿ.ಎ. ನಿವೇಶನ ಇದಾಗಿದೆ. ನಿವೇಶನದ 85 (62+67)/2 ( 5482.5) ಚದರ ಮೀಟರ್‌ಗಳು ) ಇದನ್ನು ಮಂಜೂರು ಮಾಡಲಾಗಿತ್ತು.

ನಿವೇಶನಕ್ಕೆ ಸಂಬಂಧಿಸಿದಂತೆ ಸರ್ಕಾರದ ಗಮನಕ್ಕಾಗಲೀ ತರದೇ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಮಂಡಿಸದೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಹಾಗೂ ಸಿಬ್ಬಂದಿ ಸೇರಿ ಕಾನೂನುಬಾಹಿರವಾಗಿ ರಘು ಕೌಟಿಲ್ಯ ಅವರಿಗೆ ನಿವೇಶನ ಮಂಜೂರು ಮಾಡಿದ್ದಾರೆ. ಹೀಗಾಗಿ ಅಕ್ರಮವಾಗಿ ನಿವೇಶನ ಪಡೆದಿರುವ ರುಘು ಕೌಟಿಲ್ಯ ವಿರುದ್ದ ಕ್ರಮ ಜರುಗಿಸುವಂತೆ ದೂರಿನಲ್ಲಿ ನಾಗೇಂದ್ರ ಒತ್ತಾಯಿಸಿದ್ದಾರೆ.

ವ್ಯವಸ್ಥಾಪಕ ಮ್ಯಾನೇಜಿಂಗ್ ಟ್ರಸ್ಟಿ ಖಾಸಗಿ ವ್ಯಕ್ತಿ ಆರ್. ರಘು ಕೌಟಿಲ್ಯ ಆಕ್ರಮ ಆರ್ಥಿಕ ಲಾಭ ಮಾಡಿಕೊಡುವ ಉದ್ದೇಶದಿಂದ ತಮ್ಮ ಅಧಿಕಾರ ದುರುಪಯೋಗ ಮಾಡಿಕೊಂಡು ಸಿ.ಎ. ನಿವೇಶನವನ್ನು ಗುತ್ತಿಗೆ ಒಪ್ಪಂದ ಪತ್ರ ಮಾಡಿಕೊಟ್ಟು ಸಹಕರಿಸಿ ಸರ್ಕಾರಕ್ಕೆ ಆರ್ಥಿಕ ನಷ್ಟವುಂಟು ಮಾಡಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವಿಶೇಷ ತಹಶೀಲ್ದಾರ್ ರಾಜಶೇಖ‌ರ್, ನಗರ ಯೋಜನಾ ಸಹಾಯಕ ನಿರ್ದೇಶಕಪಿ.ಎಸ್.ನಟರಾಜ್, ಅಂದಿನ ಆಯುಕ್ತರುಗಳಾಗಿದ್ದ ನಟೇಶ್ ಮತ್ತು ದಿನೇಶ್ ಕುಮಾರ್, ಹಿಂದಿನ ಕಾರ್ಯದರ್ಶಿಗಳಾದ ಕುಸುಮ ಕುಮಾರಿ ಮತ್ತು ತಹಶೀಲ್ದಾರ್ ರಮಾದೇವಿ ಸಬ್ ರಿಜಿಸ್ಟ್ರಾರ್, ಪ್ರಥಮ ದರ್ಜೆ ಸಹಾಯಕ ಮಾದೇಶ್ ದ್ವೀತಿಯ ದರ್ಜೆ ಸಹಾಯಕ ರವರುಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ನಾಗೇಂದ್ರ ಆಗ್ರಹಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!