ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್ ಆಗಿಲ್ಲ ‘ದಿ ಕೇರಳ ಸ್ಟೋರಿ 2’ ಸಿನಿಮಾ

‘ದಿ ಕೇರಳ ಸ್ಟೋರಿ 2’ ಸಿನಿಮಾ ಪ್ರತಿ ದಿನ ಬಾಕ್ಸ್ ಆಫೀಸ್​​ನಲ್ಲಿ ಕೇವಲ ಒಂದಂಕಿ ಕಲೆಕ್ಷನ್ ಮಾಡುತ್ತಿದೆ. ನಿರೀಕ್ಷಿತ ಪ್ರಮಾಣದಲ್ಲಿ ಕಲೆಕ್ಷನ್ ಮಾಡಲು ಈ ಚಿತ್ರಕ್ಕೆ ಸಾಧ್ಯವಾಗಿಲ್ಲ. ವೀಕೆಂಡ್​​ನಲ್ಲೂ ಚೇತರಿಕೆ ಕಂಡಿಲ್ಲ. ‘ಧುರಂಧರ್ 2’ ಬಿಡುಗಡೆ ಆದರೆ ‘ದಿ ಕೇರಳ ಸ್ಟೋರಿ 2’ ಚಿತ್ರಕ್ಕೆ ಚಿತ್ರಮಂದಿರಗಳ ಕೊರತೆ ಆಗಲಿದೆ.

ಭಾರಿ ವಿವಾದದ ಮೂಲಕ ಸುದ್ದಿ ಆಗಿದ್ದ ‘ದಿ ಕೇರಳ ಸ್ಟೋರಿ 2’ ಸಿನಿಮಾ ದೊಡ್ಡ ಕಲೆಕ್ಷನ್ ಮಾಡುವ ನಿರೀಕ್ಷೆ ಇತ್ತು. ಆದರೆ ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್ ಆಗಿಲ್ಲ. ಫೆಬ್ರವರಿ 27ರಂದು ಬಿಡುಗಡೆ ಆದ ಈ ಸಿನಿಮಾಗೆ ಹೇಳಿಕೊಳ್ಳುವಂತಹ ಓಪನಿಂಗ್ ಸಿಗಲಿಲ್ಲ. ಬಿಡುಗಡೆಯಾಗಿ 9 ದಿನಗಳು ಕಳೆದಿವೆ. ಮಾಡಿದ ವಿವಾದಕ್ಕೆ ಹೋಲಿಸಿದರೆ ಈವರೆಗೂ ಆಗಿರುವ ಕಲೆಕ್ಷನ್ ಕಡಿಮೆ. 9 ದಿನಗಳಲ್ಲಿ ಈ ಚಿತ್ರಕ್ಕೆ 30 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಮುಂದಿನ ದಿನಗಳಲ್ಲಿ ಕಲೆಕ್ಷನ್ ಕುಸಿಯುವ ಸೂಚನೆ ಸಿಕ್ಕಿದೆ.

2023ರಲ್ಲಿ ಬಂದಿದ್ದ ‘ದಿ ಕೇರಳ ಸ್ಟೋರಿ’ ಸಿನಿಮಾ ಸೂಪರ್ ಸಕ್ಸಸ್ ಕಂಡಿತ್ತು. ಅದರ ಮುಂದುವರಿದ ಭಾಗವಾಗಿ ‘ದಿ ಕೇರಳ ಸ್ಟೋರಿ 2’ ಈಗ ರಿಲೀಸ್ ಆಗಿದೆ. ಈ ಚಿತ್ರಕ್ಕೆ ವಿಪುಲ್ ಅಮೃತ್​ಲಾಲ್ ಶಾ ಅವರು ಬಂಡವಾಳ ಹೂಡಿದ್ದಾರೆ. ಕಾಮ್ಯಾಕ್ಯ ನಾರಾಯಣ್ ಸಿಂಗ್ ಅವರು ನಿರ್ದೇಶನ ಮಾಡಿದ್ದಾರೆ. ಟ್ರೇಲರ್ ರಿಲೀಸ್ ಆದಾಗ ವಿವಾದ ಶುರುವಾಗಿತ್ತು. ಚಿತ್ರದ ವಿರುದ್ಧ ಅನೇಕರು ಕೋರ್ಟ್​ ಮೆಟ್ಟಿಲು ಏರಿದ್ದರು.

ಮೊದಲ ದಿನ ಕೆಲವೇ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದರಿಂದ ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ಅಂದು ಕೇವಲ 75 ಲಕ್ಷ ರೂಪಾಯಿ ಕಲೆಕ್ಷನ್ ಆಗಿತ್ತು. ಎರಡನೇ ದಿನ 4.65 ಕೋಟಿ ರೂಪಾಯಿ ಆದಾಯ ಬಂತು. ಮೂರನೇ ದಿನ 4.74 ಕೋಟಿ ರೂಪಾಯಿ ಆಯಿತು. ಆದರೆ ಮೊದಲ ಸೋಮವಾರ ಬರುತ್ತಿದ್ದಂತೆಯೇ ಈ ಸಿನಿಮಾದ ಕಲೆಕ್ಷನ್ ಮತ್ತೆ ಕುಸಿಯುತು.

2ನೇ ವೀಕೆಂಡ್​​ನಲ್ಲಿ ಕಲೆಕ್ಷನ್ ಹೆಚ್ಚಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಅದು ಕೂಡ ಸಾಧ್ಯವಾಗಿಲ್ಲ. 2ನೇ ಶನಿವಾರ ಅಂದಾಜು 3.75 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಎಷ್ಟೇ ಪ್ರಚಾರ ಸಿಕ್ಕಿದ್ದರೂ ಒಂದು ದಿನ ಕೂಡ ಈ ಸಿನಿಮಾದ ಕಲೆಕ್ಷನ್ 5 ಕೋಟಿ ರೂಪಾಯಿ ದಾಟಲು ಸಾಧ್ಯವಾಗಿಲ್ಲ. ತೆವಳುತ್ತಾ ಸಾಗುತ್ತಿರುವ ಈ ಸಿನಿಮಾಗೆ ಈವರೆಗೂ ಒಟ್ಟು 30 ಕೋಟಿ ರೂಪಾಯಿ ಆದಾಯ ಬಂದಿದೆ.

ಈ ಸಿನಿಮಾದಿಂದ ಕೇರಳದ ಪ್ರತಿಷ್ಠೆಗೆ ಧಕ್ಕೆ ಆಗಿದೆ ಎಂಬ ಕಾರಣಕ್ಕೆ ಶೀರ್ಷಿಕೆಯನ್ನು ವಿರೋಧಿಸಲಾಗಿದೆ. ಕೇರಳದಲ್ಲಿ ಈ ಚಿತ್ರಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ‘ಧುರಂಧರ್ 2’ ಸಿನಿಮಾ ರಿಲೀಸ್ ಆಗಲಿದೆ. ಅದಕ್ಕಾಗಿ ಜನರು ಕಾದಿದ್ದಾರೆ. ‘ಧುರಂಧರ್ 2’ ಬಿಡುಗಡೆ ಆದರೆ ‘ದಿ ಕೇರಳ ಸ್ಟೋರಿ 2’ ಸಿನಿಮಾ ಹೇಳ ಹೆಸರಿಲ್ಲದಂತೆ ಅಖಾಡದಿಂದ ಹೊರಬೀಳುವುದು ಖಚಿತ.

 

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!