ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ ಕೊಟ್ಟ ಕೋರ್ಟ್!

 

ಕಲ್ಯಾಣ ಕರ್ನಾಟಕದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಅಪ್ರಾಪ್ತ ಬಾಲಕಿಯೊಂದಿಗೆಅನುಚಿತ ವರ್ತನೆ ಹಾಗೂ ಪೋಕ್ಸೋ ಪ್ರಕರಣದ ಪ್ರಮುಖ ಆರೋಪಿ ಮಲ್ಲಿಕಾರ್ಜುನ ಮುತ್ಯಾಗೆ ನ್ಯಾಯಾಲಯದಿಂದ ಭಾರಿ ಹಿನ್ನಡೆಯಾಗಿದೆ. ಜಾಮೀನು ಸಿಗುವ ಭರವಸೆಯಲ್ಲಿದ್ದ ಮುತ್ಯಾ ಮತ್ತು ಆತನ ಭಕ್ತರಿಗೆ ಯಾದಗಿರಿ ಜಿಲ್ಲಾ ಪ್ರಧಾನ ನ್ಯಾಯಾಲಯವು ಜಾಮೀನು ನಿರಾಕರಿಸುವ ಮೂಲಕ ಶಾಕ್ ನೀಡಿದೆ. ಹಾಗಾದ್ರೆ, ಮುತ್ಯಾ ಜೈಲುಪಾಲಾಗುತ್ತಾರಾ?.

ಅಪ್ರಾಪ್ತ ಬಾಲಕಿಯೊಂದಿಗೆಅನುಚಿತ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲಿಕಾರ್ಜುನ ಮುತ್ಯಾನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ. ತಮ್ಮ ವಿರುದ್ಧದ ಫೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆ ನಡೆಸಿದ್ದ ಯಾದಗಿರಿ ಜಿಲ್ಲಾ ಪ್ರಧಾನ, ವಿಶೇಷ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮರಳುಸಿದ್ದರಾಧ್ಯ ಅವರು ಇಂದು ವಜಾ ಮಾಡಿ ಆದೇಶ ಹೊರಡಿಸಿದ್ದಾರೆ.

ಪೊಲೀಸ್ ವಿಚಾರಣೆಗೆ ಹಾಜರಾಗುವ ಮೊದಲೇ ಅಜ್ಞಾತ ಸ್ಥಳದಿಂದಲೇ ಮಲ್ಲಿಕಾರ್ಜುನ ಮುತ್ಯಾ, ತಮ್ಮ ವಿರುದ್ಧದ ಫೋಕ್ಸೋ ಪ್ರಕರಣ ರದ್ದು ಕೋರಿ ಕಲಬುರಗಿ ಹೈಕೋರ್ಟ್​​​​ಗೆ ಅರ್ಜಿ ಸಲ್ಲಿಸಿದ್ದರು. ಆದ್ರೆ, ಅದೇನಾಯ್ತೋ ಏನೋ ಏಕಾಏಕಿ ಕೋರ್ಟ್​​ನಿಂದ ಅರ್ಜಿ ವಾಪಸ್ ಪಡೆದುಕೊಂಡು ಬಳಿಕ ನಿರೀಕ್ಷಣಾ ಜಾಮೀನು ಕೋರಿ ಯಾದಗಿರಿ ಜಿಲ್ಲಾ ಕೋರ್ಟ್​​​​ಗೆ ಅರ್ಜಿ ಸಲ್ಲಿಸಿದ್ದರು. ಆದ್ರೆ, ಇದಕ್ಕೆ ಸರ್ಕಾರಿ ವಕೀಲರು ಇದಕ್ಕೆ ಆಕ್ಷೇಪ ಸಲ್ಲಿಸಿದ್ದರು. ಇದರಿಂದ ಶುಕ್ರವಾರ ಕೋರ್ಟ್​, ಎರಡು ಕಡೆ ವಾದ ಪ್ರತಿವಾದ ಆಲಿಸಿದ್ದು, ​ಜಾಮೀನು ಆದೇಶವನ್ನು ಇಂದಿಗೆಕಾಯ್ದಿರಿಸಿತ್ತು. ಇದೀಗ ಕೋರ್ಟ್ ಮುತ್ಯಾನಿಗೆ ಜಾಮೀನು ನೀಡಲು ನಿರಾಕರಿಸಿದೆ. ಇದರಿಂದ ಸ್ವಯಂ ಘೋಷಿತ ದೇವಮಾನವನಿಗೆ ಸಂಕಷ್ಟ ಎದುರಾಗಿದ್ದು, ಇದೀಗ ಜಾಮೀನಿಗಾಗಿ ಹೈಕೋರ್ಟ್​​ ಮೆಟ್ಟಿಲೇರಬೇಕಿದೆ.

ಫೋಕ್ಸೋ ಕೇಸ್: ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಫೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆಯೇ ನಾಪತ್ತೆಯಾಗಿದ್ದ ಮಲ್ಲಿಕಾರ್ಜುನ ಮುತ್ಯಾ, ಮೂರ್ನಾಲ್ಕು ದಿನದ ಬಳಿಕ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದರು.ಈ ಪ್ರಕರಣದ ತನಿಖಾಧಿಕಾರಿಯಾಗಿರುವ ಶಹಪೂರ ಸಿಪಿಐ ಶರಣಗೌಡ ನಾಮಣ್ಣವರ ಅವರು ತನಿಖೆಯನ್ನು ಚುರುಕುಗೊಳಿಸಿದ್ದು, ಈಗಾಗಲೇ ಮಲ್ಲಿಕಾರ್ಜುನ ಮುತ್ಯಾನನ್ನು ಮೊದಲ ಹಂತದ ವಿಚಾರಣೆ ಅವರ ನಾಲ್ಕು ಮೊಬೈಲ್ ಫೋನ್ ಜಪ್ತಿ ಮಾಡಿದ್ದಾರೆ. ಈ ಮೊಬೈಲ್‌ನಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಡಿಜಿಟಲ್ ಸಾಕ್ಷ್ಯಗಳು ಸಿಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಮೊಬೈಲ್‌ನಲ್ಲಿರುವ ಸಂದೇಶಗಳು, ಕರೆ ದಾಖಲೆಗಳು ಅಥವಾ ವಿಡಿಯೋಗಳ ಬಗ್ಗೆ ತನಿಖಾ ತಂಡವು ತಾಂತ್ರಿಕ ಪರಿಶೀಲನೆ ನಡೆಸುತ್ತಿದೆ.

ಮಲ್ಲಿಕಾರ್ಜುನ ಮುತ್ಯಾ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿರುವ ವಿಡಿಯೋ ರಾಜ್ಯಾದ್ಯಂತ ಭಾರೀ ವೈರಲ್ ಆಗಿತ್ತು. ಇದರ ಬೆನ್ನಲ್ಲಿಯೇ ರಾಜ್ಯ ಮಕ್ಕಳ ರಕ್ಷಣಾ ಆಯೋಗವು ಯಾದಗಿರಿ ಜಿಲ್ಲಾಧಿಕಾರಿ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಸೂಚಿಸಿತ್ತು. ಇದರ ಬೆನ್ನಲ್ಲೇ ಡಿಸಿ ಸೂಚನೆ ಮೇರೆಗೆ ಫೆಬ್ರವರಿ 25ರಂದು ಶಹಾಪುರ ತಾಲೂಕಿನ ಗೋಗಿ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಪ್ರಕರಣ ದಾಖಲಾಗಿತ್ತು. ಇದರ ಬೆನ್ನಲ್ಲೇ ಮುತ್ಯಾ ನಾಪತ್ತೆಯಾಗಿದ್ದ. ಇನ್ನೊಂದೆಡೆ ಅವರ ಭಕ್ತರು ಹಾಗೂ ಕೋಲಿ ಸಮಾಜ ಪ್ರತಿಭಟನೆ ನಡೆಸಿದ್ದು, ಮುತ್ಯಾ ವಿರುದ್ಧದ ಫೋಕ್ಸೋ ಪ್ರಕರಣ ರದ್ದುಗೊಳಿಸಬೇಕೆಂದು ಆಗ್ರಹಿಸಿದ್ದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!