ಮತ್ತೊಮ್ಮೆ ಪವನ್ ಕಲ್ಯಾಣ್ ಮತ್ತು ಮಹೇಶ್ ಬಾಬು ಅಭಿಮಾನಿಗಳ ನಡುವೆ ಕಿರಿಕ್!

ಪವನ್ ಕಲ್ಯಾಣ್ ಮತ್ತು ಮಹೇಶ್ ಬಾಬು ಅಭಿಮಾನಿಗಳ ನಡುವೆ ಕಿರಿಕ್ ಶುರುವಾಗಿದೆ. ಇದಕ್ಕೆ ಕಾರಣ ಆಗಿರುವುದು ಪವನ್ ಕಲ್ಯಾಣ್ ಅವರ ಆಪ್ತ ನಿರ್ದೇಶಕರೊಬ್ಬರ ಟ್ವೀಟ್. ಬಿಡುಗಡೆ ಆಗಲಿರುವ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದ ನಿರ್ದೇಶಕ ಮಾಡಿರುವ ಟ್ವೀಟ್​​ನಿಂದಾಗಿ ಮಹೇಶ್ ಬಾಬು ಅಭಿಮಾನಿಗಳು ಬೇಸರಗೊಂಡಿದ್ದಾರೆ.

ತೆಲುಗು ರಾಜ್ಯಗಳಲ್ಲಿ ಫ್ಯಾನ್ಸ್ ವಾರ್​​ಗಳು ಸಾಮಾನ್ಯ. ಕರ್ನಾಟಕಕ್ಕೆ ಹೋಲಿಸಿದರೆ ತುಸು ಹೆಚ್ಚೇ ಎನ್ನಬಹುದು. ಮೆಗಾಸ್ಟಾರ್ ಅಭಿಮಾನಿಗಳು ಮತ್ತು ನಂದಮೂರಿ ಅಭಿಮಾನಿಗಳ ನಡುವಿನ ಫ್ಯಾನ್ಸ್ ವಾರ್​​ಗೆ ದಶಕಗಳ ಇತಿಹಾಸವಿದೆ. ಇವುಗಳ ನಡುವೆ ಜೂ ಎನ್​​ಟಿಆರ್ vs ಪವನ್ ಕಲ್ಯಾಣ್, ಪವನ್ ಕಲ್ಯಾಣ್ vs ಮಹೇಶ್ ಬಾಬು ಹೀಗೆ ಬೇರೆ ಬೇರೆ ಫ್ಯಾನ್ಸ್ ವಾರ್​​ಗಳು ಆಗಾಗ್ಗೆ ನಡೆಯುತ್ತಲೇ ಇರುತ್ತವೆ. ಇದೀಗ ಮತ್ತೊಮ್ಮೆ ಪವನ್ ಕಲ್ಯಾಣ್ ಮತ್ತು ಮಹೇಶ್ ಬಾಬು ಅಭಿಮಾನಿಗಳ ನಡುವೆ ಕಿರಿಕ್ ಶುರುವಾಗಿದೆ. ಇದಕ್ಕೆ ಕಾರಣ ಆಗಿರುವುದು ಪವನ್ ಕಲ್ಯಾಣ್ ಅವರ ಆಪ್ತ ನಿರ್ದೇಶಕರೊಬ್ಬರ ಟ್ವೀಟ್.

ಪವನ್ ಕಲ್ಯಾಣ್ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಬಿಡುಗಡೆ ಆಗುತ್ತಿದೆ. ಮಾರ್ಚ್ 19 ರಂದು ‘ಧುರಂಧರ್ 2’ ಸಿನಿಮಾದ ಎದುರು ಅದು ರಿಲೀಸ್ ಆಗುತ್ತಿದೆ. ಈ ಸಿನಿಮಾವನ್ನು ಹರೀಶ್ ಶಂಕರ್ ನಿರ್ದೇಶನ ಮಾಡಿದ್ದು, ಪವನ್ ಕಲ್ಯಾಣ್​​ರ ಆಪ್ತ ನಿರ್ದೇಶಕರುಗಳಲ್ಲಿ ಇವರೂ ಒಬ್ಬರಾಗಿದ್ದಾರೆ. ಸಹಜವಾಗಿಯೇ ಪವನ್ ಕಲ್ಯಾಣ್ ಅಭಿಮಾನಿಗಳು ಸಿನಿಮಾ ನೋಡಲು ಉತ್ಸುಕರಾಗಿದ್ದಾರೆ.

ಇತ್ತೀಚೆಗೆ ಪವನ್ ಕಲ್ಯಾಣ್ ಅಭಿಮಾನಿಯೊಬ್ಬ ಟ್ವೀಟ್ ಮಾಡಿ, ಮಹೇಶ್ ಬಾಬು ಸಿನಿಮಾಗಳ ರೆಕಾರ್ಡ್ ಅನ್ನು ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಬ್ರೇಕ್ ಮಾಡಬೇಕು ಎಂದಿದ್ದ. ಮಹೇಶ್ ಬಾಬು ಎಂದು ನೇರವಾಗಿ ಹೆಸರು ಬಳಸುವ ಬದಲಿಗೆ ಮಹೇಶ್ ಬಾಬು ಅಡ್ಡ ಹೆಸರಾದ ‘ಬಾಬ್’ ಎಂದು ಬರೆದಿದ್ದ. ಆ ಟ್ವೀಟ್​​ಗೆ ಪ್ರತಿಕ್ರಿಯೆ ನೀಡಿದ್ದ ಹರೀಶ್ ಶಂಕರ್ ‘ತಥಾಸ್ತು’ ಎಂದಿದ್ದರು. ಆ ಮೂಲಕ ಮಹೇಶ್ ಬಾಬು ರೆಕಾರ್ಡ್​​ಗಳನ್ನು ಬ್ರೇಕ್ ಮಾಡುತ್ತೇನೆ ಎಂದಿದ್ದರು. ಹರೀಶ್ ಶಂಕರ್ ಅವರ ಈ ಟ್ವೀಟ್ ಮಹೇಶ್ ಅಭಿಮಾನಿಗಳನ್ನು ಕೆರಳಿಸಿದೆ.

ಆದರೆ ಶೀಘ್ರವೇ ತಮ್ಮ ತಪ್ಪು ತಿಳಿದುಕೊಂಡ ಹರೀಶ್ ಶಂಕರ್ ಕೂಡಲೇ ತಮ್ಮ ‘ತಥಾಸ್ತು’ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದಲ್ಲದೆ, ತಾವು ಟ್ವೀಟ್​​ ಅನ್ನು ಪೂರ್ಣವಾಗಿ ಓದದೆ ಹಾಗೂ ಸರಿಯಾಗಿ ಅರ್ಥೈಸಿಕೊಳ್ಳದೆ ಪ್ರತಿಕ್ರಿಯೆ ನೀಡಿದ್ದಾಗಿ ಹೇಳಿದ್ದಾರೆ. ಅಲ್ಲದೆ ತಮ್ಮ ಟ್ವೀಟ್​​ನಿಂದ ಮಹೇಶ್ ಬಾಬು ಅಭಿಮಾನಿಗಳಿಗೆ ಬೇಸರ ಉಂಟಾಗಿದ್ದರೆ ಕ್ಷಮೆ ಕೇಳುವುದಾಗಿ ಸಹ ಹರೀಶ್ ಶಂಕರ್ ಹೇಳಿದ್ದಾರೆ.

ಟಾಲಿವುಡ್ ಖ್ಯಾತ ನಿರ್ದೇಶಕ ಹರೀಶ್ ಶಂಕರ್ ಅವರು ತಮ್ಮ ಮುಂಬರುವ ಚಿತ್ರ ‘ಉಸ್ತಾದ್ ಭಗತ್ ಸಿಂಗ್’ (ಪವನ್ ಕಲ್ಯಾಣ್ ನಟನೆಯ ಸಿನಿಮಾ) ಪ್ರಚಾರದ ಸಂದರ್ಭದಲ್ಲಿ ಮಾಡಿದ್ದ ಒಂದು ಟ್ವೀಟ್ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಕೊನೆಗೆ ಅವರು ಮಹೇಶ್ ಬಾಬು ಮತ್ತು ಅವರ ಅಭಿಮಾನಿಗಳಿಗೆ ಬೇಷರತ್ ಕ್ಷಮೆಯಾಚಿಸುವ ಮೂಲಕ ವಿವಾದಕ್ಕೆ ತೆರೆ ಎಳೆದಿದ್ದಾರೆ.

ಟ್ವೀಟ್ ಮಾಡಿರುವ ಹರೀಶ್ ಶಂಕರ್, ‘ಸೆನ್ಸಾರ್ ಮಂಡಳಿ ಅಧಿಕಾರಿಗಳ ಭೇಟಿ, ಪೆದ್ದಮ್ಮ ದೇವಸ್ಥಾನದ ದರ್ಶನ ಮತ್ತು ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ತಾನು ತುಂಬಾ ಬ್ಯುಸಿಯಾಗಿದ್ದೆ. ಆ ಹಡಬಡಿಕೆಯಲ್ಲಿ ಅಭಿಮಾನಿಗಳ ಶುಭಾಶಯಗಳಿಗೆ ಪ್ರತಿಕ್ರಿಯಿಸುವಾಗ, ಟ್ವೀಟ್ ಅನ್ನು ಪೂರ್ತಿಯಾಗಿ ಓದದೆ ಕೇವಲ ಮೊದಲ ಅರ್ಧ ಭಾಗವನ್ನು ನೋಡಿ ‘ತಥಾಸ್ತು’ ಎಂದು ಉತ್ತರಿಸಿದ್ದೆ. ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ಮೇಲೆ ನನಗೆ ಅಪಾರ ಗೌರವವಿದೆ. ರಾಜಮೌಳಿ-ಮಹೇಶ್ ಬಾಬು ಅವರ ‘ವಾರಣಾಸಿ’ ಸಿನಿಮಾ ದೊಡ್ಡ ದಾಖಲೆ ಬರೆಯಲಿದೆ ಎಂಬ ನಂಬಿಕೆ ನನಗಿದೆ. ಯಾರ ಮನಸ್ಸನ್ನೂ ನೋಯಿಸುವ ಉದ್ದೇಶ ನನಗಿಲ್ಲ. ಸಿನಿಮಾ ಬಿಡುಗಡೆಗೆ ಕೇವಲ 10 ದಿನಗಳಿರುವಾಗ ಉದ್ದೇಶಪೂರ್ವಕವಾಗಿ ಇಂತಹ ತಪ್ಪು ಮಾಡುವಷ್ಟು ಅಜ್ಞಾನಿ ನಾನಲ್ಲ. ತಿಳಿಯದೇ ಮಾಡಿದ ಈ ತಪ್ಪಿಗೆ ಕ್ಷಮೆಯಿರಲಿ ಎಂದು ಕೇಳಿಕೊಂಡಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ರಾಮ್‌ಚರಣ್‌, ಕಿಚ್ಚ ಸುದೀಪ್‌ ಬಾಡಿಗಾರ್ಡ್‌ಗಳ ನಂತರ ಈಗ ಯಶ್‌ ಅಂಗರಕ್ಷಕನ ಹವಾ!

ಚಿತ್ರರಂಗದಲ್ಲಿ ನೆಚ್ಚಿನ ನಟರ ಜೊತೆಗೆ ಅವರ ಪರ್ಸನಲ್‌ ಬಾಡಿಗಾರ್ಡ್‌ಗಳೂ ಇತ್ತೀಚೆಗೆ ಭಾರಿ ಸದ್ದು ಮಾಡುತ್ತಿದ್ದು, ಅಭಿಮಾನಿಗಳಲ್ಲಿ ಸಖತ್ ಟ್ರೆಂಡ್ ಸೃಷ್ಟಿಸುತ್ತಿದ್ದಾರೆ. ನಟ ರಾಮ್‌ ಚರಣ್‌ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾ ‘ಪೆದ್ದಿ’ ಪ್ರಚಾರದ ವೇಳೆಯಲ್ಲಿ ಅವರ ಪರ್ಸನಲ್ ಸೆಕ್ಯೂರಿಟಿ ಗಾರ್ಡ್, ಆಫ್ರಿಕಾ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!