ತಮಿಳುನಾಡಿನ TVK ಪಕ್ಷದ ಅಧ್ಯಕ್ಷ ವಿಜಯ್ ಆಸ್ತಿ ಗೊತ್ತಾ !

ನಾಮಪತ್ರ ಸಲ್ಲಿಕೆ ವೇಳೆ ತಮ್ಮ ಸಂಪೂರ್ಣ ಆಸ್ತಿ ವಿವರ ನೀಡಿದ ದಳಪತಿ

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಪೆರಂಬೂರು ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿರುವ ಟಿವಿಕೆ ಅಧ್ಯಕ್ಷ ವಿಜಯ್, ತಮ್ಮ ಅಫಿಡವಿಟ್‌ನಲ್ಲಿ ಒಟ್ಟು 624 ಕೋಟಿಗೂ ಅಧಿಕ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ. ಇದರಲ್ಲಿ 404.58 ಕೋಟಿ ಚರ ಆಸ್ತಿ ಹಾಗೂ 220.15 ಕೋಟಿ ಸ್ಥಿರ ಆಸ್ತಿ ಸೇರಿದೆ.

ವಿಶೇಷವೆಂದರೆ, ವಿಜಯ್ ಅವರು ತಮ್ಮ ಕುಟುಂಬ ಸದಸ್ಯರಿಗೆ ಸಾಲ ನೀಡಿರುವುದಾಗಿ ತಿಳಿಸಿದ್ದು, ತಂದೆ ಎಸ್.ಎ. ಚಂದ್ರಶೇಖರ್ ಅವರಿಗೆ 3.02 ಕೋಟಿ, ತಾಯಿ ಶೋಭಾಗೆ 87.12 ಲಕ್ಷ, ಪತ್ನಿ ಸಂಗೀತಾ ಅವರಿಗೆ 12.6 ಕೋಟಿ ಹಾಗೂ ತಮ್ಮ ಮಕ್ಕಳಿಗೆ ಲಕ್ಷಾಂತರ ರೂಪಾಯಿ ಸಾಲ ನೀಡಿದ್ದೇನೆ ಎಂದು ಹೇಳಿದ್ದಾರೆ.

ದಳಪತಿ ವಿಜಯ್ ಬಳಿ 883 ಗ್ರಾಂ ಚಿನ್ನ ಮತ್ತು 5 ಕಾರುಗಳಿದ್ದರೆ, ಪತ್ನಿ ಸಂಗೀತಾ ಹೆಸರಿನಲ್ಲಿ 3 ಕೆಜಿಗೂ ಅಧಿಕ ಚಿನ್ನ ಹಾಗೂ 134 ಕ್ಯಾರಟ್ ವಜ್ರಗಳಿವೆ. ತಮ್ಮನ್ನು ಸ್ವಯಂ ಉದ್ಯೋಗಿ ಎಂದು ಗುರುತಿಸಿಕೊಂಡಿರುವ ವಿಜಯ್ ಅವರಿಗೆ ಬಾಡಿಗೆ, ಬಡ್ಡಿ ಮತ್ತು ಟ್ರಸ್ಟ್‌ಗಳ ಮೂಲಕ ಆದಾಯ ಬರುತ್ತಿದ್ದು. ರಾಜಕೀಯ ಪ್ರವೇಶದ ಬೆನ್ನಲ್ಲೇ ಅವರ ಈ ಬೃಹತ್ ಆಸ್ತಿ ವಿವರ ಈಗ ಭಾರೀ ಚರ್ಚೆಗೆ ಕಾರಣವಾಗಿದೆ.

Related Posts

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!