ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು

ಐಪಿಎಲ್ 2026ರ ಭರ್ಜರಿ ಆರಂಭದ ಬೆನ್ನಲ್ಲೇ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ನಾಯಕ ರಜತ್ ಪಾಟಿದಾರ್ ಮತ್ತು ವಿಕೆಟ್ ಕೀಪರ್-ಬ್ಯಾಟರ್ ಜಿತೇಶ್ ಶರ್ಮಾ ಆಂಧ್ರಪ್ರದೇಶದ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಕಳೆದ ಸೀಸನ್‌ನಲ್ಲಿ ಚೊಚ್ಚಲ ಪ್ರಶಸ್ತಿ ಗೆದ್ದಿದ್ದ ಆರ್‌ಸಿಬಿ, ಈ ಬಾರಿಯೂ ಅಮೋಘ ಪ್ರದರ್ಶನ ನೀಡುತ್ತಿದೆ. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಮೊದಲ ಪಂದ್ಯದಲ್ಲಿ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ ನಂತರ, ತಂಡದ ಪ್ರಮುಖ ಆಟಗಾರರು ಆಧ್ಯಾತ್ಮಿಕ ಚಿಂತನೆಯತ್ತ ಮುಖ ಮಾಡಿದ್ದಾರೆ.

ಏಪ್ರಿಲ್ 5 ರಂದು ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಆಟಗಾರರು ಶ್ರೀಹರಿ ಆಶೀರ್ವಾದ ಪಡೆದರು. ವಿಶೇಷ ಎಂದರೆ ಕಳೆದ ವರ್ಷವೂ ಸಹ ತಂಡದ ಪ್ರಮುಖ ಆಟಗಾರರು ತಿರುಮಲಕ್ಕೆ ಭೇಟಿ ನೀಡಿದ್ದರು, ಅದು ತಂಡಕ್ಕೆ ಅದೃಷ್ಟ ತಂದಿತ್ತು ಎಂಬ ನಂಬಿಕೆ ಅಭಿಮಾನಿಗಳಲ್ಲಿದೆ. ಇದೀಗ ಸಿಎಸ್​ಕೆ ವಿರುದ್ಧದ ಪಂದ್ಯಕ್ಕೂ ಮುನ್ನ ತಿಮ್ಮಪ್ಪನ ದರ್ಶನ ಪಡೆದಿರುವುದು ವಿಶೇಷ.

Related Posts

ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ

ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ನಡುವಿನ ಆತ್ಮೀಯ ಸ್ನೇಹ ಇಡೀ ವಿಶ್ವದ ಗಮನ ಸೆಳೆದಿದೆ. ಇವರಿಬ್ಬರ ರಾಜತಾಂತ್ರಿಕ ಒಡನಾಟವು ಭಾರತ ಮತ್ತು ಇಟಲಿ ನಡುವಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುತ್ತಿದೆ. ಪ್ರಸ್ತುತ ನಡೆಯುತ್ತಿರುವ ಜಿ7…

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

You Missed

ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ

ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!