ಮೂಡನಹಳ್ಳಿಯಲ್ಲಿ ಅಕ್ರಮ ಮದ್ಯದ ಹಾವಳಿ: ಅಬಕಾರಿ ಕಚೇರಿಗೆ ಮುತ್ತಿಗೆ ಹಾಕಿ ಮಹಿಳೆಯರ ಆಕ್ರೋಶ!

ಕೆ ಆರ್ ಪೇಟೆ: ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಮೂಡನಹಳ್ಳಿ ಗ್ರಾಮದಲ್ಲಿ ಮದ್ಯ ಮಾರಾಟ ನಿಷೇಧಿಸುವಂತೆ ಒತ್ತಾಯಿಸಿ ಮಹಿಳೆಯರು ಕೆ.ಆರ್.ಪೇಟೆ ತಾಲ್ಲೂಕು ಕೇಂದ್ರದಲ್ಲಿರುವ ಅಬಕಾರಿ ಇಲಾಖೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಗ್ರಾಮದ ನೂರಾರು ಮಹಿಳೆಯರು ಹಾಗೂ ಯುವಕರು ಪ್ರತಿಭಟನೆ ನಡೆಸಿ, ನಮ್ಮ ಮೂಡನಹಳ್ಳಿ ಗ್ರಾಮದ ಬೀದಿ ಅಕ್ರಮವಾಗಿ ಮಾರಾಟ ಮಾಡುತ್ತಿರುವ ಮಧ್ಯ ಮಾರಾಟವನ್ನು ಇಂದಿನಿಂದಲೇ ಬಂದ್ ಮಾಡುವ ಆದೇಶ ಹೊರಡಿಸುವವರೆವಿಗೂ ಇಲ್ಲಿಂದ ಹೋಗುವುದಿಲ್ಲ ಎಂದು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದರು.

ಮೂಡನಹಳ್ಳಿ ಗ್ರಾಮದಿಂದ ಪ್ರಮುಖ ರಸ್ತೆ ಮೂಲಕ ಕೆ ಆರ್ ಪೇಟೆ ಪಟ್ಟಣದ ಶಾಸಕರಾದ ಹೆಚ್ ಟಿ ಮಂಜು ಅವರ ಮನೆಯವರೆಗೆ ಪಾದಯಾತ್ರೆ ಮೂಲಕ ಆಗಮಿಸಿ ಶಾಸಕರಿಗೆ ಮನವಿ ಸಲ್ಲಿಸಿ ನಂತರ ಅಬಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಗ್ರಾಮಸ್ಥರ ಮನವಿ ಆಲಿಸಿದ ಶಾಸಕ ಹೆಚ್ ಟಿ ಮಂಜು ಅವರು ಅಬಕಾರಿ ಡಿಸಿ ಅವರಿಗೆ ವಿಡಿಯೋ ಕರೆ ಮಾಡಿ ಮಾತನಾಡಿ ತಕ್ಷಣವೇ ಮೂಡನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಮಧ್ಯ ಮಾರಾಟವನ್ನು ಬಂದ್ ಮಾಡಿಸಬೇಕು. ಜನರ ಭಾವನೆಗೆ ಬೆಲೆ ಕೊಟ್ಟು ಮಧ್ಯ ಮಾರಾಟವನ್ನು‌ ನಿಲ್ಲಿಸಿ ಗ್ರಾಮದಲ್ಲಿ ಶಾಂತಿ ನೆಲೆಸುವಂತೆ ಕಟ್ಟು ನಿಟ್ಟಿನ ಕ್ರಮ ವಹಿಸುವಂತೆ ಖಡಕ್ ಸೂಚನೆ ನೀಡಿದರು.
ಗ್ರಾಮದ ಮುಖಂಡರು ಮಾತನಾಡಿ ಗ್ರಾಮದಲ್ಲಿ ಮದ್ಯ ಮಾರಾಟ ನಿಷೇಧಿಸದಿದ್ದರೆ ಉಗ್ರ ಹೋರಾಟವನ್ನು ಮಾಡಲು ಹಿಂಜರಿಯುವುದಿಲ್ಲ ಎಂದು ಗ್ರಾಮಸ್ಥರು ‌ಖಡಕ್ಕಾಗಿ ತಿಳಿಸಿದ್ದಾರೆ.

ಕುಡಿತದ ಚಟದಿಂದ ಯುವಕರು, ಮನೆಯ ಯಜಮಾನರು ಸಹ ಹಾಳಾಗುತ್ತಿದ್ದಾರೆ.ಮಕ್ಕಳ ಮೇಲೆ ಪರಿಣಾಮ ಕೆಟ್ಟ ಬೀರುತ್ತಿದೆ. ಅಕ್ರಮ ಮದ್ಯ ‌ಮಾರಾಟದಿಂದಾಗಿ ಮೂಡನಹಳ್ಳಿ ಗ್ರಾಮದಲ್ಲಿ ಅಶಾಂತಿ ಸೃಷ್ಟಿಯಾಗಿದೆ. ಗ್ರಾಮದ ನೆಮ್ಮದಿ ಹಾಳಾಗಿದೆ ಎಂದು ಪ್ರತಿಭಟನಾ ನಿರತ ಮಹಿಳೆಯರು ಹಾಗೂ ಗ್ರಾಮಸ್ಥರು ಗಂಭೀರ ಆರೋಪ‌ ಮಾಡಿದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!