ಸಿದ್ದರಾಮಯ್ಯ ವಿರುದ್ಧದ ಆರೋಪ ಸಾಬೀತಿಗೆ ಮತ್ತೊಂದು ಅವಕಾಶ ಸಿಕ್ತು ಎಂದ ಸ್ನೇಹಮಯಿ ಕೃಷ್ಣ!

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಅಕ್ರಮವಾಗಿ ನಿವೇಶನ ಪಡೆದಿದೆ ಎಂಬ ಆರೋಪದ ಪ್ರಕರಣದಲ್ಲಿ, ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಇದೀಗ ಮೇಲ್ಮನವಿ ಸಲ್ಲಿಸಿದೆ. ಈ ಬೆಳವಣಿಗೆಯ ಕುರಿತು ದೂರುದಾರ ಹಾಗೂ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು . ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಲೋಕಾಯುಕ್ತದ ಬಿ ರಿಪೋರ್ಟ್​ ಅಂಗೀಕರಿಸಿದ ಆದೇಶವನ್ನು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಈಗಾಗಲೇ ಉಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.

ಇದೀಗ ಇಡಿ ಕೂಡ ಮೇಲ್ಮನವಿ ಸಲ್ಲಿಸಿರುವುದು ತಮ್ಮ ಹೋರಾಟಕ್ಕೆ ಪರೋಕ್ಷ ಬೆಂಬಲ ನೀಡಿದಂತಾಗಿದೆ ಎಂದು ಕೃಷ್ಣ ತಿಳಿಸಿದ್ದಾರೆ. ಒಂದು ತನಿಖಾ ಸಂಸ್ಥೆ ಸಾಕ್ಷಿಗಳಿಲ್ಲ ಎಂದು ಬಿ ರಿಪೋರ್ಟ್ ಸಲ್ಲಿಸಿದರೆ, ಮತ್ತೊಂದು ತನಿಖಾ ಸಂಸ್ಥೆ ಸಾಕ್ಷಿಗಳಿವೆ ಎಂದು ಹೇಳಿದಾಗ ನ್ಯಾಯಾಲಯವು ಅರ್ಜಿಯನ್ನು ಗಂಭೀರವಾಗಿ ಪರಿಗಣಿಸುತ್ತದೆ ಎಂದು ಅವರು ಹೇಳಿದ್ದಾರೆ.

ಇಡಿ ಮತ್ತು ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಎರಡೂ ಮೇಲ್ಮನವಿಗಳನ್ನು ಮಾನ್ಯ ಉಚ್ಚ ನ್ಯಾಯಾಲಯ ಒಟ್ಟಿಗೆ ವಿಚಾರಣೆ ನಡೆಸಿ, ಜನಪದ ವಿಶೇಷ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಿ, ಸಿದ್ದರಾಮಯ್ಯ ಅವರ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಲು ಅವಕಾಶ ನೀಡುವ ವಿಶ್ವಾಸವಿದೆ ಎಂದು ಸ್ನೇಹಮಯಿ ಕೃಷ್ಣ ಹೇಳಿದ್ದಾರೆ. ಮೇಲ್ಮನವಿ ಸಲ್ಲಿಸಿದ ನಂತರ, ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆ ದಿನಾಂಕ ನಿಗದಿಪಡಿಸಲಾಗುತ್ತದೆ. ನಂತರ ಸಾಕ್ಷಾಧಾರಗಳೊಂದಿಗೆ ವಾದ ವಿವಾದಗಳು ನಡೆಯಲಿವೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!