‘ಜೈಲರ್ 2’ ಚಿತ್ರಕ್ಕೆ ಪವನ್ ಕಲ್ಯಾಣ್ ನೋ: ಅತಿಥಿ ಪಾತ್ರದ ಆಯ್ಕೆಯಲ್ಲೇ ಸಿನೆಮಾತಂಡಕ್ಕೆ ಎದುರಾಯ್ತು ದೊಡ್ಡ ವಿಘ್ನ!

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ಸಿನೆಮಾ ‘ಜೈಲರ್ 2’ ಈಗ ಅತಿಥಿ ಪಾತ್ರವೊಂದರ ಆಯ್ಕೆಯಿಂದಾಗಿ ಸುದ್ದಿಯಲ್ಲಿದೆ. ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣಗೊಂಡು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದರೂ, ಕೇವಲ ಐದು ದಿನಗಳ ಕಾಲ ಶೂಟಿಂಗ್ ಮಾಡಬೇಕಿರುವ ಒಂದು ಪ್ರಮುಖ ಅತಿಥಿ ಪಾತ್ರಕ್ಕೆ ಸೂಕ್ತ ನಟ ಸಿಗದೆ ಚಿತ್ರತಂಡ ಕಂಗಾಲಾಗಿದೆ. ಈ ಮಹತ್ವದ ಪಾತ್ರಕ್ಕಾಗಿ ಮೊದಲು ನಂದಮೂರಿ ಬಾಲಕೃಷ್ಣ ಮತ್ತು ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್ ಅವರನ್ನು ಸಂಪರ್ಕಿಸಲಾಗಿತ್ತು. ಆದರೆ ಅವರಿಬ್ಬರೂ ನಯವಾಗಿ ತಿರಸ್ಕರಿಸಿದ ಬೆನ್ನಲ್ಲೇ, ಈಗ ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಕೂಡ ಈ ಆಫರ್ ಅನ್ನು ನಿರಾಕರಿಸಿದ್ದಾರೆ ಎನ್ನಲಾಗಿದೆ.

ರಾಜಕೀಯ ಒತ್ತಡದ ಕಾರಣ ಹಿಂದೆ ಸರಿದ ಪವನ್ ಕಲ್ಯಾಣ್:
ಪವನ್ ಕಲ್ಯಾಣ್ ಪ್ರಸ್ತುತ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಸಕ್ರಿಯ ರಾಜಕೀಯ ಜವಾಬ್ದಾರಿಗಳ ಕಾರಣದಿಂದ ಚಿತ್ರೀಕರಣಕ್ಕೆ ಸಮಯ ನೀಡಲು ಅಸಾಧ್ಯ ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ತೆಲುಗಿನಲ್ಲಿಯೂ ಅವರು ಯಾವುದೇ ಹೊಸ ಚಿತ್ರಗಳನ್ನು ಒಪ್ಪಿಕೊಳ್ಳುತ್ತಿಲ್ಲ. ರಜನಿಕಾಂತ್, ಶಿವರಾಜ್‌ಕುಮಾರ್ ಮತ್ತು ಮೋಹನ್‌ಲಾಲ್ ಅವರಂತಹ ದಿಗ್ಗಜರ ಜೊತೆ ಪವನ್ ಕಲ್ಯಾಣ್ ಅವರನ್ನು ಒಂದೇ ತೆರೆಯ ಮೇಲೆ ನೋಡಬೇಕೆಂಬ ಅಭಿಮಾನಿಗಳ ಆಸೆಗೆ ಈ ನಿರ್ಧಾರದಿಂದ ತಣ್ಣೀರೆರಚಿದಂತಾಗಿದೆ.

ಬಿಡುಗಡೆಯ ತಯಾರಿಯಲ್ಲಿ ‘ಜೈಲರ್ 2’:
ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಈ ಚಿತ್ರವನ್ನು ಸನ್ ಪಿಕ್ಚರ್ಸ್ ಅದ್ಧೂರಿಯಾಗಿ ನಿರ್ಮಿಸುತ್ತಿದ್ದು, ಅನಿರುದ್ಧ್ ರವಿಚಂದರ್ ಸಂಗೀತ ನೀಡುತ್ತಿದ್ದಾರೆ. ಈ ಬಾರಿ ಚಿತ್ರದಲ್ಲಿ ಎಸ್‌ಜೆ ಸೂರ್ಯ ಅವರು ಪ್ರಬಲ ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಆಗಸ್ಟ್ ಎರಡನೇ ವಾರದಲ್ಲಿ ಸಿನಿಮಾ ತೆರೆಗೆ ಬರುವ ನಿರೀಕ್ಷೆಯಿದೆ. ಆದರೆ, ಪ್ರಮುಖ ಅತಿಥಿ ಪಾತ್ರದ ಗೊಂದಲ ಇನ್ನೂ ಬಗೆಹರಿಯದಿರುವುದು ಚಿತ್ರತಂಡಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!