ಅಂಬೇಡ್ಕರ್ ಅವರ ಜೀವನ ಚರಿತ್ರೆ

ಡಾ ಬಿ. ಆರ್ ಅಂಬೇಡ್ಕರ್ ರವರು 14ನೇ ಏಪ್ರಿಲ್, 1891 ಮಧ್ಯಪ್ರದೇಶದ ಮಾಹೋ ಎಂಬ ಮಿಲಿಟರಿ ಕ್ಯಾಂಪ್ ನಲ್ಲಿ ಹುಟ್ಟಿದರು. ಅಂಬೇಡ್ಕರ್ ರವರು ಮೂಲತಃ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಖೇಡಾ ತಾಲ್ಲೂಕಿನ ಅಂಬೆವಾಡ ಗ್ರಾಮದವರು. ಇವರು ಮಹಾರ‍ ಜಾತಿಯಲ್ಲಿ ಹುಟ್ಟಿದರು. ಈ ಜಾತಿಯವರು ಹೆಚ್ಚಿನ ಜನ ಬ್ರಿಟಿಷ್ ಸರ್ಕಾರದ ಮಿಲಿಟರಿ ಸೇವೆಯಲ್ಲಿ ಉದ್ಯೋಗಕ್ಕಾಗಿ ಸೇರುತ್ತಿದ್ದರು.

ಇವರ ಅಜ್ಜ ಮಾಲೋಜಿ ಸಕ್ಪಾಲ್ ಅವರು ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ಬಾಂಬೆ ಸೇನೆಯಲ್ಲಿ ಸೇರಿ, ಹವಾಲ್ದಾರರಾಗಿ ನಿವೃತ್ತಿ ಹೊಂದಿದ್ದರು. ಇವರು ಆ ಕಾಲಕ್ಕೆ 19 ಮೆಡಲ್ ಗಳನ್ನು ಗಳಿಸಿದ್ದರು. ಇವರಿಗೆ ಇಬ್ಬರು ಮಕ್ಕಳು ರಾಮಜಿ ಸಕ್ಪಾಲ್, ಮೀರಾ ಸಕ್ಪಾಲ್. ರಾಮಜಿ ಸಕ್ಪಾಲ್ ಅವರ ಹೆಂಡತಿ ಭೀಮಬಾಯಿ. ಇವರು ಠಾಣೆ ಜಿಲ್ಲೆಯ ಮುರಬಾದಕರ್ ಎಂಬ ಕುಟುಂಬದವರು.

ಇವರ ತಂದೆ ಹಾಗೂ ಆರು ಜನ ಚಿಕ್ಕಪ್ಪಂದಿರು, ಸೈನ್ಯದಲ್ಲಿ ಸುಬೇದಾರರಾಗಿದ್ದರು.ರಾಮಜಿ ಮತ್ತು ಭೀಮಬಾಯಿ ರವರು ಇಬ್ಬರು ಕಷ್ಟ ಸಹಿಷ್ಣುಗಳಾದ ಸತಿಪತಿಗಳಾಗಿದ್ದರು. ಇವರಿಗೆ 14 ಮಕ್ಕಳು ಹುಟ್ಟಿದರು. ಈ 14ನೇ ಮಗುವೇ ಅಂಬೇಡ್ಕರ್. ಅಂಬೇಡ್ಕರ್ ಅವರ ಮೊದಲ ಹೆಸರು ಭೀಮರಾವ್ ಆಗಿತ್ತು. ಡಾ. ಅಂಬೇಡ್ಕರರು ನಾನು ನನ್ನ ತಂದೆ ತಾಯಿಯರಿಗೆ 14 ನೇ ರತ್ನನಾಗಿದ್ದೇನೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದರು.

ರಾಮಜಿ ಸಕ್ಪಾಲ್ ರವರಿಗೆ 14 ಮಕ್ಕಳಲ್ಲಿ ಬದುಕುಳಿದ್ದಿದ್ದು 5 ಜನ ಮಕ್ಕಳು, ಅವರು ಮಂಜುಳಾ, ತುಳಸಿ, ಬಲರಾಮ, ಆನಂದರಾವ್ ಮತ್ತು ಭೀಮರಾವ್. ಭೀಮರಾವ್ 2 ವರ್ಷದ ಬಾಲಕನಿದ್ದಾಗ ತಂದೆ ನೌಕರಿಯಿಂದ ನಿವೃತ್ತಿ ಹೊಂದಿದರು. ಇವರು 14 ವರ್ಷಗಳವರೆಗೆ ಮಿಲಿಟರಿ ಶಾಲೆಯಲ್ಲಿ ಮುಖ್ಯೋಪಾಧ್ಯಯರಾಗಿ ಸೇವೆ ಸಲ್ಲಿಸಿದ್ದರು. ಇವರು ಮರಾಠಿ, ಹಿಂದಿ ಭಾಷೆಯಲ್ಲಿ ಪ್ರಬುದ್ಧ ಜ್ಞಾನ ಹೊಂದಿದ್ದರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!