ಹೆಮ್ಮರಗಾಲ ಪ್ರೌಢಶಾಲೆಯಲ್ಲಿ ಗುರುವಂದನಾ ಮತ್ತು ಸ್ನೇಹ ಸಮ್ಮಿಲನ!

 

ನಂಜನಗೂಡು: ತಾಲ್ಲೂಕಿನ ಹೆಮ್ಮರಗಾಲ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ‘ಗುರುವಂದನಾ ಮತ್ತು ಸ್ನೇಹ ಸಮ್ಮಿಲನ’ ಕಾರ್ಯಕ್ರಮವು ಅತ್ಯಂತ ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ನೆರವೇರಿತು.20 ವರ್ಷಗಳ(7300) ದಿನಗಳ ನಂತರ ಒಂದೆಡೆ ಸೇರಿದ ಹಳೆಯ ವಿದ್ಯಾರ್ಥಿಗಳು ತಮ್ಮ ಶಾಲಾ ದಿನಗಳ ಸವಿ ನೆನಪುಗಳನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಅಂದಿನ ಕಾಲದಲ್ಲಿ ವಿದ್ಯೆ ಕಲಿಸಿದ, ಜೈ ಕುಮಾರಸ್ವಾಮಿ(ಜೆಕೆಎಸ್) ಸದಾಶಿವ(ಜಿಸಿಎಸ್) ಬಸವಣ್ಣ(ಬಿಎಂಬಿ) ಕುಮಾರಸ್ವಾಮಿ (ಕೆಎಸ್) ವೆಂಕಟೇಶ್(ವಿಕೆ) ಭೈರವೇಶ್ವರ, ಅಟೆಂಡರ್ ಮಹದೇವು ಸೇರಿದಂತೆ ಸುಮಾರು 8 ಮಂದಿ ಹಿರಿಯ ಶಿಕ್ಷಕರನ್ನು ಆತ್ಮೀಯವಾಗಿ ಸನ್ಮಾನಿಸಿ, ಗುರುವಂದನೆ ಸಲ್ಲಿಸಲಾಯಿತು. ತಮ್ಮ ಶಿಷ್ಯಂದಿರು ಇಂದು ಸಮಾಜದ ವಿವಿಧ ಸ್ತರಗಳಲ್ಲಿ ಗುರುತಿಸಿಕೊಂಡಿರುವುದನ್ನು ಕಂಡು ಶಿಕ್ಷಕರು ಭಾವುಕರಾದರು.

ಈ ಸಂದರ್ಭದಲ್ಲಿ 120ಕ್ಕೂ ಹೆಚ್ಚು ಹಳೆಯ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮಕ್ಕೆ ಕಳೆ ನೀಡಿದರು.ಕಾರ್ಯಕ್ರಮದ ಉದ್ದಕ್ಕೂ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ನಡುವಿನ ಪ್ರೀತಿ, ಗೌರವದ ಮಧುರ ಬಾಂಧವ್ಯ ಮೇಳೈಸಿತ್ತು. ಶಿಕ್ಷಕರು ವಿದ್ಯಾರ್ಥಿಗಳನ್ನು ಹರಸುತ್ತಾ ಆಡಿದ ಮಾತುಗಳು ಎಲ್ಲರ ಕಣ್ಣಾಲಿಗಳು ಒದ್ದೆಯಾಗುವಂತೆ ಮಾಡಿದವು. ಇಡೀ ವಾತಾವರಣವು ಭಾವೋದ್ವೇಗ ಹಾಗೂ ಸಂತಸದಿಂದ ಕೂಡಿತ್ತು.ಸನ್ಮಾನ ಸ್ವೀಕರಿಸಿದ ಹಿರಿಯ ಶಿಕ್ಷಕರು ಮಾತನಾಡಿ, “ವಿದ್ಯಾರ್ಥಿಗಳು ಇಷ್ಟು ವರ್ಷಗಳ ನಂತರವೂ ನಮ್ಮನ್ನು ನೆನಪಿಟ್ಟುಕೊಂಡು ಗೌರವಿಸುತ್ತಿರುವುದು ಜೀವನದ ಅತ್ಯಂತ ಹೆಮ್ಮೆಯ ಕ್ಷಣ,” ಎಂದು ಹರ್ಷ ವ್ಯಕ್ತಪಡಿಸಿದರು.

ಹಳೆಯ ವಿದ್ಯಾರ್ಥಿಗಳು ತಮ್ಮ ನೆಚ್ಚಿನ ಗುರುಗಳ ಪಾದಕ್ಕೆ ನಮಸ್ಕರಿಸಿ ಆಶೀರ್ವಾದ ಪಡೆದರು.ಒಟ್ಟಾರೆಯಾಗಿ ಈ ಸ್ನೇಹ ಸಮ್ಮಿಲನವು ಹಳೆಯ ನೆನಪುಗಳನ್ನು ಮೆಲುಕು ಹಾಕುವುದರ ಜೊತೆಗೆ, ಗುರು-ಶಿಷ್ಯರ ಪರಂಪರೆಯನ್ನು ಎತ್ತಿ ಹಿಡಿಯುವಲ್ಲಿ ಯಶಸ್ವಿಯಾಯಿತು. ಕಾರ್ಯಕ್ರಮ ಆಯೋಜಿಸಿದ ಪತ್ರಕರ್ತ ಮಹೇಶ್ ಕೆಬ್ಬೆ,ವಿಕಾಸ್, ಶೃತಿ,ಸೋಮಣ್ಣ,ರವಿಶಂಕರ್, ಸೇರಿದಂತೆ ಕೆಲವರಿಗೆ ಸಹಪಾಠಿಗಳೇ ಸನ್ಮಾನಿಸಿದ್ದು ಅರ್ಥಪೂರ್ಣವಾಗಿತ್ತು.

Related Posts

ಬಸ್ ದರ ಏರಿಕೆ ಪ್ರಸ್ತಾವ ಕೈಬಿಡುವಂತೆ ಸರ್ಕಾರಕ್ಕೆ ಎಸ್‌ಡಿಪಿಐ ಆಗ್ರಹ

ಮೈಸೂರು, ಜೂನ್ 26: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ರಾಜ್ಯ ಸರ್ಕಾರ ತನ್ನ ಸಾಂವಿಧಾನಿಕ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಬೇಕು. ಅದೇ…

ಬಂಡೀಪುರ, ನಾಗರಹೊಳೆ ಸಫಾರಿ ಪುನರಾರಂಭ ​​

ವನ್ಯಜೀವಿ ಪ್ರಿಯರಿಗೆ ಬಿಗ್ ನ್ಯೂಸ್ ಸಿಕ್ಕಿದ್ದು, ಬಂಡೀಪುರ ಹಾಗೂ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ತಾಂತ್ರಿಕ ಸಮಿತಿಯ ವರದಿ ಆಧರಿಸಿ ಪೂರ್ಣ ಪ್ರಮಾಣದ ಜಂಗಲ್ ಸಫಾರಿ ಪುನರಾರಂಭಿಸಲು ರಾಜ್ಯ ಸರ್ಕಾರ ಹಸಿರು ನಿಶಾನೆ ನೀಡಿದೆ. ಮಾನವ ಮತ್ತು ವನ್ಯಜೀವಿ ಸಂಘರ್ಷದ ಕಾರಣದಿಂದಾಗಿ…

You Missed

ಬಸ್ ದರ ಏರಿಕೆ ಪ್ರಸ್ತಾವ ಕೈಬಿಡುವಂತೆ ಸರ್ಕಾರಕ್ಕೆ ಎಸ್‌ಡಿಪಿಐ ಆಗ್ರಹ

ಬಸ್ ದರ ಏರಿಕೆ ಪ್ರಸ್ತಾವ ಕೈಬಿಡುವಂತೆ ಸರ್ಕಾರಕ್ಕೆ ಎಸ್‌ಡಿಪಿಐ ಆಗ್ರಹ

ಬಂಡೀಪುರ, ನಾಗರಹೊಳೆ ಸಫಾರಿ ಪುನರಾರಂಭ ​​

ಬಂಡೀಪುರ, ನಾಗರಹೊಳೆ ಸಫಾರಿ  ಪುನರಾರಂಭ ​​

ನಮ್ಮ ಮೆಟ್ರೋ ರೈಲು ಮತ್ತೆ ಕೈಕೊಟ್ಟಿದ್ದೇಕೆ? ?

ನಮ್ಮ ಮೆಟ್ರೋ ರೈಲು ಮತ್ತೆ ಕೈಕೊಟ್ಟಿದ್ದೇಕೆ? ?

ಏಕಾಏಕಿ ಚಿರತೆ ದಾಳಿ, ಆದಿವಾಸಿ ಮಹಿಳೆ ಬದುಕಿದ್ದೇ ಪವಾಡ!

ಏಕಾಏಕಿ ಚಿರತೆ ದಾಳಿ,  ಆದಿವಾಸಿ ಮಹಿಳೆ ಬದುಕಿದ್ದೇ ಪವಾಡ!

Dolly’s ‘Mother Promise’ release date set

Dolly’s ‘Mother Promise’ release date set

‘ಅಪ್ಪಾ, ಹೇಗಾದರೂ ಕಾಪಾಡು…’ ಕೊನೆಯ ಕರೆ

‘ಅಪ್ಪಾ, ಹೇಗಾದರೂ ಕಾಪಾಡು…’ ಕೊನೆಯ ಕರೆ