ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು ಹಾರಿಸಿ ದಾರುಣವಾಗಿ ಕೊಲೆ ಮಾಡಲಾಗಿದೆ.

ವಿಜಯಪುರ ಜಿಲ್ಲೆಯ ಚಡಚನ ತಾಲೂಕಿನ ಗೋವಿಂದಪುರ ಗ್ರಾಮದ ಬಳಿ ಭೀಮಾ ನದಿ ತಟದಲ್ಲಿ ಈ ರಕ್ತಚರಿತ್ರೆ ನಡೆದಿದೆ.

ಹತ್ಯೆಯಾದ ದುರ್ದೈವಿಗಳ ವಿವರ:

ಜಮೀನು ಮಾಲೀಕರಾದ ನಿರಾಳೆ ಕುಟುಂಬದ ಸದಸ್ಯರು ಹಾಗೂ ಅವರ ಆಪ್ತರು ಈ ಘಟನೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ದುಂಡಪ್ಪ ಶಿವಪುತ್ರ, ಚಂದ್ರಕಾಂತ ,ರಾಹುಲ್, ಸಮರ್ಥ್ ,ಶಬ್ಬೀರ್ ಅತ್ತಾರ್ (ಸ್ನೇಹಿತ)

(ಮತ್ತೊಬ್ಬರ ವಿವರ ಲಭ್ಯವಾಗಬೇಕಿದೆ)

ಘಟನೆಯ ಹಿನ್ನೆಲೆ ಏನು?

ವಿಶ್ವಾಸಾರ್ಹ ಮೂಲಗಳ ಪ್ರಕಾರ, ಹತ್ಯೆ ನಡೆದ ಜಮೀನನ್ನು ನಿರಾಳೆ ಕುಟುಂಬದವರು ಇತ್ತೀಚೆಗಷ್ಟೇ ಖರೀದಿಸಿದ್ದರು. ಈ ಜಮೀನಿನ ವಿಚಾರವಾಗಿ ಮೊದಲಿನಿಂದಲೂ ವ್ಯಾಜ್ಯವಿತ್ತು ಎನ್ನಲಾಗಿದೆ. ಶನಿವಾರ ಮಧ್ಯಾಹ್ನ ನಿರಾಳೆ ಕುಟುಂಬದವರು ಜಮೀನಿನ ಬಳಿ ಇದ್ದಾಗ, ಹಠಾತ್ ದಾಳಿ ನಡೆದಿದೆ.

ಬೈಕ್‌ಗಳಲ್ಲಿ ಬಂದ 15ರಿಂದ 20 ಮಂದಿ ಯುವಕರ ರೌಡಿ ಗ್ಯಾಂಗ್, ಏಕಾಏಕಿ ಮಾರಕಾಸ್ತ್ರಗಳಿಂದ ನಿರಾಳೆ ಕುಟುಂಬದವರ ಮೇಲೆ ಮುಗಿಬಿದ್ದಿದೆ. ಅಷ್ಟೇ ಅಲ್ಲದೆ, ಗುಂಡು ಹಾರಿಸುವ ಮೂಲಕ ಸ್ಥಳದಲ್ಲಿದ್ದ ಆರೂ ಜನರನ್ನು ಅತ್ಯಂತ ಕ್ರೂರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಧಾವಿಸಿದ ಪೊಲೀಸ್ ಪಡೆ
ವಿಷಯ ತಿಳಿಯುತ್ತಿದ್ದಂತೆ ಚಡಚನ ಠಾಣೆಯ ಪೊಲೀಸರು ಮತ್ತು ಹಿರಿಯ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ.

ಕೋಲಾಹಲ ಸೃಷ್ಟಿಸಿರುವ ಈ ಸಾಮೂಹಿಕ ನರಮೇಧದ ಬೆನ್ನಟ್ಟಿರುವ ಪೊಲೀಸರು, ಆರೋಪಿಗಳ ಪತ್ತೆಗಾಗಿ ವಿಶೇಷ ತನಿಖಾ ತಂಡಗಳನ್ನು ರಚಿಸಿದ್ದಾರೆ. ಹಂತಕರ ಪತ್ತೆಗೆ ಜಾಲ ಬೀಸಲಾಗಿದ್ದು, ತನಿಖೆ ತೀವ್ರಗತಿಯಲ್ಲಿ ಮುಂದುವರಿದಿದೆ.

Related Posts

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

ರಾಮ್‌ಚರಣ್‌, ಕಿಚ್ಚ ಸುದೀಪ್‌ ಬಾಡಿಗಾರ್ಡ್‌ಗಳ ನಂತರ ಈಗ ಯಶ್‌ ಅಂಗರಕ್ಷಕನ ಹವಾ!

ಚಿತ್ರರಂಗದಲ್ಲಿ ನೆಚ್ಚಿನ ನಟರ ಜೊತೆಗೆ ಅವರ ಪರ್ಸನಲ್‌ ಬಾಡಿಗಾರ್ಡ್‌ಗಳೂ ಇತ್ತೀಚೆಗೆ ಭಾರಿ ಸದ್ದು ಮಾಡುತ್ತಿದ್ದು, ಅಭಿಮಾನಿಗಳಲ್ಲಿ ಸಖತ್ ಟ್ರೆಂಡ್ ಸೃಷ್ಟಿಸುತ್ತಿದ್ದಾರೆ. ನಟ ರಾಮ್‌ ಚರಣ್‌ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾ ‘ಪೆದ್ದಿ’ ಪ್ರಚಾರದ ವೇಳೆಯಲ್ಲಿ ಅವರ ಪರ್ಸನಲ್ ಸೆಕ್ಯೂರಿಟಿ ಗಾರ್ಡ್, ಆಫ್ರಿಕಾ…

You Missed

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳದ ಭೀಕರ ಪ್ರವಾಹಕ್ಕೆ ಚೀನಾದ ಗಡಿ ನಿರ್ಮಾಣ ಕಾರ್ಯವೇ ಕಾರಣವೇ?

ನೇಪಾಳದ ಭೀಕರ ಪ್ರವಾಹಕ್ಕೆ ಚೀನಾದ ಗಡಿ ನಿರ್ಮಾಣ ಕಾರ್ಯವೇ ಕಾರಣವೇ?

ಈರುಳ್ಳಿ ಅಭಾವ ಮತ್ತು ಬೆಲೆ ಏರಿಕೆ ಭೀತಿ

ಈರುಳ್ಳಿ ಅಭಾವ ಮತ್ತು ಬೆಲೆ ಏರಿಕೆ ಭೀತಿ

ರಾಮ್‌ಚರಣ್‌, ಕಿಚ್ಚ ಸುದೀಪ್‌ ಬಾಡಿಗಾರ್ಡ್‌ಗಳ ನಂತರ ಈಗ ಯಶ್‌ ಅಂಗರಕ್ಷಕನ ಹವಾ!

ರಾಮ್‌ಚರಣ್‌, ಕಿಚ್ಚ ಸುದೀಪ್‌ ಬಾಡಿಗಾರ್ಡ್‌ಗಳ ನಂತರ ಈಗ ಯಶ್‌ ಅಂಗರಕ್ಷಕನ ಹವಾ!

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು