ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೇರಿದ ಭಾರತ

ಗಯಾನಾ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಂ​ನಲ್ಲಿ ನಡೆದ 2024ರ ಟಿ20 ವಿಶ್ವಕಪ್​​ ಸೆಮಿ ಫೈನಲ್ ಹೈವೋಲ್ಟೇಜ್​ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಮ್​ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಟಿ20 ವಿಶ್ವಕಪ್​ ಫೈನಲ್​ ಪ್ರವೇಶಿಸಿದೆ.

ನಿನ್ನೆ ಗಯಾನಾ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಂ​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ, ನಾಯಕ ರೋಹಿತ್ ಶರ್ಮಾ ಅವರ ಅರ್ಧಶತಕ ಮತ್ತು ಸೂರ್ಯಕುಮಾರ್ ಯಾದವ್ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 171 ರನ್ ಕಲೆಹಾಕಿತ್ತು.

ಭಾರತ ನೀಡಿದ ಬಿಗ್​ ಟಾರ್ಗೆಟ್​ ಬೆನ್ನತ್ತಿದ ಇಂಗ್ಲೆಂಡ್​ ಭಾರತ ತಂಡದ ಬೌಲರ್​ಗಳ ಮಾರಕ ದಾಳಿಗೆ ತತ್ತರಿಸಿತು. ಹಾಗಾಗಿ ಇಂಗ್ಲೆಂಡ್ ತಂಡ 16.4 ಓವರ್​ನಲ್ಲಿ ಕೇವಲ 103 ರನ್​ಗಳಿಗೆ ಆಲೌಟ್​ ಆಗಿದೆ. ಭಾರತ ಪರ ಕುಲ್ದೀಪ್​​ ಯಾದವ್​​, ಅಕ್ಷರ್​ ಪಟೇಲ್​ ತಲಾ 3 ವಿಕೆಟ್​ ತೆಗೆದು ಕಮಾಲ್​ ಮಾಡಿದ್ರು. ಬೂಮ್ರಾ ಕೂಡ 2 ವಿಕೆಟ್​ ತೆಗೆದರು. ಭಾರತ ತಂಡಕ್ಕೆ ಬರೋಬ್ಬರಿ 68 ರನ್​ಗಳ ಜಯ ಸಿಕ್ಕಿದೆ.

Related Posts

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

ಬಿಸಿಸಿಐಗೆ ಸ್ಪಾನ್ಸರ್ ಶಿಪ್ ಬಿಸಿ: ದುಬಾರಿ ಬೆಲೆಯಿಂದ ಹಿಂದೆ ಸರಿದ ಕಂಪನಿಗಳು!

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಭಾರತ ಕ್ರಿಕೆಟ್ ತಂಡದ ತವರಿನ ಪಂದ್ಯಗಳಿಗೆ ಹೊಸ ಟೈಟಲ್ ಸ್ಪಾನ್ಸರ್ ಹುಡುಕಲು ತೀವ್ರ ಹರಸಾಹಸ ಪಡುತ್ತಿದೆ. ಆಗಸ್ಟ್ 13ರ ಅಂತಿಮ ಗಡುವು ಮುಗಿದಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಬಿಡ್‌ಗಳು ಬಾರದಿರುವುದು ಜಗತ್ತಿನ ಅತಿ ಶ್ರೀಮಂತ ಕ್ರಿಕೆಟ್…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!