ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ (FSSAI) ಪ್ರಸಿದ್ಧ ‘ಎವರೆಸ್ಟ್ ಫುಡ್ ಪ್ರಾಡಕ್ಟ್ಸ್’ ಹಾಗೂ ‘ಲಾಲ್ಜಿ ಗೋಧು (LG)’ ಕಂಪನಿಗಳ ಇಂಗಿನ ಪುಡಿ (Asafoetida) ಮಾರಾಟವನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿದೆ. ಇತ್ತೀಚೆಗೆ ನಡೆದ ಪ್ರಯೋಗಾಲಯ ಪರೀಕ್ಷೆಗಳಲ್ಲಿ ಈ ಎರಡೂ ಬ್ರ್ಯಾಂಡ್‌ಗಳ ಇಂಗಿನ ಮಾದರಿಗಳು ನಿಗದಿತ ಆಹಾರ ಸುರಕ್ಷತಾ ಮಾನದಂಡಗಳನ್ನು ಪೂರೈಸುವಲ್ಲಿ ವಿಫಲವಾಗಿದ್ದು, ಕಳಪೆ ಗುಣಮಟ್ಟದಿಂದ ಕೂಡಿವೆ ಎಂಬುದು ದೃಢಪಟ್ಟಿದೆ.
ಸಾಮಾಜಿಕ ಜಾಲತಾಣದ ಅಧಿಕೃತ ಪೋಸ್ಟ್ ಮೂಲಕ ಈ ಮಾಹಿತಿಯನ್ನು ಹಂಚಿಕೊಂಡಿರುವ FSSAI, ಗ್ರಾಹಕರ ಆರೋಗ್ಯದ ದೃಷ್ಟಿಯಿಂದ ಈ ಕಠಿಣ ಕ್ರಮ ಕೈಗೊಂಡಿರುವುದಾಗಿ ತಿಳಿಸಿದೆ. ಜೊತೆಗೆ, ನಿಯಮಾವಳಿಗಳಿಗೆ ಅನುಗುಣವಾಗಿ ಉತ್ಪನ್ನದ ಗುಣಮಟ್ಟವನ್ನು ತಕ್ಷಣವೇ ಸುಧಾರಿಸಲು ಎರಡೂ ಸಂಸ್ಥೆಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ.




