ವಂದೇ ಮಾತರಂ’ ಚರಣ ಕಡಿತ: ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ PIL

ರಾಜ್ಯ ಸರ್ಕಾರವು ಇತ್ತೀಚೆಗೆ ‘ವಂದೇ ಮಾತರಂ’ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾಡಬೇಕು ಎಂದು ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ, ವಕೀಲ ಗಿರೀಶ್ ಭಾರದ್ವಾಜ್ ಅವರು ವಕೀಲ ಅಂಗದ್ ಕಾಮತ್ ಅವರ ಮೂಲಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದಾರೆ. ಸೆಪ್ಟೆಂಬರ್ 3ರ ಸಚಿವ ಸಂಪುಟ ಸಭೆಯ ತೀರ್ಮಾನದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಸೆಪ್ಟೆಂಬರ್ 8ರಂದು ಈ ಕುರಿತು ಹೊರಡಿಸಿರುವ ಆದೇಶವು ಕೇಂದ್ರ ಸರ್ಕಾರದ ಮಾರ್ಗದರ್ಶಿ ಸೂತ್ರಗಳಿಗೆ ನೇರವಾಗಿ ವಿರುದ್ಧವಾಗಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ. ಕೇಂದ್ರ ಸರ್ಕಾರದ ಪ್ರೋಟೋಕಾಲ್ ಪ್ರಕಾರ ‘ವಂದೇ ಮಾತರಂ’ ಗೀತೆಯ ಆರು ಚರಣಗಳ ಸಂಪೂರ್ಣ ಸಂಯೋಜನೆಯೇ ಅಧಿಕೃತ ರೂಪವಾಗಿದ್ದು, ಅದನ್ನು ರಾಜ್ಯ ಸರ್ಕಾರವು ಕಾರ್ಯಾಂಗ ಆದೇಶದ ಮೂಲಕ ಬದಲಾಯಿಸಲು ಬರುವುದಿಲ್ಲ ಎಂಬುದು ಅರ್ಜಿಯ ಮುಖ್ಯ ಉಲ್ಲೇಖವಾಗಿದೆ.

ಸಂವಿಧಾನದ ಏಳನೇ ಅನುಸೂಚಿಯ ಪಟ್ಟಿ-I (ನಮೂದು 97) ಹಾಗೂ ವಿಧಿ 248ರ ಅಡಿಯಲ್ಲಿ ರಾಷ್ಟ್ರೀಯ ಸಂಕೇತಗಳ ಸ್ವರೂಪ ನಿಗದಿಪಡಿಸುವ ಅಧಿಕಾರ ಸಂಸತ್ತಿಗೆ ಮಾತ್ರವಿದೆ. ವಿಧಿ 162, 256 ಮತ್ತು 257(1) ರ ಪ್ರಕಾರ ರಾಜ್ಯ ಸರ್ಕಾರಕ್ಕೆ ಕೇಂದ್ರದ ಕಾಯ್ದೆ ಹಾಗೂ ಅಧಿಕಾರಕ್ಕೆ ವಿರುದ್ಧವಾಗಿ ಕಾರ್ಯಾಂಗ ಆದೇಶ ಹೊರಡಿಸುವ ಅಧಿಕಾರವಿಲ್ಲ. ಅಲ್ಲದೆ, ರಾಷ್ಟ್ರಗೀತೆಯ ಗಾಯನಕ್ಕೆ ಕಾನೂನು ರಕ್ಷಣೆ ನೀಡುವ ‘Prevention of Insults to National Honour (Amendment) Act, 2026’ ಕಾಯ್ದೆಗೂ ರಾಜ್ಯ ಸರ್ಕಾರದ ಈ ಕ್ರಮ ತದ್ವಿರುದ್ಧವಾಗಿದೆ. ಈ ಹಿಂದೆ ಬಂದ ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ಆದೇಶಗಳು ಪ್ರಸಕ್ತ ಪ್ರಕರಣಕ್ಕೆ ಅನ್ವಯಿಸುವುದಿಲ್ಲ; ಏಕೆಂದರೆ ಈ ಅರ್ಜಿಯು ವ್ಯಕ್ತಿಗತ ಕಡ್ಡಾಯ ಗಾಯನದ ಕುರಿತಾಗಿರದೆ, ಕೇಂದ್ರದ ನಿಯಮಗಳಿಗೆ ವಿರುದ್ಧವಾಗಿ ತನ್ನದೇ ಪ್ರೋಟೋಕಾಲ್ ರೂಪಿಸುವ ರಾಜ್ಯ ಸರ್ಕಾರದ ಅಧಿಕಾರವನ್ನು ಪ್ರಶ್ನಿಸಿದೆ.

ಇಷ್ಟೇ ಅಲ್ಲದೆ, ರಾಜ್ಯ ಸರ್ಕಾರವು ಈ ತೀರ್ಮಾನ ಕೈಗೊಂಡ ಪ್ರಕ್ರಿಯೆಯನ್ನೂ ಅರ್ಜಿಯಲ್ಲಿ ಬಲವಾಗಿ ಆಕ್ಷೇಪಿಸಲಾಗಿದೆ. ಸೆಪ್ಟೆಂಬರ್ 3ರ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯವನ್ನು ಯಾವುದೇ ಇಲಾಖಾ ಟಿಪ್ಪಣಿ ಅಥವಾ ಕಾನೂನು ಇಲಾಖೆಯ ಸಲಹೆ ಪಡೆಯದೆ ‘ಅನೌಪಚಾರಿಕ ಚರ್ಚೆ’ (Informal Discussion) ಮೂಲಕ ನಿರ್ಧರಿಸಲಾಗಿದ್ದು, ಇದು ‘Karnataka Government (Transaction of Business) Rules, 1977’ ರ ಸ್ಪಷ್ಟ ಉಲ್ಲಂಘನೆಯಾಗಿದೆ. ಈ ಆದೇಶವು ಸಂವಿಧಾನದ ವಿಧಿ 19(1)(a) ಅಡಿಯಲ್ಲಿರುವ ನಾಗರಿಕರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೂ ಧಕ್ಕೆ ತರುತ್ತದೆ ಎಂದು ಹೇಳಿರುವ ಅರ್ಜಿದಾರರು, ರಾಜ್ಯದ ಎಲ್ಲಾ ಅಧಿಕೃತ ಕಾರ್ಯಕ್ರಮಗಳಲ್ಲೂ ಕೇಂದ್ರ ಸರ್ಕಾರ ನಿಗದಿಪಡಿಸಿರುವ ಸಂಪೂರ್ಣ ಅಧಿಕೃತ ಆವೃತ್ತಿಯನ್ನೇ ಹಾಡುವಂತೆ ನಿರ್ದೇಶನ ನೀಡಬೇಕೆಂದು ನ್ಯಾಯಾಲಯವನ್ನು ಕೋರಿದ್ದಾರೆ.

Related Posts

ಸೆಪ್ಟೆಂಬರ್ 11ರ ಚಿನ್ನದ ದರ: 10 ಗ್ರಾಂ ಚಿನ್ನದ ಬೆಲೆಯಲ್ಲಿ 2,400 ರೂ ಇಳಿಕೆ

ಗುರುವಾರ ಏರಿಕೆಯಾಗಿದ್ದ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಶುಕ್ರವಾರ (ಸೆಪ್ಟೆಂಬರ್ 11) ಕಡಿಮೆಯಾಗಿವೆ. ಪ್ರತಿ ಗ್ರಾಂ ಚಿನ್ನದ ಬೆಲೆಯಲ್ಲಿ 240 ರೂ (10 ಗ್ರಾಂಗೆ 2,400 ರೂ) ಹಾಗೂ ಬೆಳ್ಳಿ ಬೆಲೆಯಲ್ಲಿ ಗ್ರಾಂಗೆ 10 ರೂ ಇಳಿಕೆಯಾಗಿದೆ. ಈ ಬೆಲೆ ಪರಿಷ್ಕರಣೆಯ…

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

You Missed

ವಂದೇ ಮಾತರಂ’ ಚರಣ ಕಡಿತ: ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ PIL

ವಂದೇ ಮಾತರಂ’ ಚರಣ ಕಡಿತ: ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ PIL

ಸೆಪ್ಟೆಂಬರ್ 11ರ ಚಿನ್ನದ ದರ: 10 ಗ್ರಾಂ ಚಿನ್ನದ ಬೆಲೆಯಲ್ಲಿ 2,400 ರೂ ಇಳಿಕೆ

ಸೆಪ್ಟೆಂಬರ್ 11ರ ಚಿನ್ನದ ದರ: 10 ಗ್ರಾಂ ಚಿನ್ನದ ಬೆಲೆಯಲ್ಲಿ 2,400 ರೂ ಇಳಿಕೆ

lja5nqb73ba7bxod16

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ