ತಿಳಿ ಹೇಳಿದ್ದಕ್ಕೆ ಕಾರು ಹರಿಸಿ ಯುವಕನ ಹತ್ಯೆ!

ಹಾಸನದಲ್ಲಿ ನಿಧಾನವಾಗಿ ಕಾರು ಓಡಿಸುವಂತೆ ತಿಳಿ ಹೇಳಿದ ಯುವಕನಿಗೆ ಗುದ್ದಿಸಿ ಹತ್ಯೆ ಮಾಡಿದ ಘಟನೆ ಹೊಳೆನರಸೀಪುರ ತಾಲೂಕಿನ ಸೂರನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹತ್ಯೆಯಾದ ಯುವಕನನ್ನು ಮನು(27) ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ 12 ಗಂಟೆ ಸಮಯದಲ್ಲಿ ಮನು, ಅಭಿಷೇಕ್, ರಾಕೇಶ್ ಹಾಗೂ ಕುಶಾಲ್ ರಸ್ತೆ ಪಕ್ಕದಲ್ಲಿ ನಿಂತು ಮಾತನಾಡುತ್ತಿದ್ದರು. ಈ ವೇಳೆ ಅಪರಿಚಿತ ವ್ಯಕ್ತಿ ಚಾಲನೆ ಮಾಡುತ್ತಿದ್ದ ಕಾರು ವೇಗವಾಗಿ ಬಂದಿದೆ. ಇದನ್ನು ಕಂಡ ಯುವಕರ ತಂಡ, ಕಾರು ಚಾಲಕನಿಗೆ ನಿಧಾನವಾಗಿ ಹೋಗು ಎಂದು ತಿಳಿ ಹೇಳಿದ್ದಾರೆ. ಇದರಿಂದ ಕೋಪಗೊಂಡ ಕಾರು ಚಾಲಕ ಸ್ವಲ್ಪ ದೂರು ಹೋಗಿ ತಿರುಗಿಸಿಕೊಂಡು ಬಂದು, ಮಾತನಾಡುತ್ತ ನಿಂತಿದ್ದವರಿಗೆ ಡಿಕ್ಕಿ ಹೊಡೆಸಿ, ಪರಾರಿಯಾಗಿದ್ದಾನೆ.

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಮನು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಸ್ನೇಹಿತರು ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳೀಯರು ಪ್ರತಿಭಟನೆ ನಡೆಸಿ, ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!