ಪ್ರೇಯಸಿಯ ಕಾಲಿಗೆ ಬಿದ್ದು ನಮಸ್ಕರಿಸಿದ ಯುವಕ, ಕುಣಿದು ಕುಪ್ಪಳಿಸಿದ ಯುವತಿ.

ಪ್ರೀತಿ ಯೇ ಹಾಗೆ, ಒಮ್ಮೆ ಪ್ರೀತಿಯಲ್ಲಿ ಬಿದ್ದರೆ ಈ ಜಗತ್ತೇ ಕಾಣುವುದಿಲ್ಲ. ಪ್ರೇಮಿಗಳು ತನ್ನನ್ನು ಪ್ರೀತಿಸುವ ಜೀವದ ಖುಷಿಗಾಗಿ ಏನು ಬೇಕಾದರೂ ಕೂಡ ಮಾಡಿಬಿಡುತ್ತಾರೆ. ಅದರಲ್ಲಿಯೂ ಈ ಹುಡುಗ ಪ್ರಾಮಾಣಿಕವಾಗಿ ಪ್ರೀತಿಸುತ್ತಿದ್ದರೆ ತನ್ನವಳಿಗಾಗಿ ಏನನ್ನು ಬೇಕಾದರೂ ಮಾಡಲು ಸಿದ್ಧವಿರುತ್ತಾನೆ. ಇದೀಗ ಪ್ರೇಮಿಯೊಬ್ಬನು ಮೆಟ್ರೋ ನಿಲ್ದಾಣದಲ್ಲಿ ತನ್ನ ಪ್ರೇಯಸಿಯ ಕಾಲಿಗೆ ಬಿದ್ದು ನಮಸ್ಕರಿಸಿದ್ದು, ಈ ಬಗೆಗಿನ ವಿಡಿಯೋವೊಂದು ಸೋಶಿಯಲ್ ಮೀಡಿಯಾ ದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

Satendra prathap ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ‘ಅಖಿಲ ಭಾರತ ಖಾಂತಿ ಮರ್ದ್ ಅಸೋಸಿಯೇಶನ್ನ ರಾಷ್ಟ್ರೀಯ ಅಧ್ಯಕ್ಷನಾಗಿರುವ ನಾನುಈ ಯುವಕನ ಪುರುಷ ಪ್ರಮಾಣಪತ್ರವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸುತ್ತೇನೆ. ಈ ಯುವಕನು ಗಂಡಸು ಜಾತಿಗೆ ಅವಮಾನ. ಈ ಪುರುಷರ ಸಂಘದಿಂದ ಈತನನ್ನು ಅಮಾನತ್ತುಗೊಳಿಸಬೇಕೆಂದು ಅಗ್ರಹಿಸುತ್ತೇನೆ. ಇಂತಹ ಯುವಕರು ನಮ್ಮ ಪುರುಷ ಸಮಾಜಕ್ಕೆ ಕಳಂಕ. ಇಂದು ಆಕೆಯ ಕಾಲಿಗೆ ನಮಸ್ಕರಿಸಿದ್ದಾನೆ. ನಾಳೆ ಆಕೆಯ ಕೈ-ಕಾಲುಗಳನ್ನು ಒತ್ತುತ್ತಾನೆ’ ಎಂದು ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದಾರೆ.
ವೈರಲ್ ಆಗಿರುವ ವಿಡಿಯೋದಲ್ಲಿ ಮೆಟ್ರೋ ನಿಲ್ದಾಣದ ಫ್ಲಾಟ್ ಫಾರ್ಮ್ ನಲ್ಲಿರುವ ಕಟ್ಟೆಯಲ್ಲಿ ಯುವಕನು ಕುಳಿತುಕೊಂಡಿರುವುದನ್ನು ಕಾಣಬಹುದು. ಎದುರಿಗೆ ಆತನ ಪ್ರೇಯಸಿಯೂ ನಿಂತುಕೊಂಡಿದ್ದು ಆತನು ಆಕೆಯ ಪಾದಗಳನ್ನು ಮೂರು ಸಲ ಮುಟ್ಟಿ ಕಣ್ಣಿಗೆ ಒತ್ತಿಕೊಳ್ಳುತ್ತಿರುವುದನ್ನು ಕಾಣಬಹುದು. ಆ ಬಳಿಕ ಕೆಲ ನಿಮಿಷಗಳ ಕಾಲ ಇಬ್ಬರೂ ಮಾತುಕತೆ ನಡೆಸಿದ್ದಾರೆ. ವಿಡಿಯೋದಲ್ಲಿ ಯುವತಿ ಕೈಯಲ್ಲಿ ಕ್ಯಾಂಡಿ ಹಿಡಿದುಕೊಂಡಿರುವ ಈ ಯುವತಿಯೂ ಕುಣಿಯುತ್ತಿರುವುದನ್ನು ಕಾಣಬಹುದು.

https://www.facebook.com/share/r/16QjyDmRij/

ಈ ವಿಡಿಯೋ ಈಗಾಗಲೇ 283.2 ಕೆ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಈ ವಿಡಿಯೋ ನೋಡಿದ ಬಳಕೆದಾರrರು ಮಿಶ್ರ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ಬಳಕೆದಾರರೊಬ್ಬರು, ‘ಈಗಲೇ ಈ ಯುವಕನ ಪರಿಸ್ಥಿತಿ ನೋಡಲಾಗುತ್ತಿಲ್ಲ, ಮದುವೆಯಾದ ಮೇಲೆ ಈ ಯುವಕನಿಗೆ ದೇವರೇ ಗತಿ’ ಎಂದಿದ್ದಾರೆ. ಇನ್ನೊಬ್ಬರು, ‘ಹೆಣ್ಣು ಗಂಡು ಸಮಾನರು ಎಂದ ಮೇಲೆ ಪಾದ ಮುಟ್ಟಿ ಸ್ಪರ್ಶಿಸುವುದರಲ್ಲಿ ಏನು ತಪ್ಪಿಲ್ಲ. ಪ್ರೀತಿಯಲ್ಲಿ ಇಬ್ಬರೂ ಸೋಲಬೇಕು. ಆಗ ಮಾತ್ರ ಈ ಪ್ರೀತಿಯೂ ಉಳಿಯಲು ಸಾಧ್ಯ’ ಎಂದಿದ್ದಾರೆ. ಮತ್ತೊರ್ವ ಬಳಕೆದಾರ, ‘ಅಣ್ಣ ಅವನು ಅವಳಿಗೆ ಸಂಪೂರ್ಣವಾಗಿ ಶರಣಾಗಿದ್ದಾನೆ. ಆಗಿದ್ದಾಗ ಮಾತ್ರ ಬದುಕು ಸುಂದರವಾಗಲು ಸಾಧ್ಯ. ಇಲ್ಲದಿದ್ದರೆ ದಿನಾಲೂ ಆಕೆಯೊಂದಿಗೆ ಕಿತ್ತಾಡಿ ಸಾಯಬೇಕಾಗುತ್ತದೆ’ ಎಂದು ಕಾಮೆಂಟ್ ಮಾಡಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!