ನಾದಿನಿ ಮನೆಗೆ ಕುಂಕುಮಕ್ಕೆ ಹೋಗ್ತಿದ್ದ ದಂಪತಿಗೆ ಅಪಘಾತ : ವರಮಹಾಲಕ್ಷ್ಮಿ ಹಬ್ಬದಂದೇ ಹೋಯ್ತು ಮುತ್ತೈದೆ ಪ್ರಾಣ !

ವರಮಹಾಲಕ್ಷ್ಮಿ ಹಬ್ಬದಂದು ನಾದಿನಿ ಮನೆಗೆ ಕುಂಕುಮಕ್ಕೆ ಎಂದು ಬೈಕ್​ನಲ್ಲಿ ಹೋಗುತ್ತಿದ್ದ ದಂಪತಿಗೆ ಲಾರಿಯೊಂದು ಗುದ್ದಿದೆ. ಇದರ ಪರಿಣಾಮ ಮಹಿಳೆ ಜೀವ ಕಳೆದುಕೊಂಡಿದ್ದು ಪತಿಗೆ ಸಣ್ಣಪುಟ್ಟ ಗಾಯಗಳು ಆಗಿವೆ.

ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದಂದು ನಾದಿನಿ ಮನೆಗೆ ಕುಂಕುಮಕ್ಕೆ ಎಂದು ಬೈಕ್​ನಲ್ಲಿ ಹೋಗುತ್ತಿದ್ದ ದಂಪತಿಗೆ ಲಾರಿಯೊಂದು ಗುದ್ದಿದೆ. ಇದರ ಪರಿಣಾಮ ಮಹಿಳೆ ಜೀವ ಕಳೆದುಕೊಂಡಿದ್ದು ಪತಿಗೆ ಸಣ್ಣಪುಟ್ಟ ಗಾಯಗಳು ಆಗಿವೆ. ಲಗ್ಗೆರೆ ಬ್ರಿಡ್ಜ್ ಬಳಿ ಈ ಘಟನೆ ನಡೆದಿದೆ.

ಲಗ್ಗೆರೆ ನಿವಾಸಿ ಗೀತಾ (23) ಜೀವ ಕಳೆದುಕೊಂಡ ಮಹಿಳೆ. ಈಕೆಯ ಗಂಡ ಸುನೀಲ್​ಗೆ ಗಾಯಗಳು ಆಗಿವೆ. ಈ ದಂಪತಿ ಕಳೆದ 3 ತಿಂಗಳ ಹಿಂದೆ ಮದುವೆಯಾಗಿದ್ದರು. ಲಗ್ಗೆರೆ ಬಳಿ 1 ವಾರದ‌ ಹಿಂದಷ್ಟೇ ಮನೆ ಮಾಡಿಕೊಂಡಿದ್ದರು. ಕಳೆದ ಭಾನುವಾರ ಹಾಲು ಉಕ್ಕಿಸಿದ್ದ ಪತಿ-ಪತ್ನಿ ಸಂಭ್ರಮಿಸಿದ್ದರು. ವರಮಹಾಲಕ್ಷ್ಮೀ ಹಬ್ಬಕ್ಕೆ ತವರು ಮನೆಗೆಂದು ಪತ್ನಿಯನ್ನ ಚಂದ್ರ ಲೇಔಟ್​ನಲ್ಲಿರುವ ಅವರ ಅಮ್ಮನ ಮನೆಗೆ ಪತಿ ಕರೆತಂದಿದ್ದರು.

ಹಬ್ಬದ ಹಿನ್ನೆಲೆಯಲ್ಲಿ ಮಲ್ಲೇಶ್ವರಂನಲ್ಲಿರುವ ನಾದಿನಿ (ಗಂಡನ ಅಕ್ಕ) ಮನೆಗೆ ಕುಂಕುಮಕ್ಕಾಗಿ ಹೋಗುತ್ತಿದ್ದರು. ಮಲ್ಲೇಶ್ವರಂನ ನಾದಿನಿ ಮನೆಗೆ ತೆರಳುವಾಗ ಲಗ್ಗೆರೆ ಬಳಿ ಅಪಘಾತ ಸಂಭವಿಸಿದೆ. ಲಗ್ಗೆರೆ ಬ್ರಿಡ್ಜ್ ಬಳಿ ಬೈಕ್ ಮತ್ತು 12 ವ್ಹೀಲ್ ಲಾರಿ ನಡುವೆ ಅಪಘಾತವಾಗಿದೆ. ತಲೆಗೆ ಗಂಭೀರ ಗಾಯವಾದ ಕಾರಣ ಪತ್ನಿ ಸ್ಥಳದಲ್ಲೇ ಜೀವ ಬಿಟ್ಟಿದ್ದಾರೆ. ರಾಜಾಜಿನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದ್ದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!