ನಟ ದರ್ಶನ್ ಕೇಸ್ ತನಿಖಾಧಿಕಾರಿಗಳಿಗೆ ಸಂಕಷ್ಟ – ACP ಚಂದನ್, PSI ವಿನಯ್ ವಿರುದ್ಧವೇ ಸ್ನೇಹಮಯಿ ಕೃಷ್ಣ ದೂರು

ನಟ ದರ್ಶನ್ ಕೇಸ್ ತನಿಖಾಧಿಕಾರಿಗಳಿಗೆ ಸಂಕಷ್ಟ – ACP ಚಂದನ್, PSI ವಿನಯ್ ವಿರುದ್ಧವೇ ಸ್ನೇಹಮಯಿ ಕೃಷ್ಣ ದೂರು

ರೇಣುಕಾಸ್ವಾಮಿ ಕೊ* ಪ್ರಕರಣದ ತನಿಖಾಧಿಕಾರಿಗಳಿಗೆ ಇದೀಗ ಸಂಕಷ್ಟ ಎದುರಾಗಿದೆ. ಈ ಕೇಸ್​ನ ತನಿಖಾಧಿಕಾರಿಗಳಾದ PSI ವಿನಯ್ ಹಾಗೂ ACP ಚಂದನ್ ಇಬ್ಬರನ್ನೂ ಆರೋಪಿಗಳಾಗಿ ಮಾಡಬೇಕು ಎಂದು ಸಾಮಾಜಿಕ ಹೋರಾಟಗಾರ ಸ್ನೇಹಮಹಿ ಕೃಷ್ಣ, ADGP ಹಿತೇಂದ್ರ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.

ರೇಣುಕಾಸ್ವಾಮಿ ಕೊ* ಪ್ರಕರಣದಲ್ಲಿ ಸರ್ವಾಧಿಕಾರಿಗಳಂತೆ PSI ವಿನಯ್ ಹಾಗೂ ACP ಚಂದನ್ ನಡೆದುಕೊಂಡಿದ್ದಾರೆ. ಅಲ್ಲದೇ ಹಲವಾರು ಅಫರಾಧ ಕೃತ್ಯಗಳಲ್ಲಿ ಭಾಗಿಯಾಗಿ, ಸುಳ್ಳು ದೋಷಾರೋಪಣ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಹೀಗಾಗಿ ಇಬ್ಬರನ್ನೂ ಪ್ರಕರಣದಲ್ಲಿ ಆರೋಪಿಯನ್ನಾಗಿ ಮಾಡಬೇಕು, ಅಲ್ಲದೇ CIDಗೆ ಈ ಕೇಸ್​ನ್ನು ವರ್ಗಾಯಿಸುವಂತೆ ಸ್ನೇಹಮಹಿ ಕೃಷ್ಣ, ADGP ಹಿತೇಂದ್ರ ಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.

ಕೆಲವು ಪೊಲೀಸ್ ಅಧಿಕಾರಿಗಳು ಕಾನೂನು ಮತ್ತು ತಮ್ಮ ಅಧಿಕಾರವನ್ನು ತಮ್ಮ ಆಟಿಕೆಯ ವಸ್ತುಗಳು ಎಂಬಂತೆ ಸರ್ವಾಧಿಕಾರಿಗಳ ರೀತಿಯಲ್ಲಿ ನಡೆದುಕೊಂಡು, ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿದ್ದಾರೆ. ರೇಣುಕಾಸ್ವಾಮಿ ಕೊ* ಕೇಸ್​ನ ತನಿಖೆ ನಡೆಸಿ, ವಿನಯ್‌ರವರನ್ನು ರಕ್ಷಣೆ ಮಾಡುವ ಸಲುವಾಗಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ, ನೈಜ ಸಾಕ್ಷಾಧಾರಗಳನ್ನು ಮುಚ್ಚಿಟ್ಟು ತನಿಖಾಧಿಕಾರಿಗಳಾದ ಗಿರಿಶ್ ನಾಯಕ್ ಹಾಗೂ ಚಂದನ್‌ಕುಮಾರ್ ಸುಳ್ಳು ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ. ಅವರ ವಿರುದ್ಧ ಪ್ರತ್ಯೇಕ ಮೊಕದ್ದಮೆ ದಾಖಲಿಸಿ, ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸ್ನೇಹಮಹಿ ಕೃಷ್ಣ ಪತ್ರ ಬರೆದಿದ್ದಾರೆ.

  • Related Posts

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

    ರಾಮ್‌ಚರಣ್‌, ಕಿಚ್ಚ ಸುದೀಪ್‌ ಬಾಡಿಗಾರ್ಡ್‌ಗಳ ನಂತರ ಈಗ ಯಶ್‌ ಅಂಗರಕ್ಷಕನ ಹವಾ!

    ಚಿತ್ರರಂಗದಲ್ಲಿ ನೆಚ್ಚಿನ ನಟರ ಜೊತೆಗೆ ಅವರ ಪರ್ಸನಲ್‌ ಬಾಡಿಗಾರ್ಡ್‌ಗಳೂ ಇತ್ತೀಚೆಗೆ ಭಾರಿ ಸದ್ದು ಮಾಡುತ್ತಿದ್ದು, ಅಭಿಮಾನಿಗಳಲ್ಲಿ ಸಖತ್ ಟ್ರೆಂಡ್ ಸೃಷ್ಟಿಸುತ್ತಿದ್ದಾರೆ. ನಟ ರಾಮ್‌ ಚರಣ್‌ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾ ‘ಪೆದ್ದಿ’ ಪ್ರಚಾರದ ವೇಳೆಯಲ್ಲಿ ಅವರ ಪರ್ಸನಲ್ ಸೆಕ್ಯೂರಿಟಿ ಗಾರ್ಡ್, ಆಫ್ರಿಕಾ…

    You Missed

    ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

    ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

    ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

    ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

    ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

    ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

    ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

    FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

    FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!