ತನ್ನ ಅವಳಿ ಮಕ್ಕಳಲ್ಲಿ ಹೆಣ್ಣು ಮಗುವಿಗೆ ಅಜ್ಜಿಯ ಹೆಸರನ್ನೇ ಇಟ್ಟ ನಟಿ ಭಾವನಾ; ಈ ಹೆಸರನ್ನೆ ಆಯ್ಕೆ ಮಾಡಿದ್ಯಾಕೆ ಗೊತ್ತಾ ?

ಸ್ಯಾಂಡಲ್‌ವುಡ್ ನಟಿ ಭಾವನಾ ರಾಮಣ್ಣ ಬೋಲ್ಡ್ ಹೆಜ್ಜೆ ಇಟ್ಟಿದ್ದಾರೆ. ಭಾವನಾ ರಾಮಣ್ಣ ಮದುವೆ ಆಗದೆಯೇ ಮಗುವನ್ನು ಪಡೆಯಲು ಮುಂದಾಗಿದ್ದಾರೆ. ಕನ್ನಡ ನಟಿ ಭಾವನಾ ರಾಮಣ್ಣ ಐವಿಎಫ್ ಚಿಕಿತ್ಸೆ ಮೂಲಕ ತಾಯಿಯಾಗಲು ಹೊರಟಿರುವ ವಿಚಾರ ಸಧ್ಯ ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಐವಿಎಫ್‌ ತಂತ್ರಜ್ಞಾನದ ಮೂಲಕ ಅವಳಿ ಮಕ್ಕಳ ಮಕ್ಕಳಿಗೆ ಭಾವನಾ ತಾಯಿಯಾಗುತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧವಾಗಿ ಚರ್ಚೆ ನಡೆಯುತ್ತಿದೆ. ಈ ಯಾವ ಚರ್ಚೆ, ಟೀಕೆಗೂ ತಲೆ ಕೆಡಿಸಿಕೊಳ್ಳದ ಭಾವನಾ ರಾಮಣ್ಣ ಅವರು ತಮ್ಮ ನಿರ್ಧಾರವನ್ನ ಖುಷಿಯಿಂದ ಹಂಚಿಕೊಂಡಿದ್ದರು.

ಸ್ಯಾಂಡಲ್‌ವುಡ್ ನಟಿ ಭಾವನಾ ರಾಮಣ್ಣ ತಾನು ಯಾಕೆ ಐವಿಎಫ್ ಮೂಲಕ ಮಗುವನ್ನು ಪಡೆಯುವುದಕ್ಕೆ ಮುಂದಾದೆ ಅನ್ನೋದನ್ನು ಈಗಾಗಲೇ ನೀಡಿರುವ ಸಂದರ್ಶನದಲ್ಲಿ ರಿವೀಲ್ ಮಾಡಿದ್ದಾರೆ. ನಟಿ ಭಾವನಾ ರಾಮಣ್ಣ ಅವರು ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಅವರು ಸೀಮಂತ ಶಾಸ್ತ್ರ ಮಾಡಿಕೊಂಡಿದ್ದಾರೆ. ಅವಳಿ ಮಕ್ಕಳು ಹುಟ್ಟುತ್ತವೆಂದು ಹಲವು ಸಂದರ್ಶನದಲ್ಲಿ ಹೇಳಿಕೊಂಡಿದ್ದರು. ತಮ್ಮ ಮಕ್ಕಳನ್ನು ಹೇಗೆ ಬೆಳೆಸಬೇಕು. ಅವರನ್ನು ಹೇಗೆ ನೋಡಿಕೊಳ್ಳಬೇಕು ಅನ್ನೋ ಬಗ್ಗೆ ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

ಇನ್ನೂ ಸಂದರ್ಶನದಲ್ಲಿ ನಟಿ ಭಾವನಾ ಅವರು, 40 ರಿಂದ 50ರ ಒಳಗಿನ ವಯಸ್ಸಿನವರಾಗಿದ್ದರಿಂದ ಸಹಜ ಹೆರಿಗೆ ಆಗುವುದಿಲ್ಲ. ಸಿ ಸೆಕ್ಷನ್ ಮೂಲಕವೇ ಹೆರಿಗೆ ಮಾಡಿಸುವುದಾಗಿ ವೈದ್ಯರು ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದ್ದಾರೆ. ಇನ್ನೂ ಸಂದರ್ಶನದಲ್ಲಿ ನಟಿ ಭಾವನಾ ರಾಮಣ್ಣ ಅವರು, ತಮಗೆ ಹುಟ್ಟುವ ಮಕ್ಕಳಿಗೆ ಹೆಸರನ್ನೂ ಕೂಡ ಇಟ್ಟಿದ್ದಾರೆ. ಹೆಣ್ಣು ಮಗು ಹುಟ್ಟಿದರೆ ಏನು ಹೆಸರು? ಗಂಡು ಮಗು ಹುಟ್ಟಿದರೆ ಏನು ಹೆಸರು? ಅನ್ನೋದನ್ನೂ ಈಗಾಗಲೇ ತೀರ್ಮಾನಿಸಿದ್ದಾರೆ.

ಭಾವನಾ ರಾಮಣ್ಣ ಅವರಿಗೆ ಕೆಲವು ದಿನಗಳ ಹಿಂದಷ್ಟೇ ಹಸಿರು ಹಾಗೂ ಕೆಂಪು ಬಣ್ಣದ ಸೀರೆಯುಟ್ಟು ಸೀಮಂತ ಕಾರ್ಯಕ್ರಮದಲ್ಲಿ ಮಿಂಚಿದ್ದರು. ಗರ್ಭಿಣಿಯಾಗಿರುವ ನಟಿ ಭಾವನಾ ಅವರಿಗೆ ತಮ್ಮ ಮುಂದಿನ ಬದುಕು ಹೇಗಿರುತ್ತೆ ಅನ್ನೋದು ಗೊತ್ತಿದೆ. ಅದೆಲ್ಲವನ್ನೂ ಲೆಕ್ಕಾಚಾರ ಹಾಕಿಯೇ ಈ ಗಟ್ಟಿ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಅಲ್ಲದೆ ವೈದ್ಯರು ಅವಳಿ ಮಕ್ಕಳು ಹುಟ್ಟುತ್ತಾರೆಂದು ಗೊತ್ತಾಗುತ್ತಿದ್ದಂತೆ ಇದೇ ಹೆಸರು ಇಡಬೇಕು ಎಂದೂ ನಿರ್ಧರಿಸಿದ್ದಾರೆ. ಅದರಲ್ಲೂ ಹೆಣ್ಣು ಮಗು ಹುಟ್ಟಿದರೆ, ರುಕ್ಮಿಣಿ ಎಂದು ಹೆಸರು ಇಡುವುದಕ್ಕೆ ನಟಿ ಭಾವನಾ ರಾಮಣ್ಣ ಅವರು ನಿರ್ಧರಿಸಿದ್ದಾರೆ. ಇದೇ ಹೆಸರು ಇಡುವುದಕ್ಕೂ ಒಂದು ವಿಶೇಷ ಕಾರಣವಿದೆಯಂತೆ.

ಹೆಣ್ಣು ಮಗುವಿಗೆ ಮಾತ್ರ ಯೋಚನೆ ಮಾಡಿದ್ದು, ತನ್ನ ಅಜ್ಜಿಯ ಹೆಸರನ್ನೇ ಇಡಬೇಕು ಎಂದು ನಿರ್ಧರಿಸಿದ್ದೇನೆ ಎಂದು ನಟಿ ಭಾವನಾ ಅವರು ಸಂದರ್ಶನದಲ್ಲಿ ಹೇಳಿದ್ದಾರೆ. ಅವರ ಅಜ್ಜಿಯ ಹೆಸರು ರುಕ್ಮಿಣಿ. ಹೀಗಾಗಿ ಹೆಣ್ಣು ಮಗು ಹುಟ್ಟಿದರೆ ರಕ್ಮಿಣಿ ಎಂದು ಹೆಸರಿಡುತ್ತೇನೆ. ಆದರೆ, ಗಂಡು ಮಗುವಿಗೆ ಇನ್ನೂ ಹೆಸರಿಡುವ ನಿರ್ಧಾರ ಮಾಡಿಲ್ಲ ಎಂದಿದ್ದಾರೆ. ಇನ್ನೂ ನಟಿ ಭಾವನಾ ಅವರು ಮಕ್ಕಳೊಂದಿಗೆ ಹೆಚ್ಚು ಕಾಲ ಕಳೆಯುವುದಾಗಿಯೂ ಹೇಳಿಕೊಂಡಿದ್ದಾರೆ.

 

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!