ಇಂಧನ ಭದ್ರತೆ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ

ನವದೆಹಲಿ: ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಪ್ರಾರಂಭಗೊಂಡಿದ್ದು, ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ‘ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷ ಮತ್ತು ಅದರಿಂದ ಭಾರತದ ಇಂಧನ ಭದ್ರತೆಯ ಮೇಲೆ ಉಂಟಾಗುತ್ತಿರುವ ಪರಿಣಾಮಗಳ’ ಕುರಿತು ಪ್ರಸ್ತಾಪಿಸಿದರು. ಇದಕ್ಕೆ ಆಡಳಿತ ಪಕ್ಷದ ಸದಸ್ಯರು ಅಡ್ಡಿಪಡಿಸಿದ್ದರಿಂದ ಸದನದಲ್ಲಿ ಗದ್ದಲ ಉಂಟಾಯಿತು.

ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷ ಮತ್ತು ಅದರಿಂದ ಭಾರತದ ಇಂಧನ ಭದ್ರತೆಯ ಮೇಲೆ ಉಂಟಾಗುತ್ತಿರುವ ಪರಿಣಾಮಗಳ ಕುರಿತು ನಿಯಮ 176ರ ಅಡಿಯಲ್ಲಿ ‘ಅಲ್ಪಾವಧಿ ಚರ್ಚೆ’ಗೆ ಅವಕಾಶ ಕೋರಿ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಯ ಅಧ್ಯಕ್ಷರಿಗೆ ನೋಟಿಸ್ ನೀಡಿದ್ದರು. ಪಶ್ಚಿಮ ಏಷ್ಯಾದಲ್ಲಿನ ಅಸ್ಥಿರತೆಯಿಂದಾಗಿ ಭಾರತಕ್ಕೆ ಕಚ್ಚಾ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಭಾರತವು ತನ್ನ ಒಟ್ಟು ಕಚ್ಚಾ ತೈಲದ ಸುಮಾರು 55%ರಷ್ಟನ್ನು ಈ ಪ್ರದೇಶದಿಂದಲೇ ಆಮದು ಮಾಡಿಕೊಳ್ಳುತ್ತಿದೆ ಎಂದು ಖರ್ಗೆ ತಮ್ಮ ನೋಟಿಸ್‌ನಲ್ಲಿ ಆತಂಕ ವ್ಯಕ್ತಪಡಿಸಿದ್ದರು. ಸಂಘರ್ಷ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಭಾರತೀಯ ನಾಗರಿಕರ ಸುರಕ್ಷತೆಯ ಬಗ್ಗೆಯೂ ಚರ್ಚೆ ನಡೆಸಬೇಕೆಂದು ಅವರು ಒತ್ತಾಯಿಸಿದ್ದರು.

ಕಲಾಪ ಆರಂಭಗೊಳ್ಳುತ್ತಿದ್ದಂತೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಪಶ್ಚಿಮ ಏಷ್ಯಾದ ಸ್ಥಿತಿಗತಿ ಕುರಿತು ಹೇಳಿಕೆ ನೀಡಲು ಮುಂದಾದಾರು. ಈ ವೇಳೆ ವಿರೋಧ ಪಕ್ಷದ ನಾಯಕರಿಗೆ ಮೊದಲು ಮಾತನಾಡಲು ಅವಕಾಶ ನೀಡಬೇಕೆಂದು ಪ್ರತಿಪಕ್ಷಗಳು ಪಟ್ಟು ಹಿಡಿದವು. ಇದರಿಂದಾಗಿ ಸದನದಲ್ಲಿ ತೀವ್ರ ಗದ್ದಲ ಉಂಟಾಯಿತು. ಗದ್ದಲದ ನಡುವೆಯೇ, ಪದೇ ಪದೇ ವಿನಂತಿಸಿದ ನಂತರ ಸಭಾಧ್ಯಕ್ಷರು ನಿಯಮ 176ರ ಅಡಿಯಲ್ಲಿ (ಅಲ್ಪಾವಧಿ ಚರ್ಚೆ) ವಿಷಯವನ್ನು ಪ್ರಸ್ತಾಪಿಸಲು ಖರ್ಗೆ ಅವರಿಗೆ ಅವಕಾಶ ಮಾಡಿಕೊಟ್ಟರು. ಅಂತಿಮವಾಗಿ, ಖರ್ಗೆ ಪಶ್ಚಿಮ ಏಷ್ಯಾ ಸಂಘರ್ಷ ಮತ್ತು ಭಾರತದ ಇಂಧನ ಭದ್ರತೆಯ ಮೇಲಾಗುವ ಪರಿಣಾಮಗಳ ಕುರಿತು ಮಾತನಾಡಿದರು.

ಖರ್ಗೆ ಮಾತನಾಡುತ್ತಿದ್ದಾಗ ಆಡಳಿತ ಪಕ್ಷದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಮತ್ತು ಸಭಾಧ್ಯಕ್ಷರು ಭಾಷಣ ಮುಕ್ತಾಯಗೊಳಿಸಲು ಸೂಚಿಸಿದ್ದರಿಂದ ಸದನದಲ್ಲಿ ಮತ್ತೆ ಗದ್ದಲ ಮುಂದುವರಿಯಿತು. ಈ ನಡುವೆ ವಿರೋಧ ಪಕ್ಷಗಳ ಸದಸ್ಯರು ನಿಯಮ 267ರ ಅಡಿಯಲ್ಲಿ ಚರ್ಚೆಗೆ ಅವಕಾಶ ಕೋರಿ ನೀಡಿದ್ದ ನೋಟಿಸ್‌ಗಳನ್ನು ಸಭಾಧ್ಯಕ್ಷರು ತಿರಸ್ಕರಿಸಿದರು.

ಪಶ್ಚಿಮ ಏಷ್ಯಾದ ಉದ್ವಿಗ್ನತೆಯಿಂದ ಭಾರತಕ್ಕಾಗುವ ಪರಿಣಾಮಗಳ ಬಗ್ಗೆ ಚರ್ಚಿಸಲು ಕಾಂಗ್ರೆಸ್‌ನ ರಣದೀಪ್ ಸಿಂಗ್ ಸುರ್ಜೇವಾಲಾ ನೋಟಿಸ್ ನೀಡಿದ್ದರು. ಇಂಧನ ಭದ್ರತೆ, ಆರ್ಥಿಕತೆ ಮತ್ತು ಅನಿವಾಸಿ ಭಾರತೀಯರ ರಕ್ಷಣೆಯ ಬಗ್ಗೆ ಚರ್ಚಿಸಲು ಕೋರಿ ಎಎಪಿಯ ಸಂಜಯ್ ಸಿಂಗ್ ನೋಟಿಸ್ ಸಲ್ಲಿಸಿದ್ದರು. ಮತದಾರರ ಹಕ್ಕು ಕಸಿದುಕೊಳ್ಳುವಿಕೆ ಕುರಿತು ಚರ್ಚಿಸಲು ಟಿಎಂಸಿಯ ನದಿಮುಲ್ ಹಕ್ ಮತ್ತು ಸಾಕೇತ್ ಗೋಖಲೆ ನಿಯಮ 267ರ ಅಡಿ ನೋಟಿಸ್ ನೀಡಿದ್ದರು. ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಕುರಿತು ಚರ್ಚಿಸಲು ಸಿಪಿಐನ ಪಿ. ಸಂತೋಷ್ ನೋಟಿಸ್ ಸಲ್ಲಿಸಿದ್ದರು ಎಂದು ವರದಿಯಾಗಿದೆ. ಸಭಾಧ್ಯಕ್ಷರು ಈ ಎಲ್ಲಾ 267ರ ಅಡಿಯ ನೋಟಿಸ್‌ಗಳನ್ನು ತಿರಸ್ಕರಿಸಿದರು. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತ್ರ ನಿಯಮ 176ರ ಅಡಿಯಲ್ಲಿ ಅಲ್ಪಾವಧಿ ಚರ್ಚೆಗೆ ಅವಕಾಶ ನೀಡಿದರು.

Related Posts

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಅಂಗೀಕರಿಸಿದ್ದಾರೆ. ಸಚಿವ ಸಂಪುಟವೂ ವಿಸರ್ಜನೆಯಾಗಿರುವ ಹಿನ್ನೆಲೆಯಲ್ಲಿ, ನೂತನ ಸರ್ಕಾರ ಹಾಗೂ ಸಂಪುಟ ರಚನೆಯ ಪ್ರಕ್ರಿಯೆಗಳು ಬಿರುಸುಗೊಂಡಿವೆ. ಇದರ ಭಾಗವಾಗಿ, ಇಂದು (ಮೇ 30,…

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಭಾರತದ ಉಕ್ಕಿನ ಉತ್ಪಾದನಾ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಸಮುದ್ರ ಹಾಗೂ ಕಡಲಾಚೆಯ ಬೃಹತ್ ಇಂಜಿನಿಯರಿಂಗ್ ಯೋಜನೆಗಳಲ್ಲಿ ಬಳಸಲಾಗುವ ಅತ್ಯಂತ ಹೆಚ್ಚಿನ ಸಾಮರ್ಥ್ಯದ ವೆಲ್ಡೆಡ್ ಪೈಪ್‌ಗಳನ್ನು (EQ70 ಗ್ರೇಡ್) ಉತ್ಪಾದಿಸಿದ ವಿಶ್ವದ ಮೊದಲ ಸ್ಟೀಲ್ ಕಂಪನಿ ಎಂಬ ಹೆಗ್ಗಳಿಕೆಗೆ ‘ಆರ್ಸೆಲರ್ ಮಿತ್ತಲ್…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!