ಸಿಎಂ ತವರು ಕ್ಷೇತ್ರದಲ್ಲಿ ಅನ್ನದಾತರ ಅಹೋರಾತ್ರಿ ಧರಣಿ, ಭೂಮಿ ಕಳೆದುಕೊಂಡ ರೈತ ಕುಟುಂಬದಿಂದ ಪ್ರತಿಭಟನೆ

ಸಿಎಂ ತವರು ಕ್ಷೇತ್ರದಲ್ಲಿ ಅನ್ನದಾತರ ಅಹೋರಾತ್ರಿ ಧರಣಿ, ಭೂಮಿ ಕಳೆದುಕೊಂಡ ರೈತ ಕುಟುಂಬದಿಂದ ಪ್ರತಿಭಟನೆ

ಭೂಮಿ ಕಳೆದುಕೊಂಡ ರೈತರಿಗೆ ಉದ್ಯೋಗ ಕೊಡಿಸಲು ವಿಫಲವಾದ ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಕೆಐಎಡಿಬಿಯ ವಿರುದ್ಧ ಕೆಂಪಿಸಿದ್ದನಹುಂಡಿ ‌ರೈತರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ

ವರುಣಾ ಕ್ಷೇತ್ರದ ಕೆಂಪಿಸಿದ್ದನಹುಂಡಿ ಗ್ರಾಮದ ರೈತರ ಭೂಮಿಯನ್ನು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆಂದು ಭೂ ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ರೈತರ ಕುಟುಂಬದ ಸದಸ್ಯರಿಗೆ ಕಾರ್ಖಾನೆಗಳಲ್ಲಿ ಖಾಯಂ ಕೆಲಸ ನೀಡುವುದಾಗಿ ತಿಳಿಸಲಾಗಿತ್ತು. ಆದರೆ ಬಹುತೇಕ ಕಾರ್ಖಾನೆಗಳು ಉದ್ಯೋಗವನ್ನು ನೀಡಿರಲಿಲ್ಲ. ರೈತರ ಹಲವಾರು ಹೋರಾಟಗಳ ನಂತರ, ಜಿಲ್ಲಾಧಿಕಾರಿಗಳು ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಜಿಲ್ಲಾ ಕೈಗಾರಿಕೆಗಳ ಕೇಂದ್ರದ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಒಂದು ಜಿಲ್ಲಾಮಟ್ಟದ ಸಮಿತಿಯನ್ನು ರಚನೆ ಮಾಡಿದರು. ಈ ಸಮಿತಿಯ ಶಿಫರಾಸ್ಸಿನಂತೆ, ಉದ್ಯೋಗ ನೀಡಬೇಕೆಂದು ಕೆಲವು ಕೈಗಾರಿಕೆಗಳಿಗೆ ಕೆಐಎಡಿಬಿಯ ಅಧಿಕಾರಿಗಳು ಪತ್ರವನ್ನು ನೀಡಿದ್ದಾರೆ. ಆದರೆ ಈ ಪತ್ರಗಳಿಗೆ ಕಾರ್ಖಾನೆಗಳು ಸ್ಪಂದಿಸುತ್ತಿಲ್ಲ.

ಹಾಗಾಗಿ ರೈತರಿಂದ ಭೂಮಿಯನ್ನು ಪಡೆದು ಕೈಗಾರಿಕೆಗಳಿಗೆ ನೀಡಿರುವ ಕೆಐಎಡಿಬಿಯ ಅಧಿಕಾರಿಗಳು ರೈತರ ಮಕ್ಕಳಿಗೆ ಕೆಲಸ ಕೊಡಿಸಬೇಕೆಂದು, ೨೯-೦೮-೨೦೨೪ರಂದು ಕೆಐಎಡಿಬಿಯ ಕಚೇರಿಯ ಮುಂದೆ ಅನಿರ್ಧಿಷ್ಟಾವಧಿ ಹೋರಾಟವನ್ನು ಶುರು ಮಾಡಲಾಗಿತ್ತು. ಪ್ರತಿಭಟನಾ ಸ್ಥಳಕ್ಕೆ ಬಂದ ಕೆಐಎಡಿಬಿಯ ಅಧಿಕಾರಿಗಳು ೦೪-೦೯-೨೦೨೪ ರಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ರೈತರಿಗೆ ಕೆಲಸ ನೀಡಬೇಕಿರುವ ಕಾರ್ಖಾನೆಗಳ ಪ್ರತಿನಿಧಿಗಳ ಸಭೆಯನ್ನು ನಡೆಸಿ ಉದ್ಯೋಗ ಕೊಡಿಸುವುದಾಗಿ ತಿಳಿಸಿದ್ದರು. ಆ‌ ಹಿನ್ನಲೆಯಲ್ಲಿ ಪ್ರತಿಭಟನೆಯನ್ನು ವಾಪಾಸ್ ತೆಗೆದುಕೊಳ್ಳಲಾಗಿತ್ತು.

ಆದರೆ ಇಂದಿನ ಸಭೆಯಲ್ಲಿ, ಭೂಮಿ ನೀಡಿದ ರೈತರ ಮಕ್ಕಳಿಗೆ ಉದ್ಯೋಗ ನೀಡುವ ಬಗ್ಗೆ ಯಾವುದೇ ತಿರ್ಮಾನವಾಗಲಿಲ್ಲ. ಹಾಗಾಗಿ ರೈತರಿಗೆ ನ್ಯಾಯ ಸಿಗುವವರೆಗೂ ಜಂಟಿ ನಿರ್ದೇಶಕರ ಕಛೇರಿಯ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಹೋರಾಟ ನಡೆಸಲು ತೀರ್ಮಾನಿಸಲಾಗಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!