ಜೈಲು ಸೇರುವ ಮುನ್ನ ಪವಿತ್ರಾ ಮತ್ತೊಂದು ಪೋಸ್ಟ್.

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲಿಗೆ ಹೋಗುವ ಟೆನ್ಷನ್ ನಡುವೆಯೂ ಪವಿತ್ರಾ ಗೌಡ ಇನ್ಸ್ಟಾಗ್ರಾಂನಲ್ಲಿ ಮತ್ತೊಂದು ಸ್ಟೋರಿ ಹಾಕಿದ್ದಾರೆ.

ದೇವರ ಮೇಲೆ ನಂಬಿಕೆ ಇಡಬೇಕು. ಬಹುಶಃ ಅವರ ಉತ್ತರ ‘ಕಾಯಿರಿ’ ಅನ್ನೋದಾಗಿರಬಹುದು. ಕೆಲವು ವಿಳಂಬಗಳು ದೈವಿಕ ರಕ್ಷಣೆಯಾಗಿರುತ್ತದೆ. ನಾನು ತಾಳ್ಮೆ ಮತ್ತು ನಂಬಿಕೆಯನ್ನು ಆರಿಸಿಕೊಳ್ಳುತ್ತೇನೆ ಎಂದು ಪವಿತ್ರಾ ಗೌಡ ಇನ್ಸ್ಟಾದಲ್ಲಿ ಬರೆದುಕೊಂಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿ ಕೂಡಲೇ ಶರಣಾಗುವಂತೆ ಸೂಚಿಸಿದೆ. ಜಾಮೀನು ಆದೇಶ ಹೊರಬೀಳುವ ಮುನ್ನವೇ ಪವಿತ್ರಾ ಗೌಡ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದರು. ಸತ್ಯವು ಎಲ್ಲಕ್ಕಿಂತ ಹೆಚ್ಚು ಶಕ್ತಿಶಾಲಿ. ಅದು ಯಾವಾಗಲೂ ನ್ಯಾಯವನ್ನು ಕೊಡುತ್ತದೆ. ಈ ಜಗತ್ತಿನಲ್ಲಿರುವ ಎಲ್ಲಕ್ಕಿಂತ ಹೆಚ್ಚಿನ ಶಕ್ತಿಯನ್ನು ಸತ್ಯ ಹೊಂದಿರುತ್ತದೆ. ಎಷ್ಟೇ ಸಮಯ ತೆಗೆದುಕೊಂಡರೂ, ನ್ಯಾಯವು ಯಾವಾಗಲೂ ತನ್ನ ದಾರಿಯನ್ನು ಕಂಡುಕೊಳ್ಳುತ್ತದೆ ಎಂದು ಬರೆದಿದ್ದರು.

ಸುಪ್ರೀಂ ಕೋರ್ಟ್ ತೀರ್ಪು ಹೊರಬರುವ ಮುನ್ನ ಪವಿತ್ರಾ ಗೌಡ ದೇವರ ಮೊರೆ ಹೋಗಿದ್ದರು. ಜೊತೆಗೆ ಮನೆಯಲ್ಲಿ ತುಳಸಿ ಗಿಡಕ್ಕೆ ಪೂಜೆ ಸಲ್ಲಿಸಿದ್ದರು. ತೀರ್ಪು ಹೊರಬರುತ್ತಿದ್ದಂತೆ ಮನೆಯಲ್ಲಿ ಪವಿತ್ರಾ ಗೌಡ, ತಾಯಿ ಎದುರು ಬಿಕ್ಕಳಿಸಿ ಅತ್ತಿದ್ದಾರೆ. ಈ ವೇಳೆ ಮನೆ ಬಳಿ ಪೊಲೀಸರು ಬಂಧನಕ್ಕೆ ಕಾದು ನಿಂತಿದ್ದರು. ಮನೆಯ ಬಾಗಿಲು ತೆರೆದಂತೆ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!