ಸಂಭ್ರಮದಲ್ಲೂ ಅಪ್ಪು ಮರೆತಿಲ್ಲ ಅನುಶ್ರೀ …

ಪುನೀತ್ ರಾಜಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿರುವ ಅನುಶ್ರೀ ಅವರು ತಾವು ಮದುವೆಯಾಗುತ್ತಿರುವ ಮಂಟಪದಲ್ಲಿ ಅಪ್ಪು ಫೋಟೋವನ್ನು ರಾರಾಜಿಸುವಂತೆ ಮಾಡಿದ್ದಾರೆ.

ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಇಂದು (ಆ.28) ಕೊಡಗು ಮೂಲದ ರೋಷನ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ನಿರೂಪಣೆಯಿಂದ ಹೆಚ್ಚು ಜನಪ್ರಿಯತೆ ಗಳಿಸಿದ ಅನುಶ್ರೀ ತಮ್ಮ ಬಹುಕಾಲದ ಗೆಳೆಯ ರೋಷನ್ ಜೊತೆ ಹಸೆಮಣೆ ಏರಿದ್ದು, 10:56ರ ಶುಭ ಮೂಹೂರ್ತದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಅಪ್ಪು ಅವರ ಅಪ್ಪಟ ಅಭಿಮಾನಿಯಾಗಿರುವ ಅನುಶ್ರೀ ಮದುವೆ ಮಂಟಪದಲ್ಲಿ ಅಪ್ಪು ಫೋಟೋವೊಂದನ್ನು ಇರಿಸಿ, ಸುತ್ತಲೂ ಹೂವುಗಳಿಂದ ಅಲಂಕಾರ ಮಾಡಿದ್ದಾರೆ. ಈ ಮೂಲಕ ಅಪ್ಪು ಮೇಲಿನ ಪ್ರೀತಿಯನ್ನು ತೋರ್ಪಡಿಸಿದ್ದಾರೆ. ಈ ಹಿಂದೆಯೂ ಅಪ್ಪು ಬಗ್ಗೆ ನಟಿ ಅನುಶ್ರೀ ಮಾತನಾಡಿದ್ದರು. ಅಪ್ಪು ಸರ್ ನನಗೆ ತುಂಬಾ ಹತ್ತಿರ. ಸಿನಿಮಾ ಇಷ್ಟ ಪಡಲು ಶುರುವಾಗಿದ್ದ ದಿನದಿಂದ ಅವರು ನನಗೆ ತುಂಬಾ ಹತ್ತಿರವಾಗಿದ್ದಾರೆ. ನಾನು ಇಷ್ಟ ಪಡುವ ಏಕೈಕ ನಟ ಅಂದ್ರೆ ಅಪ್ಪು ಸರ್. ಅವರನ್ನು ಭೇಟಿಯಾದ ಮೇಲೆ ಅವರ ಗುಣ, ವ್ಯಕ್ತಿತ್ವಕ್ಕೆ ನಾನು ಅಭಿಮಾನಿಯಾದೆ ಎಂದು ಹಲವು ಭಾರೀ ಭಾವುಕರಾಗಿದ್ದರು.

ಗುರುವಾರ ಬೆಂಗಳೂರಿನ ಕಗ್ಗಲಿಪುರ ಬಳಿಯ ಹೊರವಲಯದ ರೆಸಾರ್ಟ್‌ನಲ್ಲಿ ಮದುವೆ ನೆರವೇರಿದ್ದು, ನಟ ಶರಣ್, ಹಿರಿಯ ನಟಿ ಪ್ರೇಮ, ಡಾಲಿ ಧನಂಜಯ್, ಚೈತ್ರಾ ಆಚಾರ್, ನಾಗಭೂಷಣ, ಗಾಯಕ ವಿಜಯಪ್ರಕಾಶ್, ನಟ ವಿಜಯ ರಾಘವೇಂದ್ರ ಸೇರಿದಂತೆ ಕಿರುತೆರೆ ಕಲಾವಿದರು, ಚಿತ್ರೋದ್ಯಮದ ಗಣ್ಯರು ನವಜೋಡಿಗೆ ಶುಭ ಹಾರೈಸಿದ್ದಾರೆ.

Related Posts

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

Yash: ಮುಂಬೈನಲ್ಲಿ ಪತ್ನಿ ರಾಧಿಕಾ ಪಂಡಿತ್ ಜೊತೆ ಕಾಣಿಸಿಕೊಂಡ ಯಶ್ ಅವರ ಹೊಸ ಅವತಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಯಶ್ ಭಾರತೀಯ ಸಿನೆಮಾ ಲೋಕವೇ ಹಿಂತಿರುಗಿ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಸಿನಿಮಾದ ಬಳಿಕ…

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!