‘ಕಾಂತಾರ’ದಲ್ಲಿ ಮಿಂಚಿದ್ದ ಅಪ್ಪು ಕೋಣ ಸಾವು : ಕಂಬಳದಲ್ಲಿ ಚಾಂಪಿಯನ್ ಆಗಿದ್ದ ಅಪ್ಪು .

ಕಾಂತಾರ ಸಿನಿಮಾದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅಪ್ಪು ಕೋಣ ನಿಧನ ಹೊಂದಿದೆ. ರಿಷಬ್ ಶೆಟ್ಟಿ ಅವರ ತರಬೇತಿಗೆ ಸಹಾಯ ಮಾಡಿದ ಈ ಕೋಣ, ಹಲವು ಕಂಬಳ ಸ್ಪರ್ಧೆಗಳಲ್ಲಿ ಚಾಂಪಿಯನ್ ಆಗಿತ್ತು. ಅಪ್ಪು ಕೋಣದ ಸಾವು ಕಂಬಳ ಪ್ರೇಮಿಗಳಿಗೆ ಬೇಸರ ಮೂಡಿಸಿದೆ. ಕಾಂತಾರ ಚಿತ್ರದ ಯಶಸ್ಸಿನಲ್ಲಿ ಅಪ್ಪು ಕೋಣದ ಪಾತ್ರ ಮಹತ್ವದ್ದಾಗಿತ್ತು.

‘ಕಾಂತಾರ’ ಸಿನಿಮಾ 2022ರಲ್ಲಿ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಈ ಚಿತ್ರದ ಮೂಲಕ ಅನೇಕ ಕಲಾವಿದರು ಜನಪ್ರಿಯತೆ ಪಡೆದರು. ಈ ಸಿನಿಮಾದಲ್ಲಿ ಕರಾವಳಿಯ ಸಂಪ್ರದಾಯದ ಬಗ್ಗೆ ಹೇಳಲಾಗಿತ್ತು. ದಕ್ಷಿಣ ಕನ್ನಡದ ಜನತೆಯ ಉಸಿರಿನ ಜೊತೆ ಬೆರೆತು ಹೋದ ಕಂಬಳದ ದೃಶ್ಯಗಳೂ ಇದ್ದವು. ಈ ದೃಶ್ಯದಲ್ಲಿ ಕಾಣಿಸಿಕೊಂಡಿದ್ದ ಅಪ್ಪು ಕೋಣ ಸಾವನ್ನಪ್ಪಿದೆ. ಅಪ್ಪು ಕೋಣದ ಮಾಲೀಕರು ಹಾಗೂ ಕಂಬಳ ಪ್ರಿಯರಿಗೆ ಈ ವಿಚಾರ ಬೇಸರ ಮೂಡಿಸಿದೆ.

‘ಕಾಂತಾರ’ ಚಿತ್ರದಲ್ಲಿ ರಿಷಬ್ ಶೆಟ್ಟಿ ಹೀರೋ ಆಗಿ ಮಿಂಚಿದ್ದರು. ಈ ಚಿತ್ರದ ನಿರ್ದೇಶನ ಕೂಡ ಅವರದ್ದೇ. ಅವರು ಈ ಸಿನಿಮಾಗಾಗಿ ಕಷ್ಟಪಟ್ಟು ಕಂಬಳ ಓಡಿಸೋದನ್ನು ಕಲಿತಿದ್ದರು. ಇದಕ್ಕಾಗಿ ಬೈಂದೂರು ಬೊಳಂಬಳ್ಳಿಯ ಕಂಬಳ ಪ್ರೇಮಿ ಪರಮೇಶ್ವರ ಭಟ್ ಅವರು ಸಾಕಿದ್ದ ಕೋಣ ಬಳಕೆ ಆಗಿತ್ತು. ಈ ಕೋಣಗಳಿಗೆ ಅಪ್ಪು ಹಾಗೂ ಕಾಲಾ ಎಂದು ಹೆಸರು ಇಡಲಾಗಿತ್ತು. ಈ ಪೈಕಿ ಅಪ್ಪು ಕೋಣ ನಿಧನ ಹೊಂದಿದೆ.

ಚಿತ್ರೀಕರಣಕ್ಕೂ ಮೊದಲಿನಿಂದಲೇ ಅಪ್ಪು ಮತ್ತು ಕಾಲಾ ಕೋಣಗಳ ಮೂಲಕ ರಿಷಬ್ ತಬೇತಿ ಪಡೆದಿದ್ದರು. ಇವುಗಳ ಜೊತೆ ರಿಷಬ್​ಗೆ ಆಪ್ತತೆ ಬೆಳೆದಿತ್ತು. ಆ ಬಳಿಕ ಸಿನಿಮಾಗಳಲ್ಲೂ ಕೋಣಗಳು ಕಾಣಿಸಿಕೊಂಡಿದ್ದವು. ಈ ಪೈಕಿ ಒಂದು ಕೋಣ ನಿಧನ ಹೊಂದಿದ್ದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಪ್ರಶಸ್ತಿಗಳ ಸರಮಾಲೆ..
ಸಿನಿಮಾಗಳಲ್ಲಿ ಮಾತ್ರ ಅಪ್ಪು ಹಾಗೂ ಕಾಲಾ ಕೋಣಗಳು ಚಾಂಪಿಯನ್ ಅಲ್ಲ, ನಿಜ ಜೀವನದಲ್ಲೂ ಇವು ಸಾಕಷ್ಟು ಅವಾರ್ಡ್ ಗೆದ್ದಿವೆ. ನೇಗಿಲು ಜೂನಿಯರ್ ವಿಭಾಗದಲ್ಲಿ ಎರಡು ಬಾರಿ ಸರಣಿಶ್ರೇಷ್ಠ ಪ್ರಶಸ್ತಿ ಪಡೆದಿದ್ದವು. ಕುಂದಾಪುರ ಭಾಗದಲ್ಲಿ ನಡೆಯುವ ಕಂಬಳದಲ್ಲಿ 5 ವರ್ಷ ಈ ಕೋಣಗಳು ಚಾಂಪಿಯನ್ ಆಗಿದ್ದವು. ಬೆಂಗಳೂರು ಕಂಬಳದಲ್ಲೂ ಕನೆಹಲಗೆ ವಿಭಾಗದಲ್ಲಿ ಪ್ರಥಮ ಪ್ರಶಸ್ತಿ ಪಡೆದಿದ್ದವು. ಕರಾವಳಿಯ ಬಹುತೇಕ ಕಂಬಳಗಳಲ್ಲಿ ಕೀರ್ತಿ-ಬಹುಮಾನ ಸಂಪಾದಿಸಿದ್ದ ಅಪ್ಪು ಕೋಣ ಈಗ ಅಗಲಿದೆ.

 

Related Posts

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಅರ್ಜುನ್ ತೆಂಡೂಲ್ಕರ್ ಸಾನಿಯಾ ಚಾಂದೋಕ್   ಅವರನ್ನು ವಿವಾಹವಾಗಿದ್ದಾರೆ. ಸಚಿನ್ ಪುತ್ರನ ಪತ್ನಿ ಸಾನಿಯಾ ಯಾರು, ಅವರ ಹಿನ್ನೆಲೆ, ಕುಟುಂಬದ ಸಂಪತ್ತು ಎಷ್ಟು ಎಂಬ ಕುತೂಹಲವಿದೆ. ಸಾನಿಯಾ ಖ್ಯಾತ ಉದ್ಯಮಿ ರವಿ ಘಾಯ್ ಅವರ ಮೊಮ್ಮಗಳು. ಅವರ ಕುಟುಂಬ ಬಾಸ್ಕಿನ್-ರಾಬಿನ್ಸ್ ಅನ್ನು ಭಾರತಕ್ಕೆ…

You Missed

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್