ಅರ್ಚಕರ ಮನೆಗೆ ಕನ್ನ: ವರಮಹಾಲಕ್ಷ್ಮಿ ಹಬ್ಬದಂದೇ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು.!

ಚಿತ್ರದುರ್ಗ: ವರಮಹಾಲಕ್ಷ್ಮಿ ಹಬ್ಬದ ದಿನವೇ ಅರ್ಚಕರೊಬ್ಬರ ಮನೆಯಲ್ಲಿ ಹೊಂಚು ಹಾಕಿ ಚಿನ್ನಾಭರಣ ದೋಚಿರುವ ಘಟನೆ ಚಿತ್ರದುರ್ಗ ನಗರದ ವಾಸವಿ ಶಾಲೆ ಬಳಿಯ ಮನೆಯಲ್ಲಿ ನಡೆದಿದೆ.

ನಗರದ ವಾಸವಿ ಶಾಲೆ ಬಳಿ ಇರುವ ಅರ್ಚಕ ರಾಜರಾವ್ ಎಂಬುವವರ ಮನೆಯಲ್ಲಿ ಕಳ್ಳತನ ಮಾಡಲಾಗಿದೆ. ಇವರ ಮನೆಯ ಬೀರುವಿನಲ್ಲಿದ್ದಂತಹ 170 ಗ್ರಾಂ ಚಿನ್ನ ಹಾಗೂ 3 ಕೆ.ಜಿ ಬೆಳ್ಳಿ ಕದ್ದು ಖದೀಮರು ಪರಾರಿಯಾಗಿದ್ದಾರೆ. ಇದು ಸುಮಾರು ಅಂದಾಜು 20 ಲಕ್ಷ ಮೌಲ್ಯದ ಚಿನ್ನಾಭರಣವಾಗಿದೆ ಎಂದು ಗೊತ್ತಾಗಿದೆ.

ಅರ್ಚಕ ಹೊರ ಹೋಗುವುದನ್ನೇ ಕಾಯುತ್ತಿದ್ದಂತಹ ಖದೀಮರು ಹೊಂಚು ಹಾಕಿದ್ದಾರೆ. ಅದರಂತೆ ನಿನ್ನೆ ವರಮಹಾಲಕ್ಷ್ಮಿ ಹಬ್ಬದಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳರು ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಬಳಿಕ ಮನೆಯಲ್ಲಿ ಹುಡುಕಾಡಿ, ಬೀರುವಿನಲ್ಲಿದ್ದಂತಹ 170 ಗ್ರಾಂ ಚಿನ್ನ ಹಾಗೂ 3 ಕೆ.ಜಿ ಬೆಳ್ಳಿ ಕಳ್ಳತನ ಮಾಡಿ, ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ.

ಸದ್ಯ ಇದೆಲ್ಲಾ ಚಿನ್ನಾಭರಣದ ಮೊತ್ತ 20 ಲಕ್ಷ ರೂಪಾಯಿ ಎಂದು ಅಂದಾಜು ಮಾಡಲಾಗಿದೆ. ಇನ್ನು ಈ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಚಿತ್ರದುರ್ಗ ಎಸ್​​ಪಿ ರಂಜಿತ್ ಕುಮಾರ್ ಭೇಟಿ ನೀಡಿದ್ದಾರೆ. ಬಳಿಕ ಮನೆಯಲ್ಲಿ ಪರಿಶೀಲನೆ ಮಾಡಿದ್ದಾರೆ. ಈ ಸಂಬಂಧ ಚಿತ್ರದುರ್ಗ ನಗರ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!