ಮೇಘಾಲಯದ ನೂತನ ರಾಜ್ಯಪಾಲರಾಗಿ ಸಿ.ಎಚ್. ವಿಜಯಶಂಕರ್ ನೇಮಕ

ಮಾಜಿ ಸಂಸದ ಸಿ.ಎಚ್. ವಿಜಯಶಂಕರ್ ಅವರನ್ನು ಮೇಘಾಲಯದ ನೂತನ ರಾಜ್ಯಪಾಲರನ್ನಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ನೇಮಿಸಿದ್ದಾರೆ.
ಸಿ. ಎಚ್. ವಿಜಯಶಂಕರ್ ಅವರ ಪೂರ್ಣ ಹೆಸರು ಚಂದ್ರಶೇಖರ್ ಹೆಚ್. ವಿಜಯಶಂಕರ್. 1956ರ ಅಕ್ಟೋಬರ್ 21ರಂದು ಅವರು ಜನಿಸಿದರು. ಮೂಲತಃ ರಾಣೆಬೆನ್ನೂರಿನವರಾದ ಅವರು ರಾಜಕೀಯ ನೆಲೆ ಕಂಡುಕೊಂಡಿದ್ದು ಮೈಸೂರಿನಲ್ಲಿ.

ಸಿ. ಎಚ್. ವಿಜಯಶಂಕರ್ 1998ರಲ್ಲಿ ಮೈಸೂರು ಲೋಕಸಭಾ ಕ್ಷೇತ್ರದಿಂದ 1 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯಗಳಿಸಿ ಸಂಸದರಾಗಿ ಆಯ್ಕೆಯಾದರು. 2004ರ ಲೋಕಸಭೆ ಚುನಾವಣೆಯಲ್ಲಿ ಮೈಸೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು, 316,442 ಮತಗಳನ್ನು ಪಡೆದು ಜೆಡಿಎಸ್‌ನ ಎ. ಎಸ್. ಗುರುಸ್ವಾಮಿ ಸೋಲಿಸಿ ಸಂಸದರಾಗಿ 2ನೇ ಬಾರಿಗೆ ಆಯ್ಕೆಯಾದರು.2014ರ ಲೋಕಸಭೆ ಚುನಾವಣೆಯಲ್ಲಿ ಸಿ. ಎಚ್. ವಿಜಯಶಂಕರ್ ಅವರನ್ನು ಬಿಜೆಪಿ ಹಾಸನ ಕ್ಷೇತ್ರದಿಂದ ಕಣಕ್ಕಿಳಿಸಿತು. 1,65,688 ಮತಗಳನ್ನು ಪಡೆದ ಅವರು ಜೆಡಿಎಸ್‌ನ ಎಚ್. ಡಿ. ದೇವೇಗೌಡರ ವಿರುದ್ಧ ಸೋತರು, ಚುನಾವಣೆಯಲ್ಲಿ 3ನೇ ಸ್ಥಾನವನ್ನು ಪಡೆದರು.

  • Related Posts

    ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ

    ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ನಡುವಿನ ಆತ್ಮೀಯ ಸ್ನೇಹ ಇಡೀ ವಿಶ್ವದ ಗಮನ ಸೆಳೆದಿದೆ. ಇವರಿಬ್ಬರ ರಾಜತಾಂತ್ರಿಕ ಒಡನಾಟವು ಭಾರತ ಮತ್ತು ಇಟಲಿ ನಡುವಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುತ್ತಿದೆ. ಪ್ರಸ್ತುತ ನಡೆಯುತ್ತಿರುವ ಜಿ7…

    3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

    ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

    You Missed

    ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ

    ಮೆಲೋಡಿ ಡಿಪ್ಲೊಮಸಿ: “ನಾವು ಜಗದ್ವಿಖ್ಯಾತ ಜೋಡಿ” ಎಂದ ಇಟಲಿ ಪ್ರಧಾನಿ ಮೆಲೋನಿ

    ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

    ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

    3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

    3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

    ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

    ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

    ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

    ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

    ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

    ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!