ಸಪ್ತಮಿ ಗೌಡ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ

ಸಪ್ತಮಿ ಗೌಡ ಅವರದ್ದು ಎನ್ನಲಾದ ಆಡಿಯೋ ವೈರಲ್!

ಯುವ ರಾಜ್‌ಕುಮಾರ್‌ – ಶ್ರೀದೇವಿ ಭೈರಪ್ಪ ದಂಪತಿಯ ವಿಚ್ಛೇದನದ ಸುದ್ದಿ ಮಧ್ಯೆ ಸಪ್ತಮಿ ಗೌಡ ಹೆಸರೂ ತಳುಕು ಹಾಕಿಕೊಂಡಿದೆ. ಇದೀಗ ಸಪ್ತಮಿ ಗೌಡ ಅವರದ್ದು ಎನ್ನಲಾದ ಆಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ

‘’ಸಪ್ತಮಿ ಗೌಡ ಹಾಗೂ ಯುವ ರಿಲೇಶನ್‌ಶಿಪ್‌ನಲ್ಲಿದ್ದಾರೆ. ವರ್ಷದಿಂದ ಅಫೇರ್ ಹೊಂದಿದ್ದಾರೆ. ಡಿಸೆಂಬರ್‌ 2023ರಲ್ಲಿ ನಾನು ಅಮೇರಿಕಾದಿಂದ ಭಾರತಕ್ಕೆ ವಾಪಸ್ ಆದಾಗ ಶಾಕ್ ಆಯ್ತು. ಖಾಸಗಿ ಹೋಟೆಲ್‌ ರೂಮ್‌ನಲ್ಲಿ ಸಪ್ತಮಿ ಗೌಡ ಜೊತೆ ಯುವ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದರು. ಅಫೇರ್ ಮುಂದುವರೆಸುವ ಸಲುವಾಗಿ ಬಲವಂತವಾಗಿ ಓದಿನ ನೆಪವೊಡ್ಡಿ ನನ್ನನ್ನ ಅಮೇರಿಕಾಕ್ಕೆ ಕಳುಹಿಸಲಾಯಿತು’’ ಎಂದು ಲೀಗಲ್ ನೋಟೀಸ್‌ಗೆ ನೀಡುವ ಉತ್ತರದಲ್ಲಿ ಶ್ರೀದೇವಿ ಭೈರಪ್ಪ ಆರೋಪಿಸಿದ್ದರು. ಈ ಸಂಬಂಧ ಶ್ರೀದೇವಿ ಭೈರಪ್ಪ ವಿರುದ್ಧ ಸಪ್ತಮಿ ಗೌಡ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಸಪ್ತಮಿ ಗೌಡ ವಿರುದ್ಧ ಶ್ರೀದೇವಿ ಭೈರಪ್ಪ ಮಾನಹಾನಿಕರ ಹೇಳಿಕೆ ನೀಡದಂತೆ ನ್ಯಾಯಾಲಯ ನಿರ್ಬಂಧಕಾಜ್ಞೆ ಆದೇಶ ನೀಡಿತ್ತು.

ಸಪ್ತಮಿ ಗೌಡ ಅವರದ್ದು ಎನ್ನಲಾದ ಆಡಿಯೋವೊಂದು ಸೋಷಿಯಲ್ ಮೀಡಿಯಾದ ತುಂಬೆಲ್ಲಾ ವೈರಲ್ ಆಗಿದೆ. ಆಡಿಯೋದಲ್ಲಿ ಸಪ್ತಮಿ ಗೌಡ ಎನ್ನಲಾಗಿರುವ ಯುವತಿ ಅಳುತ್ತಾ ‘’ನನ್ನ ಸೈಡ್ ಆಫ್ ದಿ ಸ್ಟೋರಿ ಕೇಳಿ.. ನನಗೊಂದು ಚಾನ್ಸ್ ಕೊಡಿ.. ನನ್ನಿಂದ ತಪ್ಪಾಗಿದೆ’’ ಅಂತ ಮನವಿ ಮಾಡಿದ್ದಾರೆ. ವರದಿಗಳ ಪ್ರಕಾರ, ನಿರ್ದೇಶಕರಿಗೆ / ನಿರ್ಮಾಪಕರಿಗೆ ಕಳುಹಿಸಲಾಗಿರುವ ಆಡಿಯೋ ಇದು ಎನ್ನಲಾಗಿದೆ

  • Related Posts

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

    ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

    ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

    You Missed

    ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

    ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

    ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

    ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

    ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

    ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

    ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

    FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

    FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!