ಆಸ್ತಿ ತೆರಿಗೆ ವಸೂಲಿ ಮಾಡಲು ಮುಂದಾದ ಬಿಬಿಎಂಪಿ

ಬೆಂಗಳೂರು: ಆಸ್ತಿ ತೆರಿಗೆ ಪಾವತಿ ಮಾಡದೇ ಇರುವ ಸುಸ್ತಿದಾರರಿಗೆ ಬಿಬಿಎಂಪಿ (BBMP) ನೋಟಿಸ್ ನೀಡಿದ್ದು, ಕೂಡಲೇ ಪಾವತಿ ಮಾಡುವಂತೆ ಸೂಚಿಸಿದೆ. ಇಲ್ಲವಾದಲ್ಲಿ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದು, ಚರ ಮತ್ತು ಸ್ಥಿರ ಆಸ್ತಿಗಳ ತುರ್ತು ಮಾರಾಟ ಮಾಡುವುದು ಸೇರಿದಂತೆ ವಸೂಲಿ ಮಾಡಲು ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ. ಒಟ್ಟಾರೆಯಾಗಿ ಬೆಂಗಳೂರಿನಲ್ಲಿ 2.75 ಲಕ್ಷ ಆಸ್ತಿ ಮಾಲೀಕರು ತೆರಿಗೆ ಬಾಕಿ ಉಳಿಸಿಕೊಂಡಿದ್ದು, ಅವರಿಗೆ ನೋಟಿಸ್ ನೀಡಲಾಗಿದೆ. ತೆರಿಗೆ ಪಾವತಿ ಮಾಡದವರ ವಿರುದ್ಧ ಕ್ರಮಕ್ಕೆ ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಆದೇಶ ಹೊರಡಿಸಿದ್ದಾರೆ.ಆಸ್ತಿ ತೆರಿಗೆ ಪಾವತಿಸುವುದನ್ನು ಬಾಕಿ ಇರಿಸಿಕೊಂಡವರು BBMPtax.karnataka.gov.in ವೆಬ್​ಸೈಟ್​​ ಮೂಲಕ ಆನ್‌ಲೈನ್‌ನಲ್ಲಿ ಪಾವತಿಸುವಂತೆ ಬಿಬಿಎಂಪಿ ನೋಟಿಸ್​ನಲ್ಲಿ ಉಲ್ಲೇಖಿಸಲಾಗಿದೆ.

 

ತೆರಿಗೆ ಬಾಕಿ ಇರುವ ಏರಿಯಾಗಳು:
ಬೆಂಗಳೂರು ಮಹಾನಗರ ಪಾಲಿಕೆಯ ವಿವಿಧ ಏರಿಯಾಗಳಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿರುವ ಆಸ್ತಿಗಳ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ. ಮಹದೇವಪುರ ವಲಯದಲ್ಲೇ ಅತ್ಯಧಿಕ ಆಸ್ತಿಗಳು ತೆರಿಗೆ ಕಟ್ಟದೆ ಬಾಕಿ ಉಳಿಸಿವೆ. ಈ ವಲಯದಲ್ಲಿ 65,040 ಸುಸ್ತಿದಾರರು ಇದ್ದು, 197.90 ಕೋಟಿ ರೂ. ತೆರಿಗೆ ಪಾವತಿಗೆ ಬಾಕಿ ಇದೆ. ದಕ್ಷಿಣ ವಲಯದಲ್ಲೂ ದೊಡ್ಡ ಪ್ರಮಾಣದ ತೆರಿಗೆ ಬಾಕಿ ಇದ್ದು, 25,162 ಸುಸ್ತಿದಾರರಿದ್ದಾರೆ. 116.81 ಕೋಟಿ ರೂ. ತೆರಿಗೆ ಬಾಕಿ ಇದೆ. ಪೂರ್ವ ಮತ್ತು ಬೊಮ್ಮನಹಳ್ಳಿ ವಲಯಗಳಲ್ಲಿಯೂ ಸಹ ಗಣನೀಯ ಸಂಖ್ಯೆಯ ಆಸ್ತಿ ಮಾಲೀಕರು ತೆರಿಗೆ ಕಟ್ಟದೆ ಬಾಕಿ ಉಳಿಸಿಕೊಂಡಿದ್ದಾರೆ. ಇದೇ ರೀತಿ ಯಲಹಂಕ ಮತ್ತು ಪಶ್ಚಿಮ ವಲಯಗಳಲ್ಲಿ ಕೂಡ ತೆರಿಗೆ ಬಾಕಿದಾರರ ಸಂಖ್ಯೆ ಹೆಚ್ಚಾಗಿದೆ. ರಾಜರಾಜೇಶ್ವರಿ ನಗರ ಮತ್ತು ದಸರಹಳ್ಳಿ ವಲಯಗಳಲ್ಲಿಯೂ ಸಹ ಸಾಕಷ್ಟು ಆಸ್ತಿಗಳು ತೆರಿಗೆ ಕಟ್ಟದೆ ಬಿಬಿಎಂಪಿಗೆ ಭಾರೀ ನಷ್ಟ ಉಂಟುಮಾಡಿವೆ. ಒಟ್ಟಾರೆಯಾಗಿ, ಬೆಂಗಳೂರು ನಗರದ ಎಲ್ಲಾ ವಲಯಗಳನ್ನು ಸೇರಿಸಿದಾಗ 786.86 ಕೋಟಿ ರೂ. ತೆರಿಗೆ ಕಟ್ಟದೆ ಬಿಬಿಎಂಪಿಗೆ ಭಾರಿ ನಷ್ಟವಾಗಿದೆ.

Related Posts

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!