ಭಾರತವನ್ನು ಕೆಣಕಿದರೆ ಅದು ಪಾಕಿಸ್ತಾನವೇ ಆಗಲಿ, ಯಾವುದೇ ದೇಶವಾಗಲಿ ನಾವು ಸಹಿಸಲ್ಲ : ಸಿಎಂ ಸಿದ್ದರಾಮಯ್ಯ

ಭಾರತವನ್ನು ಕೆಣಕಿದರೆ ಅದು ಪಾಕಿಸ್ತಾನವೇ ಆಗಲಿ, ಯಾವುದೇ ದೇಶವಾಗಲಿ ನಾವು ಸಹಿಸಲ್ಲ : ಸಿಎಂ ಸಿದ್ದರಾಮಯ್ಯ

ಭಾರತವನ್ನು ಕೆಣಕಿದರೆ ಅದು ಪಾಕಿಸ್ತಾನವೇ ಆಗಲಿ, ಯಾವುದೇ ದೇಶವಾಗಲಿ ನಾವು ಸಹಿಸಲ್ಲ.‌ ಯಾವುದೇ ಹಂತದ ಯುದ್ಧಕ್ಕೆ ಭಾರತ ಸದಾ ಸಿದ್ಧ, ಸದಾ ಸನ್ನದ್ಧ ಆಗಿರುತ್ತದೆ. ಅನಿವಾರ್ಯತೆ ಆದಾಗ ಯುದ್ಧಕ್ಕೆ ಮುಂದಡಿ ಇಟ್ಟು ನಮ್ಮ ಸಾರ್ವಭೌಮತೆಯನ್ನು ಕಾಪಾಡಿಕೊಳ್ಳುವುದು ನಮಗೆ ಗೊತ್ತಿದೆ. ಇದನ್ನು ಭಾರತ ಪ್ರತೀ ಸಂದರ್ಭದಲ್ಲೂ ಸಾಬೀತು ಪಡಿಸಿದೆ.ಇತಿಹಾಸದುದ್ದಕ್ಕೂ ನಾವು ಈ ಎಚ್ಚರವನ್ನು ಮತ್ತು ಸಾರ್ವಭೌಮತೆಯನ್ನು ಕಾಪಾಡಿಕೊಂಡೇ ಬಂದಿದ್ದೇವೆ. ಮುಂದಕ್ಕೂ ಇದನ್ನು ಕಾಪಾಡಿಕೊಳ್ಳುತ್ತೇವೆ. ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತು ಹಾಕುವುದು, ಪ್ರತಿಯೊಬ್ಬ ಭಾರತೀಯರಿಗೆ ಸೂಕ್ತ ರಕ್ಷಣೆ ಕೊಡುವುದು ನಮ್ಮ ಈ ಕ್ಷಣದ ಆದ್ಯತೆಯಾಗಿದೆ. ಇದರಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ.

ಭಾರತ ಬುದ್ಧ, ಬಸವಣ್ಣ, ಗಾಂಧಿ, ಅಂಬೇಡ್ಕರ್ ಅವರ ನಾಡು. ಇಲ್ಲಿ ಭಯೋತ್ಪಾದನೆಗೆ, ಅಶಾಂತಿಗೆ ಅವಕಾಶ ಇಲ್ಲ. ಅನಿವಾರ್ಯವಾದರೆ ಯುದ್ಧಕ್ಕೂ ಸಿದ್ಧ ಎನ್ನುವ ಮಾತನ್ನು ನಿನ್ನೆ ನಾನು ಹೇಳಿದ್ದೆ. ಆದರೆ ಭಯೋತ್ಪಾದಕರ ವಿರುದ್ಧ, ಪಾಕಿಸ್ತಾನದ ವಿರುದ್ಧ ಯುದ್ಧವೇ ಬೇಡ ಎಂದು ಹೇಳಿದ್ದೇನೆ ಎಂದು ಸುಳ್ಳು ಸುಳ್ಳೇ ಬಿಜೆಪಿ ಪ್ರಚಾರ ಮಾಡುತ್ತಿದೆ. ನನ್ನ ಮಾತನ್ನು ತಿರುಚಿ ಯುದ್ಧವೇ ಬೇಡ ಎಂದು ಹೇಳಿದ್ದೇನೆ ಎಂದು ನನ್ನದಲ್ಲದ ಅಭಿಪ್ರಾಯವನ್ನು ತೋರಿಸುತ್ತಿದ್ದಾರೆ. ಇದು ತಪ್ಪು, ಇದಕ್ಕೆ ನಾನು ಹೊಣೆಗಾರನಲ್ಲ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಾವಿರಾರು ಕೋಟಿ ವೆಚ್ಚದ ಕಾಮಗಾರಿಗಳಿಗೆ ಒಂದೇ ದಿನ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಬಿಜೆಪಿ ಪರಿವಾರದ ಸುಳ್ಳುಗಳಿಗೆ ಅಭಿವೃದ್ಧಿ ಮೂಲಕವೇ ಉತ್ತರ ನೀಡುತ್ತಿದ್ದೇವೆ. ಬಿಜೆಪಿ ಕನ್ನಡಕದ ಗಾಜುಗಳು ಅವರ ಅಧಿಕಾರಾವಧಿಯ ಕಲೆಗಳಿಂದ ಕೂಡಿದೆ. ಅದಕ್ಕೇ ಅವರು ನೋಡುವ ಕಡೆಯಲ್ಲೆಲ್ಲಾ ಕಲೆಗಳೇ ಕಾಣುತ್ತಿವೆ. ಬಿಜೆಪಿ ತನ್ನ ಕನ್ನಡಕ ಕ್ಲೀನ್ ಮಾಡಿಕೊಂಡರೆ ನಮ್ಮ ಸರ್ಕಾರದ ಅಭಿವೃದ್ಧಿ ಕಾಣುತ್ತದೆ.

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಅಭಿವೃದ್ಧಿ ಮತ್ತು ಪ್ರಗತಿಗೆ ನಮ್ಮ ಸರ್ಕಾರ ನಿರಂತರವಾಗಿ ಅನುದಾನಗಳನ್ನು ನೀಡಿ, ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡುತ್ತಿದೆ. ಚುನಾವಣೆ ವೇಳೆ ನಾವು ಕೊಟ್ಟ ಭರವಸೆಗಳನ್ನೆಲ್ಲಾ ಈಡೇರಿಸುತ್ತಲೇ ಇದ್ದೇವೆ. ಅಧಿಕಾರಕ್ಕೆ ಬಂದ ಬಳಿಕ ಮೊದಲ ಕ್ಯಾಬಿನೆಟ್ ನಲ್ಲೇ ಗ್ಯಾರಂಟಿಗಳನ್ನು ಜಾರಿ ಮಾಡಿ ಇದಕ್ಕಾಗಿ 80 ಸಾವಿರ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಿದ್ದೇವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಇಂದು ನಡೆದ ರಾಜ್ಯ ಸರ್ಕಾರದ ಸಾಧನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಮಾತು

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು