ಬಿಗ್​ಬಾಸ್- ಸೀಸನ್12 ರ ಆರಂಭ ಯಾವಾಗ ? ದಿನಾಂಕ ರಿವೀಲ್ ಮಾಡಿದ ಕಿಚ್ಚ !

52ನೇ ವಸಂತಕ್ಕೆ ಕಾಲಿಟ್ಟಿರುವ ಸುದೀಪ್ ಅವರು ಒಂದಿನ ಮೊದಲೇ ಬರ್ತ್​ಡೇ ಸೆಲೆಬ್ರೆಷನ್ ಮಾಡಿದ್ದಾರೆ. ಅದರಂತೆ ಸುದೀಪ್ ನಡೆಸಿಕೊಡುವಂಥ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಬಿಗ್‌ ಬಾಸ್‌ ತನ್ನ 12ನೇ ಸೀಸನ್‌ಗೆ ರೆಡಿಯಾಗಿದೆ. ಈ ಕುರಿತು ಕಿಚ್ಚ, ದಿನಾಂಕ ಕೂಡ ರಿವೀಲ್ ಮಾಡಿದ್ದಾರೆ.

ಸ್ಯಾಂಡಲ್​ವುಡ್​ ಬಾದಷಾ, ವೀರ ಮದಕರಿ ಕಿಚ್ಚ ಸುದೀಪ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮಾಚರಣೆ. 52ನೇ ವಸಂತಕ್ಕೆ ಕಾಲಿಟ್ಟಿರುವ ಸುದೀಪ್ ಅವರು ಒಂದಿನ ಮೊದಲೇ ಬರ್ತ್​ಡೇ ಸೆಲೆಬ್ರೆಷನ್ ಮಾಡಿದ್ದಾರೆ. ಅದರಂತೆ ಕಿಚ್ಚ ಸುದೀಪ್ ನಡೆಸಿಕೊಡುವಂಥ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಬಿಗ್‌ ಬಾಸ್‌ ತನ್ನ 12ನೇ ಸೀಸನ್‌ಗೆ ರೆಡಿಯಾಗಿದೆ. ಈ ಕುರಿತು ಕಿಚ್ಚ, ದಿನಾಂಕ ಕೂಡ ರಿವೀಲ್ ಮಾಡಿದ್ದಾರೆ.

ಕನ್ನಡದ ಬಿಗ್​ಬಾಸ್- 12 ಯಾವಾಗ ಆರಂಭವಾಗುತ್ತದೆ ಎಂದು ಅಭಿಮಾನಿಗಳು ಕುತೂಹಲದಿಂದ ಇದ್ದಾರೆ. ಈ ಸೀಸನ್ ಯಾವಾಗ ಶುರುವಾಗುತ್ತೆಂದು, ಈ ಬಗ್ಗೆ ಅಪ್​ಡೇಟ್ಸ್​ ಯಾವಾಗ ಸಿಗುತ್ತವೆ ಎನ್ನುವುದು ಪ್ರೇಕ್ಷಕರಲ್ಲಿ ಕೌತುಕ ಹೆಚ್ಚಾಗುತ್ತಿದೆ. ಸೀಸನ್​ 12ಕ್ಕೆ ಸುದೀಪ್ ನಿರೂಪಣೆ ಮಾಡಲ್ಲ ಎಂದು ಈ ಮೊದಲು ಹೇಳಲಾಗಿತ್ತು. ಆದರೆ ಸುದೀಪ್ ಅವರೇ ನಿರೂಪಣೆ ಮಾಡೋದು ಕನ್​ಫರ್ಮ್ ಆಗೋಗಿದೆ. ಜೊತೆಗೆ ಮೊನ್ನೆ ಮೊನ್ನೆ ಬಿಗ್​ಬಾಸ್​- 12ರ ಲೋಗೋ ಕೂಡ ರಿಲೀಸ್ ಮಾಡಲಾಗಿದೆ.

ಮೈಸೂರಿನಲ್ಲಿ ನಿರ್ಮಾಪಕ ಸಂದೇಶ್‌ ನಾಗರಾಜ್‌ ಅವರ ಬರ್ತ್​ಡೇ ಸೆಲೆಬ್ರೆಷನ್​ ಆಯೋಜನೆ ಮಾಡಲಾಗಿತ್ತು. ವಿಶ್ ಮಾಡಲು ಆಗಮಿಸಿದ್ದ ಕಿಚ್ಚ ಇದೇ ವೇಳೆ ಬಿಗ್​​ಬಾಸ್​ ಬಗ್ಗೆ ದೊಡ್ಡ ಅಪ್​ಡೇಟ್ ಕೊಟ್ಟಿದ್ದಾರೆ. ಕಿಚ್ಚನನ್ನ ನೋಡುತ್ತಿದ್ದಂತೆ ಫ್ಯಾನ್ಸ್​ ಸಂತಸ ದುಪ್ಪಟ್ಟು ಆಗಿತ್ತು. ಇದೇ ವೇಳೆ ಅಭಿಮಾನಿಗಳಿಗೆ ಸಂದೇಶ ಕೊಟ್ಟ ಸುದೀಪ್ ಅತಿ ಶೀಘ್ರದಲ್ಲೇ ನಿಮ್ಮ ಮುಂದೆ ಬರುತ್ತೇನೆ ಎಂದು ಹೇಳಿದ್ದಾರೆ.

ಇದೇ ಸೆಪ್ಟೆಂಬರ್ 28 ರಿಂದ ಟಿವಿಯಲ್ಲಿ ನಿಮಗೆ ಸಿಗುತ್ತೇನೆ ಎಂದು ಕಿಚ್ಚ ಸುದೀಪ್ ಅವರು ಹೇಳಿದ್ದಾರೆ. ಇದರ ಅರ್ಥ ಬಿಗ್​ಬಾಸ್​- 12 ಇದೇ ಸೆಪ್ಟೆಂಬರ್ 28 ರಿಂದ ಆರಂಭವಾಗುವುದು ಪಕ್ಕಾ ಆದಂತೆ ಆಗಿದೆ. ಸುದೀಪ್ ಅವರೇ ಬಿಗ್​ಬಾಸ್​- 12 ಆರಂಭದ ದಿನಾಂಕವನ್ನು ರಿವೀಲ್ ಮಾಡಿದಂತೆ ಆಗಿದೆ. ಇನ್ನು ಕೇವಲ 26 ದಿನಗಳ ಬಳಿಕ ಕಿರುತೆರೆ ಮೇಲೆ ಕಿಚ್ಚ ಸುದೀಪ್​ ಅವರನ್ನು ನೋಡಬಹುದು.

ಇನ್ನು ಕಳೆದ ಸೀಸನ್​​, ಬಿಗ್​ಬಾಸ್​- 11ರಲ್ಲಿ ಹಳ್ಳಿ ಹುಡುಗ ಹನುಮಂತು ಮೊದಲ ಸ್ಥಾನದಲ್ಲಿ ಪ್ರಶಸ್ತಿ ಪಡೆದುಕೊಂಡರೇ, ತ್ರಿವಿಕ್ರಮ್ ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದ್ದರು. ಮನೆಯಲ್ಲಿ ಸಾಕಷ್ಟು ಟ್ವಿಸ್ಟ್​ ಟರ್ನ್ಸ್​, ಜಗಳ, ನಾಮಿನೇಷನ್, ಎಲಿಮಿನೆಷನ್, ಕಿಚ್ಚನ ಚಪ್ಪಾಳೆ, ಮನೆಯಲ್ಲಿನ ಆಟ ಎಲ್ಲವೂ ವೀಕ್ಷಕರನ್ನು ರಜಿಸಿದ್ದವು. ಅದರಂತೆ ಈ ಬಾರಿಯೂ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಕಂಟೇಸ್ಟೆಂಟ್​ಗಳು ಯಾರು ಯಾರು ಎನ್ನುವುದು ಇನ್ನು ನಿಗೂಢವಾಗಿದೆ.

Related Posts

ಹೊಸ ದಾಖಲೆಯೊಂದಿಗೆ ಉಳಿದವರು ಕಂಡಂತೆ ಸಿನಿಮಾಗೆ 12 ವರ್ಷ; ನೆನಪು ಹಂಚಿಕೊಂಡ ರಕ್ಷಿತ್ ಶೆಟ್ಟಿ

Ulidavaru Kandanathe: ಕನ್ನಡದ ಕಲ್ಟ್ ಸಿನಿಮಾಗಳಲ್ಲಿ ಒಂದು. ರಕ್ಷಿತ್ ಶೆಟ್ಟಿಯ ನಿರ್ದೇಶನ ಪ್ರತಿಭೆಯನ್ನು ಭಾರತೀಯ ಚಿತ್ರರಂಗಕ್ಕೆ ತೋರಿಸಿದ ಸಿನಿಮಾ ಅದು. ‘ಉಳಿದವರು ಕಂಡಂತೆ’ ಬಿಡುಗಡೆ ಆಗಿ ಇಂದಿಗೆ ಬರೋಬ್ಬರಿ 12 ವರ್ಷ. ರಕ್ಷಿತ್ ಶೆಟ್ಟಿ, ‘ಉಳಿದವರು ಕಂಡಂತೆ’ ಸಿನಿಮಾದ ಪೋಸ್ಟರ್ ಹಂಚಿಕೊಂಡಿದ್ದು,…

ಮತ್ತೊಮ್ಮೆ ಪವನ್ ಕಲ್ಯಾಣ್ ಮತ್ತು ಮಹೇಶ್ ಬಾಬು ಅಭಿಮಾನಿಗಳ ನಡುವೆ ಕಿರಿಕ್!

ಪವನ್ ಕಲ್ಯಾಣ್ ಮತ್ತು ಮಹೇಶ್ ಬಾಬು ಅಭಿಮಾನಿಗಳ ನಡುವೆ ಕಿರಿಕ್ ಶುರುವಾಗಿದೆ. ಇದಕ್ಕೆ ಕಾರಣ ಆಗಿರುವುದು ಪವನ್ ಕಲ್ಯಾಣ್ ಅವರ ಆಪ್ತ ನಿರ್ದೇಶಕರೊಬ್ಬರ ಟ್ವೀಟ್. ಬಿಡುಗಡೆ ಆಗಲಿರುವ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದ ನಿರ್ದೇಶಕ ಮಾಡಿರುವ ಟ್ವೀಟ್​​ನಿಂದಾಗಿ ಮಹೇಶ್ ಬಾಬು ಅಭಿಮಾನಿಗಳು…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು